ತಿರುವನಂತಪುರಂ: ಕೇರಳದ (Kerala Rains)ಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಗೆ ನಾಲ್ವರು ಬಲಿಯಾಗಿರುವ ಘಟನೆ ನಡೆದಿದೆ. ಅಲ್ಲದೇ, ಮುಂದಿನ ಕೆಲವು ದಿನ ಕೇರಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಲಪ್ಪುಳ, ಕೊಟ್ಟಾಯಂ ಮತ್ತು ಎರ್ನಾಕುಲಂ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ವರದಿಯಾಗಿದೆ.

ಬುಧವಾರ ಸಂಜೆ ಸುರಿದ ಭಾರೀ ಮಳೆಯ ನಂತರ ಎರ್ನಾಕುಲಂ ಜಿಲ್ಲೆಯ ಕೊಚ್ಚಿನ್ ಸಿಟಿ ಕಾರ್ಪೊರೇಷನ್‌ನ ಕೆಲವು ಭಾಗಗಳು ಜಲಾವೃತಗೊಂಡಿವೆ. ಮುಂದಿನ ಸೂಚನೆ ನೀಡುವವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕೆಎಸ್‌ಡಿಎಂಎ ಎಚ್ಚರಿಕೆ ನೀಡಿದೆ.










