ಬೆಂಗಳೂರು: ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ 200ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ. ಇದರ ಹಿಂದಿರುವ ಉದ್ದೇಶ ಏನು ಗೊತ್ತೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸುನೀಲ್ ಕುಮಾರ್, ಎಸ್ಕಾಂಗಳನ್ನು ಖಾಸಗಿಕರಣ ಮಾಡುವುದೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಅಂತಿಮ ಗುರಿ. ಉಚಿತ ವಿದ್ಯುತ್ ನಿಂದ ಎಸ್ಕಾಂಗಳ ಮೇಲೆ ಇನ್ನಷ್ಟು ಹೊರೆಯಾಗುತ್ತದೆ. ಆಗ ನಷ್ಟದಲ್ಲಿರುವ ಎಸ್ಕಾಂಗಳನ್ನು ಖಾಸಗಿಕರಣ ಮಾಡುವ ಸಂಚು ಈ ಘೋಷಣೆಯ ಹಿಂದೆ ಇದೆ ಎಂದು ಆರೋಪಿಸಿದ್ದಾರೆ.
ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ ೨೦೦ ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ. ಇದರ ಹಿಂದಿರುವ ಉದ್ದೇಶ ಏನು ಗೊತ್ತೆ ? (1/4) pic.twitter.com/CdpmVFAeMj
— Sunil Kumar Karkala (@karkalasunil) January 13, 2023
ತಾವು ಮುಖ್ಯಮಂತ್ರಿಯಾಗಿದ್ದಾಗ ಕತ್ತಲೆಯಲ್ಲಿ ಬಜೆಟ್ ಓದಿದ್ದನ್ನು ಸಿದ್ದರಾಮಯ್ಯ ಮರೆತಿರಬೇಕು. ನಿಮ್ಮ ಕಾಲದಲ್ಲಿ ಇಂಧನ ಇಲಾಖೆ ಹೇಗೆ ಕಾರ್ಯ ನಡೆಸಿತ್ತು ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ. ನೀವು ಎಸ್ಕಾಂಗಳನ್ನು ನಷ್ಟಕ್ಕೆ ದೂಡಿದ್ದಿರಿ ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ೯೦೦೦ ಕೋಟಿ ರೂ.ನ್ನು ಎಸ್ಕಾಂಗಳಿಗೆ ನೀಡಿ ನೀವು ಮಾಡಿದ್ದ ಆಡಳಿತ ವೈಫಲ್ಯ ಸರಿಪಡಿಸಿದ್ದೇವೆ. ಮತಕ್ಕಾಗಿ ಇಂಧನ ಇಲಾಖೆ ಮಾರಾಟ ಮಾಡಬೇಡಿ ಎಂದು ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ.
ತಾವು ಮುಖ್ಯಮಂತ್ರಿಯಾಗಿದ್ದಾಗ ಕತ್ತಲೆಯಲ್ಲಿ ಬಜೆಟ್ ಓದಿದ್ದನ್ನು ಸಿದ್ದರಾಮಯ್ಯ ಮರೆತಿರಬೇಕು. ನಿಮ್ಮ ಕಾಲದಲ್ಲಿ ಇಂಧನ ಇಲಾಖೆ ಹೇಗೆ ಕಾರ್ಯ ನಡೆಸಿತ್ತು ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ. ನೀವು ಎಸ್ಕಾಂಗಳನ್ನು ನಷ್ಟಕ್ಕೆ ದೂಡಿದ್ದಿರಿ.(3/4)
— Sunil Kumar Karkala (@karkalasunil) January 13, 2023