• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಿಂದ 100 ಕಿ.ಮೀ ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ: ಸಚಿವ ವಿ.ಸೋಮಣ್ಣ

ಪ್ರತಿಧ್ವನಿ by ಪ್ರತಿಧ್ವನಿ
June 29, 2026
in Top Story, ಕರ್ನಾಟಕ, ರಾಜಕೀಯ
0
ಬೆಂಗಳೂರಿನಿಂದ 100 ಕಿ.ಮೀ ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ: ಸಚಿವ ವಿ.ಸೋಮಣ್ಣ
Share on WhatsAppShare on FacebookShare on Telegram

ರಾಮನಗರ: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ ಚತುಷ್ಪಥ ರೈಲ್ವೆ ಮಾರ್ಗಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಜೊತೆಗೆ ರಾಜಧಾನಿಯಿಂದ ಕರಾವಳಿ ಭಾಗದ ಮಂಗಳೂರಿಗೆ ಕೂಡ ಇದೇ ರೀತಿ ಚತುಷ್ಪಥ ಮಾರ್ಗ ಅಭಿವೃದ್ಧಿಯನ್ನೂ ಪರಿಗಣಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ADVERTISEMENT
Bidadi Township :ಮುಖ್ಯಮಂತ್ರಿ ಆಗಿರೋದು ನಾಲಾಯಕ್  #pratidhvani

ಚನ್ನಪಟ್ಟಣ ತಾಲೂಕಿನ ಎಲೆಕೇರಿ ಬಳಿ ನೂತನವಾಗಿ ನಿರ್ಮಿಸಿರುವ ರಸ್ತೆ ಮೇಲ್ಸೇತುವೆ ಉದ್ಘಾಟಿಸಿ ಮಾತನಾಡಿದ ಅವರು, ಇದಕ್ಕೂ ಮೊದಲು ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ ಅವರು ಕರ್ನಾಟಕದ ರೈಲ್ವೇ ಬೇಡಿಕೆಗಳನ್ನು ಸಮಾರಂಭದಲ್ಲಿ ಪ್ರಸ್ತಾಪಿಸಿದ್ದರು. ಇದರಲ್ಲಿ ಅವರು ಬೆಂಗಳೂರಿನಿಂದ ತುಮಕೂರು, ಮೈಸೂರು, ಗೌರಿಬಿದನೂರು ಮಾರ್ಗವಾಗಿ ಹಿಂದೂಪುರ ಮತ್ತು ಕೋಲಾರಕ್ಕೆ ಚತುಷ್ಪಥ ಹಳಿ ನಿರ್ಮಿಸಬೇಕು ಎಂದು ಕೋರಿದ್ದರು.

 ಈ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸೋಮಣ್ಣ, ಬೆಂಗಳೂರು-ತುಮಕೂರು ಚತುಷ್ಪಥ ಮಾರ್ಗದ ಸರ್ವೆ ಮುಗಿದಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆಗಳನ್ನು ಆರಂಭಿಸಲಾಗುವುದು. ಮುಂದಿನ ಒಂದೂವರೆ- ಎರಡು ವರ್ಷದಲ್ಲಿ ಕಾಮಗಾರಿ ಮುಗಿಸುವ ಉದ್ದೇಶ ಇದೆ. ಹಾಗೆಯೇ ಬೆಂಗಳೂರು- ಮೈಸೂರು ಚತುಷ್ಪಥ ನಿರ್ಮಾಣಕ್ಕೆ ಸಮೀಕ್ಷೆ ಮಾಡಲು ತೀರ್ಮಾನಿಸಲಾಗಿದೆ ಎಂದರು.

Krishna Byre Gowda on Energy Minister KJ George : ಕೆ.ಜೆ ಜಾರ್ಜ್ ಅವರನ್ನು ಕೊಂಡಾಡಿದ ಕೃಷ್ಣ ಬೈರೇಗೌಡ.!

ಎಂ‌.ಬಿ ಪಾಟೀಲರು ಪ್ರಸ್ತಾಪಿಸಿರುವ ಬೇಡಿಕೆಗಳು ಸರಿಯಾಗಿವೆ. ಅವರ ಕೋರಿಕೆಯಂತೆ ಬೆಂಗಳೂರು-ಕೋಲಾರ ನಡುವೆ ನೇರ ರೈಲು ಸಂಪರ್ಕ ಕಲ್ಪಿಸಲಾಗುವುದು. ಸದ್ಯಕ್ಕೆ ವೈಟ್ ಫೀಲ್ಡ್ ತನಕ ಇರುವ ನಾಲ್ಕು ಪಥದ ಮಾರ್ಗವನ್ನು ಮುಂದಕ್ಕೂ ಕೊಂಡೊಯ್ಯಲಾಗುವುದು. ಇದಕ್ಕೆ ಬೇಕಾದ ಭೂಸ್ವಾಧೀನವನ್ನು ಕೇಂದ್ರ ಸರ್ಕಾರವೇ ನಡೆಸುತ್ತದೆ ಎಂದು ಭರವಸೆ ನೀಡಿದ್ದಾರೆ.

Bidadi Township : ಸಾವಿರಾರು ಬಡ ರೈತರ ಜಮೀನಿನ್ನು ಹಾಳು ಮಾಡ್ತಿದ್ದಾರೆ.!  #pratidhvani

ಬೆಂಗಳೂರು-ಮಂಗಳೂರು ಚತುಷ್ಪಥ ಮಾರ್ಗ

ರಾಜಧಾನಿ ಬೆಂಗಳೂರಿನಿಂದ ಕರಾವಳಿಯ ಮಂಗಳೂರಿಗೆ ತ್ವರಿತ ರೈಲು ಸಂಚಾರ ವ್ಯವಸ್ಥೆ ಆಗಬೇಕಿದೆ. ಇದಕ್ಕಾಗಿ ಸಕಲೇಶಪುರ-ಗುಂಡ್ಯ ನಡುವೆ ಸಮಾನಾಂತರವಾಗಿ ರಸ್ತೆ ಮತ್ತು ರೈಲು ಮಾರ್ಗ ಆಗಬೇಕೆಂದು ಪಾಟೀಲ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಸ್ಪಂದಿಸಿದ ಸೋಮಣ್ಣ ಅವರು ಇದೊಂದು ಉಪಯುಕ್ತ ಸಲಹೆಯಾಗಿದ್ದು, ಈ ಎರಡೂ ನಗರಗಳ ನಡುವೆ ಚತುಷ್ಪಥ ರೈಲು ಮಾರ್ಗ ಅಭಿವೃದ್ಧಿ ಅಗತ್ಯ ಇದೆ. ಬಂದರು ನಗರ ಮಂಗಳೂರಿಗೆ ಸಂಪರ್ಕ ಮಾಡುವುದರಿಂದ ಅನೇಕ ಪ್ರಯೋಜನಗಳು ಆಗಲಿವೆ. ಇದು ಕೂಡ ನಮ್ಮ ಆದ್ಯತೆಯಾಗಿದೆ ಎಂದು ಸೋಮಣ್ಣ ವಿವರಿಸಿದ್ದಾರೆ.

CM DK Shivakumar : ರಾಜೀವ್ ಗಾಂಧಿ ವಿವಿ ಆರೋಗ್ಯ ಕ್ಷೇತ್ರಕ್ಕೆ ವೈದ್ಯರ ಕೊಡುಗೆ ನೀಡುತ್ತಿದೆ..! #pratidhvani

ತುಮಕೂರು- ಚಿತ್ರದುರ್ಗ- ದಾವಣಗೆರೆ ಮಾರ್ಗದಲ್ಲಿ ಭರದಿಂದ ಕಾಮಗಾರಿ ನಡೆಯುತ್ತಿದೆ. ಈಗ ಏಕಪಥವಾಗಿರುವ ಈ ಮಾರ್ಗವನ್ನು ಜೋಡಿಹಳಿ ಮಾಡಬೇಕು ಎಂದು ಪಾಟೀಲರು ಬೇಡಿಕೆ ಇಟ್ಟಿದ್ದಾರೆ. ಇದನ್ನು ಕೂಡ ಪರಿಗಣಿಸಲಾಗುವುದು ಎಂದರು.

 

Previous Post

ಹೊಂಬಾಳೆ ಫಿಲ್ಮ್ಸ್‌ಗೆ ಕೈ ಜೋಡಿಸಿದ ತಮಿಳು ಸ್ಟಾರ್‌ ಸೂರ್ಯ: ಕನ್ನಡ ನಿರ್ಮಾಣ ಸಂಸ್ಥೆ ಜೊತೆ ಜೈ ಅಂದ ಕಾಲಿವುಡ್‌ ಸ್ಟಾರ್

Next Post

ರಾಮ ಮಂದಿರ ದೇಣಿಗೆ ದುರ್ಬಳಕೆ ಪ್ರಕರಣ: ಎಂಟು ಮಂದಿ ಆರೋಪಿಗಳಿಗೆ ಜೈಲು

Related Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್
Top Story

ಸಂಕ್ರಾಂತಿಗೆ ಬಿಲ್ಲ ರಂಗ ಬಾಷ ರಿಲೀಸ್? ನಿರ್ಮಾಪಕಿ ರೀಟ್ವೀಟ್‌ಗೆ ಕಿಚ್ಚನ ಫ್ಯಾನ್ಸ್‌ ಫುಲ್‌ ಖುಷ್…‌

by ಪ್ರತಿಧ್ವನಿ
June 29, 2026
0

ಕಿಚ್ಚ ಸುದೀಪ್‌ ಮಾರ್ಕ್‌ ಸಿನಿಮಾ ನಂತರ ಇದೀಗ ಬಿಲ್ಲ ರಂಗ ಬಾಷ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಸದ್ಯ ಆ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲೆ ಒಂದಷ್ಟು...

Read moreDetails
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಜಗತ್ತಿನಾದ್ಯಂತ ಭೂಕಂಪಗಳ ಸರಣಿ; ಭಾರತಕ್ಕೂ ಇದೆಯೇ ಅಪಾಯ? ತಜ್ಞರು ಹೇಳಿದ್ದೇನು

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಆರ್‌ಎಸ್‌ಎಸ್ ವಿವಾದದಲ್ಲಿ ಪ್ರಿಯಾಂಕ್ ಖರ್ಗೆ ಸಂಕಷ್ಟ; ನ್ಯಾಯಾಲಯದಿಂದ ಸಮನ್ಸ್

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

June 29, 2026
ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

June 29, 2026
Next Post
ರಾಮ ಮಂದಿರ ದೇಣಿಗೆ ದುರ್ಬಳಕೆ ಪ್ರಕರಣ: ಎಂಟು ಮಂದಿ ಆರೋಪಿಗಳಿಗೆ ಜೈಲು

ರಾಮ ಮಂದಿರ ದೇಣಿಗೆ ದುರ್ಬಳಕೆ ಪ್ರಕರಣ: ಎಂಟು ಮಂದಿ ಆರೋಪಿಗಳಿಗೆ ಜೈಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada