ಬೆಂಗಳೂರು : ಶಾಲಾ ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಎಲ್ಲಾ ವರ್ಗದ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್ ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಬಸ್ ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸಭೆ ನಿರ್ಧರಿಸಿದೆ. ಜೂನ್ 11 ರಂದು “ಶಕ್ತಿ” ಯೋಜನೆಗೆ ಚಾಲನೆ ನೀಡಲಿದ್ದು, ಶೇ. 94 ರಷ್ಟು ಮಹಿಳಾ ಪ್ರಯಾಣಿಕರು ಯೋಜನೆಯ ಲಾಭ ಪಡೆಯಲಿದ್ದಾರೆ.


ಪುರುಷ ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್ ಗಳಲ್ಲಿ ಶೇ. 50 ರಷ್ಟು ಸೀಟುಗಳನ್ನು ಪುರುಷರಿಗಾಗಿ ಮೀಸಲಿಡಲಾಗುತ್ತದೆ. ಶಿಕ್ಷಣ, ಉದ್ಯೋಗ ಹೀಗೆ ಜವಾಬ್ದಾರಿ ನಿರ್ವಹಣೆಗಾಗಿ ನಿತ್ಯ ಪ್ರಯಾಣ ಕೈಗೊಳ್ಳುವ ನಾಡಿನ ಮಹಿಳೆಯರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
