ಲೋಕಸಭಾ ಚುನಾವಣೆಯಲ್ಲಿ (Parliment election) ಗೆದ್ದು ಕೇಂದ್ರ ಸಂಪುಟ ಸೇರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಚನ್ನಪಟ್ಟಣ (Chennapatna) ಕ್ಷೇತ್ರಕ್ಕೆ ರಾಜಿನಾಮೆ ನೀಡಲಿದ್ದಾರೆ.ನಾಳೆ ಮಧ್ಯಾಹ್ನ 12:30ಕ್ಕೆ ಸ್ಪೀಕರ್ ಯು.ಟಿ.ಖಾದರ್ (UT Khadar) ಭೇಟಿಗೆ ಸಮಯ ನಿಗದಿ ಮಾಡಲಾಗಿದೆ. ಇನ್ನು. ನಾಳೆ ತಮ್ಮ ಚನ್ನಪಟ್ಟಣ ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡೋ ಸಾಧ್ಯತೆ ದಟ್ಟವಾಗಿದೆ.

ಈ ಬೆನ್ನಲ್ಲೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸುರೇಶ್ (DK Suresh) ಸ್ಪರ್ಧೆ ಮಾಡಲ್ಲ ಎಂದು ಸಚಿವ ಚಲುವರಾಯಸ್ವಾಮಿ (Cheluvaraya swamy) ತಿಳಿಸಿದ್ದಾರೆ.ಡಿಸಿಎಂ ಶಿವಕುಮಾರ್ (Dom Shivakumar) ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಬಗ್ಗೆ ಆತ್ಮವಲೋಕನ ಸಭೆ ನಡೆಸಲಾಯ್ತು.
ಸಭೆ ಬಳಿಕ ಮಾತನಾಡಿದ ಸಚಿವರು ಸಮುದಾಯದ ಶಾಸಕರು, ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮುಂದುವರಿಯುವ ಬಗ್ಗೆ ನಿರ್ಧಾರ ಮಾಡಲಾಗಿದೆ. ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಮಾಡ್ತಾರೆ. ಸುರೇಶ್ ನಾನು ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದ್ರು.