• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಂಸತ್​ ಭವನ ಉದ್ಘಾಟನೆಗೆ ಹೋಗುತ್ತೇನೆ ಎಂದ ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ

Any Mind by Any Mind
May 25, 2023
in ರಾಜಕೀಯ
0
ಸಂಸತ್​ ಭವನ ಉದ್ಘಾಟನೆಗೆ ಹೋಗುತ್ತೇನೆ ಎಂದ ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ
Share on WhatsAppShare on FacebookShare on Telegram

ಬೆಂಗಳೂರು: ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹಾಜರಾಗುತ್ತಿದ್ದೇನೆ. ಅದು ದೇಶದ ಆಸ್ತಿ. ಯಾರೊಬ್ಬರ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ್ದು ಅದಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಹೇಳಿದರು.

ADVERTISEMENT

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಮಂತ್ರಿ ಹೆಚ್​​ಡಿಡಿ, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ ನಿಜ, ಆದರೆ ಅದು ಅವರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ ಎಂದರು.

ಆ ಭವ್ಯ ಕಟ್ಟಡ ದೇಶದ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ. ಅದು ದೇಶಕ್ಕೆ ಸೇರಿದ್ದು. ಅದು ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ. ಸಂಸತ್ ಭವನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಓರ್ವ ಮಾಜಿ ಪ್ರಧಾನಮಂತ್ರಿಯಾಗಿ, ದೇಶದ ಪ್ರಜೆಯಾಗಿ ಭಾಗಿಯಾಗುತ್ತಿದ್ದೇನೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಬಿಜೆಪಿಯನ್ನು ರಾಜಕೀಯವಾಗಿ ವಿರೋಧ ಮಾಡಲಿಕ್ಕೆ ನನ್ನಲ್ಲಿ ಅನೇಕ ಕಾರಣಗಳಿವೆ. ಆದರೆ, ಸಂಸತ್ ಭವನ ಉದ್ಘಾಟನೆ ವಿಷಯದಲ್ಲಿ ರಾಜಕೀಯ ತರುವುದು ನನಗೆ ಇಷ್ಟವಿಲ್ಲ. ನಾನು ಸಂಸತ್ತಿನ ಎರಡು ಸದನಗಳಿಗೆ ಆಯ್ಕೆಯಾಗಿದ್ದೇನೆ. ಅಲ್ಲಿ ಸಾಂವಿಧಾನಿಕ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ, ಈಗಲೂ ಸದಸ್ಯನಾಗಿದ್ದೇನೆ. ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಿದ್ದೇನೆ. ಹೀಗಾಗಿ ಸಂವಿಧಾನದ ವಿಷಯದಲ್ಲಿ ನಾನು ರಾಜಕೀಯ ತರಲಾರೆ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟಪಡಿಸಿದರು.

ಅನೇಕ ಪಕ್ಷಗಳು ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಓರ್ವ ಮಾಜಿ ಪ್ರಧಾನಿಯಾಗಿ ನೀವು ಹೋಗುತ್ತೀರಾ? ಇಲ್ಲವಾ? ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಹೌದು, ನಾನು ಸಂವಿಧಾನಕ್ಕೆ ಬದ್ಧನಾಗಿದ್ದೇನೆ. ಅದಕ್ಕಾಗಿ ಸಂಸತ್ ಭವನ ಉದ್ಘಾಟನೆಗೆ ಹೋಗುತ್ತೇನೆ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದು ಅವರು ನುಡಿದರು.

ಪಕ್ಷವನ್ನು ಉಳಿಸುತ್ತೇನೆ:

ಪಕ್ಷಕ್ಕಾಗಿ ನನ್ನ ಜೀವ ಸವೆಸಿದ್ದೇನೆ. ನಾನು ಬದುಕಿರುವಷ್ಟು ಕಾಲವೂ ಪಕ್ಷಕ್ಕಾಗಿಯೇ ಬದುಕುತ್ತೇನೆ. ನನ್ನ ಕೊನೆ ಉಸಿರು ಇರುವ ತನಕ ನಾನು ಪಕ್ಷಕ್ಕೇ ಮೀಸಲು ಎಂದು ಹೆಚ್.ಡಿ.ದೇವೇಗೌಡ ಅವರು ಭಾವುಕರಾಗಿ ನುಡಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸೋತಿದೆ ಎಂಬುದಕ್ಕೆ ನನಗೆ ಬಹಳ ನೋವಿದೆ. ಅದೇ ನೋವಿನಿಂದ ಕಾಲ ದೂಡಲು ಸಾಧ್ಯವೇ? ಪುಟಿದೆದ್ದು ಪಕ್ಷ ಕಟ್ಟಬೇಕು, ಅಧಿಕಾರಕ್ಕೆ ಬರಲು ಶ್ರಮಿಸಬೇಕು ಎಂದರು ಅವರು.ಸೋತಿದ್ದಕ್ಕೆ ಪ್ರಾಮಾಣಿಕವಾಗಿ ಕಾರಣಗಳನ್ನು ಹುಡುಕೋಣ. ಅವುಗಳಿಗೆ ಪರಿಹಾರಗಳನ್ನು ಕಂಡು ಹಿಡಿಯೋಣ. 1989ರಲ್ಲಿ ನಮ್ಮ ಪಕ್ಷ ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿತ್ತು. ಅದಾದ ಮೇಲೆ ಐದು ವರ್ಷಗಳ ನಂತರ ನಮ್ಮ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂತು. ನಾನೇ ಮುಖ್ಯಮಂತ್ರಿ ಆದೆ. ಆಮೇಲೆ ಪ್ರಧಾನಿಯೂ ಆದೆ. ಜನರ ಆಶೀರ್ವಾದದಿಂದ ಅದು ಸಾಧ್ಯವಾಯಿತು ಎಂದರು ಮಾಜಿ ಪ್ರಧಾನಿಗಳು.

ಸೋತಾಗ ನಿರಾಶೆ, ನೋವು ಸಹಜ. ನಾನು ಈ ಎಲ್ಲಾ ಹಂತಗಳನ್ನು ದಾಟಿಕೊಂಡು ಮುಂದೆ ಬಂದಿದ್ದೇನೆ. ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಈ ಪಕ್ಷವನ್ನು ಉಳಿಸುವ ಕೆಲಸ ನಾನು ಮಾಡಿಯೇ ಮಾಡುತ್ತೇನೆ ಎಂದು ಅವರು ಹೇಳಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ತಾಲೂಕು, ಜಿಲ್ಲಾ ಘಟಕಗಳ ಅಧ್ಯಕ್ಷರು ಸಭೆಯಲ್ಲಿ ಹಾಜರಿದ್ದರು.

Tags: HD Deve GowdaHD KumaraswamyJDSParliament HousePrime Minister Narendra Modiಜೆಡಿಎಸ್​ಪ್ರಧಾನಿ ನರೇಂದ್ರ ಮೋದಿಸಂಸತ್​ ಭವನಹೆಚ್​​ಡಿ ಕುಮಾರಸ್ವಾಮಿಹೆಚ್​ಡಿ ದೇವೇಗೌಡ
Previous Post

ಕಾಂಗ್ರೆಸ್​ ಅಳೆದು ತೂಗುವ ಹೊತ್ತಿಗೆ ಬೀಗ ಹಾಕಿದ ರಾಜ್ಯಪಾಲರು..!

Next Post

ಆಯುಧಪೂಜೆ ವೇಳೆ ಕೇಸರಿ ಹಾಕಿದ್ದ ಖಾಕಿಪಡೆ..! ಬಡ್ಡಿ ಸಮೇತ ಕೊಟ್ಟ ಡಿಸಿಎಂ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಆಯುಧಪೂಜೆ ವೇಳೆ ಕೇಸರಿ ಹಾಕಿದ್ದ ಖಾಕಿಪಡೆ..! ಬಡ್ಡಿ ಸಮೇತ ಕೊಟ್ಟ ಡಿಸಿಎಂ

ಆಯುಧಪೂಜೆ ವೇಳೆ ಕೇಸರಿ ಹಾಕಿದ್ದ ಖಾಕಿಪಡೆ..! ಬಡ್ಡಿ ಸಮೇತ ಕೊಟ್ಟ ಡಿಸಿಎಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada