ನವದೆಹಲಿ (Newdelhi): ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು (Narendra Modi) ಬ್ರಿಟನ್ ಪ್ರಧಾನಿ ರಿಷಿ ಸುನಕ್ (Rishi Sunak) ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ದೂರವಾಣಿ ಮೂಲಕ ಉಭಯ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಬಗ್ಗೆ ಮಾತುಕತೆ ನಡೆಸಿದ್ದು, ದ್ವಿಪಕ್ಷೀಯ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಿದ್ದೇನೆ’ ಎಂದು ಮೋದಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಬರೆದಿದ್ದಾರೆ.
ಉಭಯ ನಾಯಕರು ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಕಳೆದ ಭಾನುವಾರವೇ ಭಾರತ ಮತ್ತು ನಾಲ್ಕು ಯುರೋಪಿಯನ್ ರಾಷ್ಟ್ರಗಳ ನಡುವೆ ಮುಕ್ತ ವ್ಯಾಪಾರ ಮತ್ತು ಆರ್ಥಿಕ ಪಾಲುದಾರಿಕೆಗೆ ಸಹಿ ಹಾಕಲಾಗಿದೆ. ಈ ಒಪ್ಪಂದವನ್ನು ‘ದೊಡ್ಡ ಸಾಧನೆ’ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಬಣ್ಣಿಸಿದ್ದಾರೆ.
ವ್ಯಾಪಾರ, ಹೂಡಿಕೆ, ರಕ್ಷಣೆ, ಭದ್ರತೆ, ಉದಯೋನ್ಮುಖ ತಂತ್ರಜ್ಞಾನಗಳು ಮತ್ತು ಇತರವು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 2030ರ ಚೌಕಟ್ಟಿನ ಅಡಿಯಲ್ಲಿ ಆಗಿರುವ ಪ್ರಗತಿಯ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಪರಸ್ಪರ ಲಾಭದಾಯಕ ಮುಕ್ತ ವ್ಯಾಪಾರ ಒಪ್ಪಂದದ ಆರಂಭಿಕ ಅಂತಿಮಗೊಳಿಸುವಿಕೆಯ ಕಡೆಗೆ ಅವರು ಮಾಡಿದ ಪ್ರಗತಿಯನ್ನು ಧನಾತ್ಮಕವಾಗಿ ನಿರ್ಣಯಿಸಿದ್ದಾರೆ ಎನ್ನಲಾಗಿದೆ.
#India #freetradeagreement #narendramodi #rishisunak







