• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 12, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

“ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ADVERTISEMENT

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೆಪಿಸಿಸಿ ಕಚೇರಿ ಬಳಿ ಗುರುವಾರ ಗಮನ ಸೆಳೆದಾಗ ಅವರು ಹೀಗೆ ಉತ್ತರಿಸಿದರು.

“ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಏನನ್ನೂ ಮುಳುಗಿಸಿಲ್ಲ. ಹೀಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ. ಕಳೆದ ವರ್ಷ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಅನ್ನು ನಾವು ಪುನರ್ ಪರಿಶೀಲಿಸಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೆವು. ಈ ಬಾರಿಯ ಬಜೆಟ್ ನಲ್ಲಿ 50 ಸಾವಿರ ಕೋಟಿಗೂ ಹೆಚ್ಚು ಹಣ ಮೀಸಲಿಟ್ಟಿದ್ದೇವೆ. ನಾವು ಮತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ. ಜನರ ಬದುಕಿನಲ್ಲಿ ಬದಲಾವಣೆ ತರಲು ಈ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬೆಲೆ ಏರಿಕೆಯಿಂದ ಜನರಿಗೆ ತೊಂದರೆಯಾಗಿತ್ತು. ಮುಂದಿನ ದಿನಗಳಲ್ಲಿ ಜನ ನಮಗೆ ಸ್ಪಂದಿಸಲಿದ್ದಾರೆ” ಎಂದು ತಿಳಿಸಿದರು.

ಹೆಚ್ಚಿನ ಮಳೆಗೆ ಪ್ರಾರ್ಥಿಸೋಣ:

ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸಿಆರ್ ಡಬ್ಲ್ಯೂಸಿ ಸಭೆ ತೀರ್ಮಾನದ ಬಗ್ಗೆ ಕೇಳಿದಾಗ, “ಇನ್ನು ನಿರೀಕ್ಷಿತ ಮಟ್ಟದಲ್ಲಿ ನೀರಿನ ಸಂಗ್ರಹವಾಗಿಲ್ಲ. ಈ ಬಗ್ಗೆ ನಾನು ಈಗಲೇ ಏನು ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನಷ್ಟು ಮಳೆ ಬೀಳಲಿ ಎಂದು ಎಲ್ಲರೂ ಪ್ರಾರ್ಥಿಸೋಣ” ಎಂದು ತಿಳಿಸಿದರು.

ನಾಳೆಯೂ ಸಭೆ ಮುಂದುವರಿಯಲಿದೆ:

ಇಂದಿನ ಎಐಸಿಸಿ ಸತ್ಯಶೋಧನಾ ಸಮಿತಿ ಸಭೆ ಬಗ್ಗೆ ಕೇಳಿದಾಗ, “ಲೋಕಸಭೆ ಚುನಾವಣೆ ಫಲಿತಾಂಶ ವಿಚಾರವಾಗಿ ಎಐಸಿಸಿ ಸತ್ಯಶೋಧನಾ ಸಮಿತಿ ಇಂದು ಶಾಸಕರು ಹಾಗೂ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದ್ದು, ನಾಳೆ ಪರಾಜಿತ ಅಭ್ಯರ್ಥಿಗಳು ಹಾಗೂ ಇತರ ನಾಯಕರ ಅಭಿಪ್ರಾಯ ಸಂಗ್ರಹಿಸಲಿದೆ. ನಂತರ ಈ ಸಮಿತಿಯು ಎಐಸಿಸಿಗೆ ತನ್ನ ವರದಿ ಸಲ್ಲಿಸಲಿದೆ” ಎಂದು ತಿಳಿಸಿದರು.

Tags: BJPCongress PartyDKSivakumarಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೀದರ್ | ತಿಂಗಳಾದರೂ ಪರಿಹಾರವಿಲ್ಲ, ಬಿತ್ತನೆಯೂ ಆಗಿಲ್ಲ

Next Post

ಲಂಚ ಸ್ವೀಕಾರ ; ಜಿಎಸ್‌ಟಿ ಹಿರಿಯ ಅಧಿಕಾರಿ ಬಂಧಿಸಿದ ಸಿಬಿಐ

Related Posts

The Controversy Surrounding the NICE Project: A Brief Overview
Top Story

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

by ಪ್ರತಿಧ್ವನಿ
September 29, 2026
0

ಬೆಂಗಳೂರು: ಮೂರು ದಶಕಗಳ ಹಿಂದೆ ರೂಪುಗೊಂಡ ನೈಸ್‌ (NICE) ರಸ್ತೆ ಯೋಜನೆ, ಕರ್ನಾಟಕದ (Karnataka) ಮೂಲಸೌಕರ್ಯ ಅಭಿವೃದ್ಧಿಯ ಇತಿಹಾಸದಲ್ಲೇ ಅತ್ಯಂತ ಚರ್ಚೆಗೆ ಈಡಾದ ಯೋಜನೆಗಳಲ್ಲಿ ಒಂದು. ಬೆಂಗಳೂರು...

Read moreDetails
Parents sell their one-month-old infant to buy gold jewelry and a smartphone

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Next Post
ತಹಶೀಲ್ದಾರ್‌ ಕಚೇರಿಯಲ್ಲಿ ಶಿರಸ್ತೇದಾರ್‌ಗೆ ಚಾಕು ಇರಿತ: ಇಬ್ಬರ ಬಂಧನ

ತಹಶೀಲ್ದಾರ್‌ ಕಚೇರಿಯಲ್ಲಿ ಶಿರಸ್ತೇದಾರ್‌ಗೆ ಚಾಕು ಇರಿತ: ಇಬ್ಬರ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada