• Home
  • About Us
  • ಕರ್ನಾಟಕ
Tuesday, December 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

25 ದಿನ ಪೂರೈಸಿದ ಸಂಭ್ರಮದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ

ಪ್ರತಿಧ್ವನಿ by ಪ್ರತಿಧ್ವನಿ
December 15, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಿಶೇಷ, ಸಿನಿಮಾ
0
25 ದಿನ ಪೂರೈಸಿದ ಸಂಭ್ರಮದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ
Share on WhatsAppShare on FacebookShare on Telegram

ADVERTISEMENT

ಸಧ್ಯದ ಬದಲಾದ ಕಾಲಘಟ್ಟದಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25 ದಿನಗಳನ್ನು ಪೂರೈಸುವುದೇ ಕನಸಿನ ಮಾತಾಗುತ್ತಿದೆ. ಇಂತಹ ವಾತಾವರಣದಲ್ಲಿ ಚಿತ್ರವೊಂದು ಯಶಸ್ವಿಯಾಗಿ 25 ದಿನಗಳ ಸಂಭ್ರಮಾಚರಣೆ ಮಾಡಿಕೊಳ್ಳುತ್ತಿದೆ. ವೆಡ್ಡಿಂಗ್ ಫೋಟೋಗ್ರಾಫರ್ ನೊಬ್ಬ ಪ್ರೀತಿಯ ಬಲೆಗೆ ಬೀಳುವ ತ್ರಿಕೋನ ಪ್ರೇಮ ಕಥಾಹಂದರವನ್ನು ‘ಫುಲ್ ಮೀಲ್ಸ್’ ಚಿತ್ರವು ನವೆಂಬರ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಇದೀಗ ಚಿತ್ರವು ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು, ನಾಲ್ಕನೆಯ ವಾರಕ್ಕೆ ಕಾಲಿಟ್ಟಿದೆ..

ನಟ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸಿರುವ , ಎನ್ ವಿನಾಯಕ ನಿರ್ದೇಶಿಸಿರುವ ‘ಫುಲ್ ಮೀಲ್ಸ್’ ಚಿತ್ರಕ್ಕೆ ಪ್ರೇಕ್ಷಕರಿಂದ ಫುಲ್ ಮಾರ್ಕ್ ಸಿಕ್ಕಿದ್ದು, ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಅವರುಗಳ ಅಭಿನಯ ಗಮನ ಸೆಳೆಯುವಂತಿದೆ.

ಅಲ್ಲೊಂದು ಮದುವೆ ಫಿಕ್ಸ್ ಆಗಿದೆ, ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಯುತ್ತಿದೆ. ಈ ನಡುವೆ ಮದುಮಗಳಿಗೆ ಫೋಟೋಗ್ರಾಫರ್ ಮೇಲೆಯೇ ಆಕರ್ಷಣೆ ಮೂಡುತ್ತದೆ. ಮುಂದೆ ಏನಾಗುತ್ತದೆ?’ ಎಂಬ ಕುತೂಹಲಕಾರಿ ಒನ್-ಲೈನ್‌ನೊಂದಿಗೆ ಪ್ರೇಕ್ಷಕರ ಮುಂದೆ ಬಂದಿರುವ ‘ಫುಲ್ ಮೀಲ್ಸ್’ ಚಿತ್ರವು, ಹಾಸ್ಯಭರಿತ ತ್ರಿಕೋನ ಪ್ರೇಮಕಥೆಯಾಗಿದೆ. ಎಲ್ಲ ವಯೋಮಾನದವರಿಗೆ ಸೂಕ್ತವಾದ ಈ ಫ್ಯಾಮಿಲಿ ಎಂಟರ್ಟೈನರ್, ಮಧ್ಯಮ ವರ್ಗದ ವೆಡ್ಡಿಂಗ್ ಫೋಟೋಗ್ರಾಫರ್‌ನ ಜೀವನ ಪಯಣ, ಕನಸುಗಳು ಮತ್ತು ಕುಟುಂಬದ ಮೌಲ್ಯಗಳನ್ನು ಸಹಜವಾಗಿ ತೆರೆದಿಡುವ ಎಂಗೇಜಿಂಗ್ ರೊಮ್ಯಾಂಟಿಕ್ ಕಾಮಿಡಿ ಚಿತ್ರವಾಗಿದೆ.

ಈ ಹಿಂದೆ ‘ಸಂಕಷ್ಟಕರ ಗಣಪತಿ’, ‘ಅಬ್ಬಬ್ಬ’, ‘ಫ್ಯಾಮಿಲಿ ಪ್ಯಾಕ್’ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದ ಲಿಖಿತ್ ಶೆಟ್ಟಿ ಅವರು ತಮ್ಮ ನಟನೆ, ಆ್ಯಕ್ಷನ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದು ಚಿತ್ರರಂಗದ ಭರವಸೆಯ ನಟನಾಗಿ ಮೊತ್ತಮ್ಮೆ ಗಮನ ಸೆಳೆದಿದ್ದಾರೆ.

ಇನ್ನು ಈ ಚಿತ್ರವನ್ನು ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ರವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಸಿನಿಮಾ. ಚೊಚ್ಚಲ ಚಿತ್ರದಲ್ಲೇ ಅವರು ಯಶಸ್ಸು ಕಂಡಿದ್ದಾರೆ. ಅವರ ಕೆಲಸಕ್ಕೆ ಚಿತ್ರರಂಗದಲ್ಲಿ ಉತ್ತಮ ಪ್ರಶಂಸೆ ಸಿಕ್ಕಿದೆ. ಪ್ರೇಕ್ಷಕರು ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ಆ ಮೂಲಕ ಅವರು ಭರವಸೆಯ ಯುವ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ.

ಚಿತ್ರದಲ್ಲಿ ರಂಗಾಯಣ ರಘು, ಸೂರಜ್‌ ಲೋಕ್ರೆ, ವಿಜಯ್‌ ಚಂಡೂರ್‌, ರವಿಶಂಕರ್‌ ಗೌಡ, ರಾಜೇಶ್‌ ನಟರಂಗ, ಸುಜಯ್‌ ಶಾಸ್ತ್ರಿ, ಚಂದ್ರಕಲಾ ಮೋಹನ್‌, ಹೊನ್ನವಳ್ಳಿ ಕೃಷ್ಣ, ರಮೇಶ್‌ ಪಂಡಿತ್‌, ಚೇತನ್‌ ದುರ್ಗ, ನಾಗೇಂದ್ರ ಅರಸ್‌, ಮೂಗು ಸುರೇಶ್‌, ಗಣೇಶ್ ರಾವ್, ಕೋಟೆ ಪ್ರಭಾಕರ್‌ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಗುರುಕಿರಣ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ, ಮನೋಹರ್ ಜೋಷಿ ಛಾಯಾಗ್ರಹಣ, ಹರೀಶ್ ಗೌಡ ಸಂಭಾಷಣೆ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅರ್ಜುನ್ ರಾಜ್ ಸಾಹಸ ನಿರ್ದೇಶನ, ಕವಿರಾಜ್ ಮತ್ತು ಪ್ರಮೋದ್ ಮರವಂತೆ ಸಾಹಿತ್ಯ ಚಿತ್ರಕ್ಕಿದೆ.

Tags: Arjun RajChandrakala MohanFull Meals Kannada MoviegurukiranHarish GowdaKavirajManohar JoshiMusiqpramodRajesh NatarangaRamesh PanditRangayana RaghuRavishankar GowdaVishwas Kashyap
Previous Post

ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ..!!

Next Post

BBK 12: ಧ್ರುವಂತ್ ಜೊತೆ ಸೀಕ್ರೆಟ್ ರೂಂ: ಕಣ್ಣೀರಿಟ್ಟ ರಕ್ಷಿತಾ ಶೆಟ್ಟಿ

Related Posts

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
0

ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು...

Read moreDetails

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

ರೇಣುಕಾಸ್ವಾಮಿ ಹತ್ಯೆ ಕೇಸ್: ಘಟನೆ ಸ್ಥಳಗಳ ಪರಿಶೀಲಿಸಿದ SPP

December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

December 16, 2025
Next Post
BBK 12: ಧ್ರುವಂತ್ ಜೊತೆ ಸೀಕ್ರೆಟ್ ರೂಂ: ಕಣ್ಣೀರಿಟ್ಟ ರಕ್ಷಿತಾ ಶೆಟ್ಟಿ

BBK 12: ಧ್ರುವಂತ್ ಜೊತೆ ಸೀಕ್ರೆಟ್ ರೂಂ: ಕಣ್ಣೀರಿಟ್ಟ ರಕ್ಷಿತಾ ಶೆಟ್ಟಿ

Recent News

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!