• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೊಸಬರ ಎಲ್ಟು ಮುತ್ತಾ ಟೈಟಲ್ ಪೋಸ್ಟರ್ ರಿಲೀಸ್ !ಎಲ್ಟು ಮುತ್ತಾ’ನಿಗೆ ಜೊತೆಯಾದ ಹೊಂಬಾಳೆಯ ಶೈಲಜಾ ವಿಜಯ್ ಕಿರಗಂದೂರು

ಪ್ರತಿಧ್ವನಿ by ಪ್ರತಿಧ್ವನಿ
April 7, 2024
in Top Story, ವಿಶೇಷ, ಸಿನಿಮಾ
0
ಹೊಸಬರ ಎಲ್ಟು ಮುತ್ತಾ ಟೈಟಲ್ ಪೋಸ್ಟರ್ ರಿಲೀಸ್ !ಎಲ್ಟು ಮುತ್ತಾ’ನಿಗೆ ಜೊತೆಯಾದ ಹೊಂಬಾಳೆಯ ಶೈಲಜಾ ವಿಜಯ್ ಕಿರಗಂದೂರು
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದಲ್ಲೀಗ ಯುವ ಪ್ರತಿಭೆಗಳ ಪರ್ವ ಆರಂಭವಾಗಿದೆ. ಹೊಸಬರು ಮಾಡುತ್ತಿರುವ ಸಿನಿಮಾ ಯಶಸ್ಸು ಕಾಣುತ್ತಿದೆ. ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ಸೆಟ್ಟೇರುತ್ತಿವೆ. ಇದೀಗ ಅಂಥದ್ದೇ ವಿಭಿನ್ನ ಟೈಟಲ್ ಮೂಲಕ ಗಮನ ಸೆಳೆಯುತ್ತಿದೆ ಎಲ್ಟು ಮುತ್ತಾ ಸಿನಿಮಾ. 

ADVERTISEMENT

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಹೈ5 ಸ್ಟುಡಿಯೋ ನಿರ್ಮಾಣ ಸಂಸ್ಥೆ ಉದ್ಘಾಟನೆ ಹಾಗೂ ಎಲ್ಟು ಮುತ್ತಾ ಸಿನಿಮಾದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹೊಂಬಾಳೆ ಸಂಸ್ಥೆಯ ಸಂಸ್ಥಾಪಕ ವಿಜಯ್ ಕಿರಗಂದೂರು ಪತ್ನಿ ಶೈಲಜಾ ವಿಜಯ್ ಕಿರಗಂದೂರು, ಸಂಗೀತ ಕಟ್ಟಿ, ಎಎಂಆರ್ ರಮೇಶ್ ಹೊಸಬರ ಕನಸಿಗೆ ಸಾಥ್ ಕೊಟ್ಟರು.

 ನಿರ್ದೇಶಕರಾದ ರಾ ಸೂರ್ಯ ಮಾತನಾಡಿ, ಇಡೀ ತಂಡ ನನ್ನ ಮೇಲೆ ಭರವಸೆ ಇಟ್ಟಿದೆ. ಆ ಭರವಸೆ, ನನ್ನ ಏನಾದರೂ ಮಾಡಲು ಫುಶ್ ಮಾಡುತ್ತಿದೆ. ಪ್ರತಿಯೊಬ್ಬರು ಒಂದು ದಿನ ಹೊಸಬರು ಆಗಿರುತ್ತಾರೆ. ಅವರು ನಂತರ ಹಳಬರು ಆಗುತ್ತಾರೆ. ಅದಕ್ಕೆ ಕಾರಣ ನಿಮ್ಮ ಪ್ರೋತ್ಸಾಹ, ಆಶೀರ್ವಾದ. ನಾವು ಈಗ ಹೊಸಬರು, ನಮ್ಮನು ಹಳಬರನಾಗಿ ಮಾಡಿ ,ಬೆಂಬಲ ನಮ್ಮ ಮೇಲೆ ಇರಲಿ. ಸಾವಿಗೆ ಡೋಲು ಬಡಿಯುವವರ ಕಥೆಯನ್ನು ಎತ್ತಿಕೊಂಡು ಸಿನಿಮಾ ಮಾಡಿದ್ದೇನೆ. ಇದು ಸತ್ಯ ಘಟನೆಯ ಆಧಾರಿತ ಸಿನಿಮಾ. ಅದನ್ನು ಫಿಕ್ಷನ್ ವೇನಲ್ಲಿ ಹೇಳಿದ್ದೇನೆ. ಸಿನಿಮಾದಲ್ಲಿ 4 ಹಾಡುಗಳಿವೆ. ಈಗಾಗಲೇ ಡಬ್ಬಿಂಗ್ ಮುಗಿದಿದೆ ಎಂದರು.

ಹೈಫ್ 5 ಸ್ಟುಡಿಯೋದ ಮೆಂಟರದ ಸತ್ಯ ಶ್ರೀನಿವಾಸನ್ ಮಾತನಾಡಿ, ಹೈಫ್ 5 ಸ್ಟುಡಿಯೋ ಅಂದರೆ  ಐದು  ಜನರ ಸಂಸ್ಥೆ. ಒಳ್ಳೆ ಕಂಟೆಂಟ್ ಸಿನಿಮಾಗಳನ್ನು ವಿಶ್ವದ ಎಲ್ಲಾ ಸಿನಿಮಾ ಪ್ರೇಮಿಗಳಿಗೆ ತಲುಪಿಸುವುದು. ಈ ನೆಲದ ಕಂಟೆಂಟ್ ನ್ನು ಎಲ್ಲೆಡೆ ಪಸರಿಸುವುದು ಈ ಸಂಸ್ಥೆಯ ಉದ್ದೇಶ ಎಂದರು. ನಾವು ಮೂರು ಕಥೆ ಕೇಳಿದವು. ಆದರೆ ಈ ಚಿತ್ರದ ಕಥೆ ಇಷ್ಟವಾಯ್ತು ಎಂದು ತಿಳಿಸಿದರು.

ಎಲ್ಟಾ ಮುತ್ತಾ ಸಿನಿಮಾ ಮೂಲಕ ಯುವ ಪ್ರತಿಭೆ ರಾ.ಸೂರ್ಯ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಒಂದಷ್ಟು ಕಿರುಚಿತ್ರ ನಿರ್ದೇಶನದ ಅನುಭವವನ್ನು ಇಟ್ಟುಕೊಂಡು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ವೈದ್ಯಕೀಯ ಹಿನ್ನೆಲೆಯುಳ್ಳ ಸೂರ್ಯ ಅವರಿಗೆ ಸಿನಿಮಾ ಮೇಲಿನ ಸೆಳೆತ ಅವರನ್ನು ಚಿತ್ರರಂಗಕ್ಕೆ ಕರೆದು ತಂದು ನಿಲ್ಲಿಸಿದೆ. ಎಲ್ಟು ಮುತ್ತಾ ಸಿನಿಮಾ ಮೂಲಕ ಯುವ ನಟ ಶೌರ್ಯ ಪ್ರತಾಪ್ ನಾಯಕನಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇವರಿಗೆ ನಾಯಕಿಯಾಗಿ ಪ್ರಿಯಾಂಕಾ ಮಾಲಲಿ ಸಾಥ್ ಕೊಟ್ಟಿದ್ದಾರೆ. ಕಾಕ್ರೋಚ್ ಸುಧಿ, ಯಮುನಾ ಶ್ರೀನಿಧಿ , ನವೀನ್ ಪಡಿಲ್ ತಾರಾಬಳಗದಲ್ಲಿದ್ದಾರೆ.

ನೈಜ ಘಟನೆಯಾಧಾರಿತ ಎಲ್ಟು ಮುತ್ತಾ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಮಡಿಕೇರಿಯ ನೆಲಜಿಯಲ್ಲಿ ಬಹುತೇಕ ಶೂಟಿಂಗ್ ಮಾಡಲಾಗಿದೆ.  ಉಳಿದಂತೆ ಬೆಂಗಳೂರು ಸುತ್ತಮುತ್ತ ಕೂಡ ಚಿತ್ರೀಕರಿಸಲಾಗಿದೆ. ಹೈ5 ಸ್ಟುಡಿಯೋಸ್ ಮೂಲಕ ನಿರ್ದೇಶಕ ರಾ ಸೂರ್ಯ, ನಾಯಕ ಶೌರ್ಯ ಪ್ರತಾಪ್, ಪ್ರಸನ್ನ ಕೇಶವ, ರುಹಾನ್ ಆರ್ಯ ಹಾಗೂ ಬಸವರಾಜೇಶ್ವರಿ ಭೂಮ್ರಡ್ಡಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಎಲ್ಟಾ ಮುತ್ತಾ ಅಂದರೆ ಚಿತ್ರದ ಎರಡು ಪಾತ್ರಗಳ ಹೆಸರು. ಶೌರ್ಯ ಪ್ರತಾಪ್ ನಾಯಕನಾಗಿ ಬಣ್ಣ ಹಚ್ಚುವುದರ ಜೊತೆಗೆ ಸಹ ನಿರ್ದೇಶಕರಾಗಿ ಹಾಗೂ ಸಹ ಬರಗಾರರನಾಗಿ ಸೂರ್ಯ ಅವರಿಗೆ ಜೊತೆಯಾಗಿ ನಿಂತಿದ್ದಾರೆ. ಪ್ರಸನ್ನ ಕೇಶವ ಸಂಗೀತ, ಮೆಯ್ಯಪ್ಪ ಭಾಸ್ಕರ್ ಛಾಯಾಗ್ರಹಣ, ಕೆ ಯೇಸು ಸಂಕಲನ, ಜ್ಞಾನತಿ ರಾಹುಲ್ ನೃತ್ಯ ಸಂಯೋಜನೆ ಚಿತ್ರಕ್ಕಿದೆ. ಅಜಿತ್ ಕೇಶವ, ರಾ ಸೂರ್ಯ ಹಾಗೂ ಶೌರ್ಯ ಪ್ರತಾಪ್ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ.

Tags: ಎಲ್ಟುಕನ್ನಡ ಸಿನಿಮಾವಿಜಯ್ ಕಿರಗಂದೂರ್ಹೊಂಬಾಳೆ ಫೀಲ್ಮ್ಸ್ಹೊಸ ತಂಡ
Previous Post

ಜೂನ್ ನಲ್ಲಿ ಇಂಡಿಯನ್-2 ದರ್ಬಾರ್…ಮತ್ತೆ ಮೋಡಿ ಮಾಡಲು ಬರ್ತಿದ್ದಾರೆ ಸೇನಾಪತಿ ಕಮಲ್ ಹಾಸನ್

Next Post

ಪೀರಿಯಡ್ಸ್ ಸಮಯದಲ್ಲಿ ಕಾಡುವ ಹೊಟ್ಟೆ ನೋವಿಗೆ ಇಲ್ಲಿದೆ ಸೂಪರ್ ಟಿಪ್ಸ್

Related Posts

ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ
Top Story

ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

by ಪ್ರತಿಧ್ವನಿ
August 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ( ಜಂತರ್‌ ಮಂತರ್‌ನಲ್ಲಿ ಮೊಳಗಿದ  ಪ್ರಕ್ಷುಬ್ಧ ಭಾರತದ ದನಿಗಳು- ಲೇಖನದ ಮುಂದುವರೆದ ಭಾಗ ) ಭಾರತದ ಸಂವಿಧಾನ...

Read moreDetails
ಕರ್ನಾಟಕದತ್ತ ಲೂಫ್ತಾನ್ಸಾ ಟೆಕ್ನಿಕ್‌ ಚಿತ್ತ: ಬೆಂಗಳೂರಿನಲ್ಲಿ ಘಟಕ ಸ್ಥಾಪನೆಗೆ ಆಸಕ್ತಿ

ಕರ್ನಾಟಕದತ್ತ ಲೂಫ್ತಾನ್ಸಾ ಟೆಕ್ನಿಕ್‌ ಚಿತ್ತ: ಬೆಂಗಳೂರಿನಲ್ಲಿ ಘಟಕ ಸ್ಥಾಪನೆಗೆ ಆಸಕ್ತಿ

August 12, 2026
ಮೋಹನ್ ಭಾಗವತ್ ಹೇಳಿಕೆ ರಾಜಕೀಯ ಚರ್ಚೆಗೆ ಗ್ರಾಸ: ಕಾಂಗ್ರೆಸ್‌ನಿಂದ ಪ್ರತಿಭಟನೆ

ಮೋಹನ್ ಭಾಗವತ್ ಹೇಳಿಕೆ ರಾಜಕೀಯ ಚರ್ಚೆಗೆ ಗ್ರಾಸ: ಕಾಂಗ್ರೆಸ್‌ನಿಂದ ಪ್ರತಿಭಟನೆ

August 12, 2026
BREAKING NEWS : ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಇಲಾಖೆ ಇಲ್ಲಿದೆ..!

ಶಿವಲಿಂಗೇಗೌಡಗೆ ಅಬಕಾರಿ, ಜಮೀರ್‌ಗೆ ವಸತಿ : ಖಾತೆ ಹಂಚಿಕೆಯಲ್ಲೂ ಸಿಎಂ ಡಿಕೆ ಶಿವಕುಮಾರ್ ದೂರದೃಷ್ಟಿಯ ನಡೆ ..

August 12, 2026
ಇನ್ಮುಂದೆ ರಾಜ್ಯಾದ್ಯಂತ ಗುಟ್ಕಾ, ಪಾನ್‌ ಮಸಾಲಾ  ಬ್ಯಾನ್‌ : ಹೇಳಿದ್ದನ್ನೆ ಮಾಡಿ ತೋರಿಸಿದ ಸಿಎಂ ಡಿಕೆಶಿ..

ಇನ್ಮುಂದೆ ರಾಜ್ಯಾದ್ಯಂತ ಗುಟ್ಕಾ, ಪಾನ್‌ ಮಸಾಲಾ ಬ್ಯಾನ್‌ : ಹೇಳಿದ್ದನ್ನೆ ಮಾಡಿ ತೋರಿಸಿದ ಸಿಎಂ ಡಿಕೆಶಿ..

August 12, 2026
Next Post
ಪೀರಿಯಡ್ಸ್ ಸಮಯದಲ್ಲಿ ಕಾಡುವ ಹೊಟ್ಟೆ ನೋವಿಗೆ ಇಲ್ಲಿದೆ ಸೂಪರ್ ಟಿಪ್ಸ್

ಪೀರಿಯಡ್ಸ್ ಸಮಯದಲ್ಲಿ ಕಾಡುವ ಹೊಟ್ಟೆ ನೋವಿಗೆ ಇಲ್ಲಿದೆ ಸೂಪರ್ ಟಿಪ್ಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada