• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಉಕ್ರೇನ್ ನಿಂದ ಹಿಂದಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯದ ಮೆಡಿಕಲ್ ಕಾಲೇಜಿನಿಂದ ಉಚಿತ ಅವಕಾಶ : ಸಚಿವ ಸುಧಾಕರ್

ಪ್ರತಿಧ್ವನಿ by ಪ್ರತಿಧ್ವನಿ
March 21, 2022
in ಇದೀಗ
0
ಉಕ್ರೇನ್ ನಿಂದ ಹಿಂದಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯದ ಮೆಡಿಕಲ್ ಕಾಲೇಜಿನಿಂದ ಉಚಿತ ಅವಕಾಶ : ಸಚಿವ ಸುಧಾಕರ್
Share on WhatsAppShare on FacebookShare on Telegram

ಯುದ್ಧಪೀಡಿತ ಉಕ್ರೇನ್ ನಿಂದ ಹಿಂದಿರುಗಿದ ವೈದ್ಯಕೀಯ ವಿದ್ಯಾರ್ಥಿಗಳ ಕಲಿಕೆ ಮುಂದುವರೆಸಲು, ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲೇ ವ್ಯವಸ್ಥೆ ಮಾಡಲಾಗುವುದು ಎಂದು ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಸೋಮವಾರ ಕೈಗೊಂಡಿದೆ.

ADVERTISEMENT

ಇಂದು ವಿಧಾನಸೌಧದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಮಾತನಾಡಿದ ಅವರು, ಉಕ್ರೇನ್ ಹಾಗೂ ರಷ್ಯಾ ನಡುವೆ ನಿರಂತರವಾಗಿ ಯುದ್ಧ ನಡೆಯುತ್ತಿದೆ. ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 700ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಅವರ ಶೈಕ್ಷಣಿಕ ಭವಿಷ್ಯ ರೂಪಿಸುವ ಬಗ್ಗೆ ಅವರೊಂದಿಗೆ ಚರ್ಚಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದರು. ಅದರಂತೆ ಚರ್ಚೆ ನಡೆಸಿದ್ದು, ತಾತ್ಕಾಲಿಕವಾಗಿ ಒಂದು ಅಭಿಪ್ರಾಯಕ್ಕೆ ಬರಲಾಗಿದೆ ಎಂದು ವಿವರಿಸಿದರು.

ವಿದ್ಯಾಭ್ಯಾಸ ನಿಂತು ಹೋಗದೆ ಮುಂದುವರಿಯಬೇಕು. ರಾಜ್ಯಕ್ಕೆ ಆಗಮಿಸಿರುವ ವಿದ್ಯಾರ್ಥಿಗಳ ಪೈಕಿ ಫಸ್ಟ್ ಇಯರ್ ನಿಂದ ಫೈನಲ್ ಇಯರ್ ಎಂಬಿಬಿಎಸ್ ವಿದ್ಯಾರ್ಥಿಗಳಿದ್ದಾರೆ.. ರಾಜ್ಯದಲ್ಲಿ 60 ಮೆಡಿಕಲ್ ಕಾಲೇಜುಗಳಿವೆ. ಈ ವಿದ್ಯಾರ್ಥಿಗಳು ಈ ಕಾಲೇಜುಗಳಲ್ಲಿ ತಮ್ಮ ವ್ಯಾಸಂಗವನ್ನು ಆಯಾ ವರ್ಷದಲ್ಲೇ ಮುಂದುವರಿಸುವಂತೆ ಕ್ರಮ ವಹಿಸಲು ತೀರ್ಮಾನಿಸಲಾಗಿದೆ. ಈಗ ನಡೆಯುತ್ತಿರುವ ತರಬೇತಿಯನ್ನೇ ಮುಂದುವರಿಸಲಾಗುವುದು ಎಂದು ತಿಳಿಸಿದರು.

ಆದರೆ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ನೋಂದಣಿ ಮಾಡಲಾಗುವುದಿಲ್ಲ. ಕಲಿಕೆ ಮುಂದುವರಿಸಲು ಅವಕಾಶ ನೀಡಲಾಗುತ್ತದೆ. ಸರ್ಕಾರವೇ ಅವರಿಗೆ ಕಾಲೇಜು ಯಾವುದು ಅನ್ನುವುದನ್ನು ಆಯ್ಕೆ ಮಾಡುತ್ತದೆ. ಅವರು ಇರುವ ವಿಳಾಸದ ಆಧಾರದಲ್ಲಿ ಸನಿಹದ ವೈದ್ಯಕೀಯ ಕಾಲೇಜುಗಳನ್ನು ಆಯ್ಕೆ ಮಾಡಿ ಕೊಡಲಾಗುತ್ತದೆ ಎಂದರು.

ಕೇಂದ್ರ ಸರಕಾರದ ಸಹಯೋಗದೊಂದಿಗೆ ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಐದು ಸದಸ್ಯರ ಸಮಿತಿ ರಚನೆ ಆಗಲಿದೆ ಎಂದು ಇದೇ ವೇಳೆ ತಿಳಿಸಿದರು. ಉಕ್ರೇನ್ ನಿಂದ ಹಿಂದಿರುಗಿದ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದು, ಎನ್ಎಂಸಿ ಹಾಗೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಬೇಡಿಕೆಗಳನ್ನು ಸಿದ್ಧಪಡಿಸುವ ಕೆಲಸವನ್ನು ಈ ಸಮಿತಿ ಮಾಡಲಿದೆ. ಈ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಹಾಗೂ ಕೇಂದ್ರ ಆರೋಗ್ಯ ಸಚಿವರ ಮುಂದೆ ಇಡಲಾಗುವುದು. ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ಕ್ರಮ ವಹಿಸುತ್ತಿದ್ದಾರೆ ಎಂದರು.

ಇದರ ಜೊತೆಗೆ ಸಿಎಂ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಅವರಿಗೆ ಯಾವ ರೀತಿ ನ್ಯಾಯ ಕೊಡಿಸಬೇಕು ಎಂಬ ಬಗ್ಗೆ ಚರ್ಚೆ ಮಾಡುತ್ತೇವೆ. ಇರುವ ಕಾನೂನಿನಡಿ ಇವರ ಶೈಕ್ಷಣಿಕ ಜವಾಬ್ದಾರಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

Tags: ಆರೋಗ್ಯ ಸಚಿವ ಸುಧಾಕರ್ಉಕ್ರೇನ್ಉಕ್ರೇನ್‌ಉಕ್ರೇನ್ - ರಷ್ಯಾಉಕ್ರೇನ್‌ ಅಧ್ಯಕ್ಷಉಕ್ರೇನ್ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕೀಉಕ್ರೇನ್ ಗಡಿ ದಾಟಿಉಕ್ರೇನ್ ಬಿಕ್ಕಟ್ಟುಉಕ್ರೇನ್ ಮೇಲೆ ರಷ್ಯಾ ದಾಳಿಉಕ್ರೇನ್-ರಷ್ಯಾಮೆಡಿಕಲ್ ಕಾಲೇಜುರಾಜ್ಯದ ಮೆಡಿಕಲ್ವೈದ್ಯಕೀಯ ವಿದ್ಯಾರ್ಥಿಸಚಿವ ಸುಧಾಕರ್
Previous Post

ಶಾಲೆ ಸಮೀಪ ಅಕ್ರಮ ಮದ್ಯ ಮಾರಾಟ : ದೂರು ನೀಡಿದ ಅಂಧ ವ್ಯಕ್ತಿಯನ್ನು ಥಳಿಸಿದ ಪೊಲೀಸರು

Next Post

ನೀಟ್ ಪದ್ಧತಿ ತಾರತಮ್ಯದಿಂದ ಕೂಡಿದ ಸಾಮಾಜಿಕ ನ್ಯಾಯ ವಿರೋಧಿ ನೀತಿ : ತಮಿಳುನಾಡು ಸಿಎಂ ಎಮ್.ಕೆ ಸ್ಟಾಲಿನ್

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ನೀಟ್ ಪದ್ಧತಿ ತಾರತಮ್ಯದಿಂದ ಕೂಡಿದ ಸಾಮಾಜಿಕ ನ್ಯಾಯ ವಿರೋಧಿ ನೀತಿ : ತಮಿಳುನಾಡು ಸಿಎಂ ಎಮ್.ಕೆ ಸ್ಟಾಲಿನ್

ನೀಟ್ ಪದ್ಧತಿ ತಾರತಮ್ಯದಿಂದ ಕೂಡಿದ ಸಾಮಾಜಿಕ ನ್ಯಾಯ ವಿರೋಧಿ ನೀತಿ : ತಮಿಳುನಾಡು ಸಿಎಂ ಎಮ್.ಕೆ ಸ್ಟಾಲಿನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada