ನಾಳೆಯಿಂದ ರಾಜ್ಯದ ಮಹಿಳೆಯರು ಉಚಿತವಾಗಿ ಸಾರಿಗೆ ಪ್ರಯಾಣ ಮಾಡಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಸುತ್ತೂರು ಹೆಲಿಪ್ಯಾಡ್ನಲ್ಲಿ ಮಾತನಾಡಿದ ಅವರು, ರಾಜ್ಯದ ಮಹಿಳೆಯರು ಎಸಿ, ವೋಲ್ವೋ ಬಸ್ ಬಿಟ್ಟು ಮಿಕ್ಕೆಲ್ಲ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದಿದ್ದಾರೆ.
![](https://pratidhvani.com/wp-content/uploads/2023/06/pic-5-1-1024x768.jpg)
ನಾಳೆ ಮಧ್ಯಾಹ್ನ 1 ಗಂಟೆಯಿಂದ ಯೋಜನೆ ಚಾಲನೆ ಆಗುವುದು. ಈ ಸಂದರ್ಭದಲ್ಲಿ ವಿಧಾನಸೌಧದ ಬಳಿ ನಾನು, ಡಿಸಿಎಂ ಹಾಗೂ ಸಾರಿಗೆ ಮಂತ್ರಿ ಯೋಜನೆ ಜಾರಿ ಮಾಡುತ್ತೇವೆ ಹಾಗೂ ಜಿಲ್ಲಾ ಕೇಂದ್ರದಲ್ಲಿ ಏಕಕಾಲಕ್ಕೆ ಜಾರಿಯಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಉಂಟಾಗಿರುವ ಆತಂಕದ ಬಗ್ಗೆಯೂ ಇದೇ ವೇಳೆ ಮಾತನಾಡಿದ ಅವರು, ಸೋಮವಾರ ಕುಡಿಯುವ ನೀರಿನ ಸಮಸ್ಯೆ ಸಂಬಂಧ ಸಭೆ ಕರೆದಿದ್ದೇನೆ. ಮಳೆ ಸಮಸ್ಯೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ರು.