ದೆಹಲಿಯ ಜಹಾಂಗೀರ್ಪುರದಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ನಡೆದ ಹಿಂಸಾಚಾರದಲ್ಲಿ ಒಟ್ಟು 14 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಮೆರವಣಿಗೆ ಎರಡು ಕೋಮುಗಳ ನಡುವೆ ಘರ್ಷಣೆ ಉಂಟಾಗಿದ್ದು ಈ ವೇಳೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಕಿಡಿಗೇಡಿಗಳು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಹಿಂಸಾಚಾರದ ವೇಳೆ ಪೊಲೀಸ್ ಸಬ್ಇನ್ಸ್ಪೆಕ್ಟರ್ಗೆ ಗುಂಡು ತಗುಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈಗಾಗಲೇ ಆರೋಪಿಗಳ ವಿರುದ್ದ ಐಪಿಸಿ ಸೆಕ್ಷನ್ 307(ಕೊಲೆ ಯತ್ನ), 120ಬಿ, 147(ಗಲಭೆ) ಪ್ರಕರಣಗಳನ್ನು ದಾಖಲಿಸಲಾಗಿದೆ. ಘಟನೆಯಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಒಬ್ಬ ನಾಗರೀಕನಿಗೆ ಗಾಯವಾಗಿದೆ. ಅವರಿಗೆ ಸ್ಥಳೀಯ ಆಸ್ಪತ್ರಯೆಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ ಎಂದಿ ಡಿಸಿಪಿ ಉಷಾ ರಂಗ್ನಾನಿ ಹೇಳಿದ್ದಾರೆ.