• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Full Meals: ಕ್ಯಾಸೆಟ್ ನಲ್ಲಿ ಹಾಡು ಬಿಡುಗಡೆ ಮಾಡಿದ ಫುಲ್ ಮೀಲ್ಸ್ ಚಿತ್ರತಂಡ..

ಪ್ರತಿಧ್ವನಿ by ಪ್ರತಿಧ್ವನಿ
September 16, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಒಂದು ಕಾಲದಲ್ಲಿ ಚಿತ್ರದ ಆಡಿಯೊ ಹಿಟ್ ಆಯಿತೊ ಇಲ್ಲವೋ ಎಂದು ನಿರ್ಧಾರವಾಗುತ್ತಿದ್ದದ್ದು ಎಷ್ಟು ಕ್ಯಾಸೆಟ್ ಗಳು ಮಾರಾಟವಾಯಿತು ಎಂಬುದರ ಆಧಾರದ ಮೇಲೆ. ಅದರೆ ಕಾಲ ಬದಲಾದಂತೆ ಕ್ಯಾಸೆಟ್ ಗಳನ್ನು ಬಹುತೇಕ ಎಲ್ಲರೂ ಮರೆತು ಹೋಗಿರುವ ಸಂದರ್ಭದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ ತಮ್ಮ ಚಿತ್ರದ ‘ವಾಹ್ ಏನೋ ಹವಾ’ ಹಾಡನ್ನು ಕ್ಯಾಸೆಟ್ ನಲ್ಲಿ ಬಿಡುಗಡೆ ಮಾಡುವ ಮೂಲಕ ಎಲ್ಲರನ್ನೂ ಹಳೆಯ ನೆನಪುಗಳಿಗೆ ದೂಡುವುದರೊಂದಿಗೆ ತಮ್ಮ ಕ್ರಿಯಾತ್ಮಕ ಪ್ರಯತ್ನದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ..

ADVERTISEMENT


ವಿಜಯನಗರದ ಮಾರುತಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಫುಲ್ ಮೀಲ್ಸ್ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ನೆರೆದಿದ್ದ ಎಲ್ಲರಿಗೂ ಆಶ್ಚರ್ಯ ಕಾದಿತ್ತು.. ಚಿತ್ರದ ಸಂಗಿತ ನಿರ್ದೇಶಕ ಗುರುಕಿರಣ್, ನಾಯಕ ಲಿಖಿತ್ ಶೆಟ್ಟಿ, ನಿರ್ದೇಶಕ ಎನ್ ವಿನಾಯಕ ನಾಯಕಿಯರಾದ ಖುಷೀ ರವಿ ಮತ್ತು ತೇಜಸ್ವಿನಿ ಶರ್ಮ ಹಾಡಿನ ಕ್ಯಾಸೆಟ್ ಅನ್ನು ಪ್ರದರ್ಶಿಸಿ ವಿಭಿನ್ನವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಗುರು ಕಿರಣ್ ಟೇಪ್ ರೆಕಾರ್ಡರ್ ನಲ್ಲಿ ಹಾಡನ್ನು ಹಾಕುವ ಮುಖಾಂತರ ಹಾಡನ್ನು ಲೋಕಾರ್ಪಣೆ ಮಾಡಿ, ನೆರೆದಿದ್ದ ಎಲ್ಲರೂ ಕೆಲಕಾಲ ಹಳೆಯ ನೆನಪುಗಳನ್ನು ಮೆಲಕು ಹಾಕುವಂತೆ ಮಾಡಿದರು.. ಬಿಡುಗಡೆಯಾದ ‘ವಾಹ್ ಏನೋ ಹವಾ’ ಮೆಲೋಡಿ ಪ್ರೇಮಗೀತೆ ಎಲ್ಲರ ಗಮನ ಸೆಳೆಯಿತು..
ಕವಿರಾಜ್ ಸಾಹಿತ್ಯವಿರುವ ಈ ಹಾಡು ಡಿಜಿಕೆ ಆಡಿಯೋ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ.. ವಿಜೇತ್ ಅರಸ್ ಮತ್ತು ಸುನಿಧಿ ಗಣೇಶ್ ಹಾಡಿಗೆ ಧ್ವನಿಯಾಗಿದ್ದಾರೆ..


ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗುರುಕಿರಣ್ ಸಂಗೀತವನ್ನು ಪ್ರಸ್ತುತಪಡಿಸುವ ರೀತಿ ಬದಲಾಗಬಹುದು ಆದರೆ ಸಂಗೀತ ಎಂದಿಗೂ ಬದಲಾಗುವುದಿಲ್ಲ, ಈಗಿನ ಪೀಳಿಗೆಯ ಟ್ರೆಂಡ್ ಗೆ ತಕ್ಕಂತೆ ಮಾಡಿರುವ ಫುಲ್ ಮೀಲ್ಸ್ ನ ಹಾಡುಗಳನ್ನು ಪ್ರೆಕ್ಷಕರು ಮೆಚ್ಚುಕೊಳ್ಳುತ್ತಾರೆ ಎಂದರು. ಫುಲ್ಸ್ ಮೀಲ್ಸ್ ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ರೊಮ್ಯಾಂಟಿಕ್ ಕಾಮಿಡಿ ಸಿನೆಮಾ. ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ..


ನವೆಂಬರ್ ಇಪ್ಪತ್ತೊಂದಕ್ಕೆ ಸಿನೆಮಾ ಬಿಡುಗಡೆ ದಿನಾಂಕ ನಿಗದಿ ಮಾಡಿಕೊಂಡಿರುವ ಚಿತ್ರತಂಡ ಮುಂದಿನ ಹಂತಗಳಲ್ಲಿ ಚಿತ್ರದ ಉಳಿದ ಹಾಡುಗಳು ಮತ್ತು ಟ್ರೈಲರ್ ಬಿಡುಗಡೆಯೊಂದಿಗೆ ಮತ್ತಷ್ಟು ಪ್ರಚಾರ ಮಾಡುತ್ತಾ ನವೆಂಬರ್ ಇಪ್ಪತ್ತೊಂದಕ್ಕೆ ‘ಫುಲ್ ಮೀಲ್ಸ್’ ಸವಿಯಲು ಜನರನ್ನು ಚಿತ್ರಮಂದಿರದತ್ತ ಬರುವಂತೆ ಮಾಡುವ ಗುರಿಯನ್ನು ಹೊಂದಿದೆ. ಒಂದು ಸಮಯದಲ್ಲಿ ಉದಯ ಮ್ಯೂಸಿಕ್ ನಲ್ಲಿ ಜನಪ್ರಿಯ ನಿರೂಪಕರಾಗಿದ್ದ ಲಿಖಿತ್ ಶೆಟ್ಟಿ ಈ ಹಿಂದೆ ಸಂಕಷ್ಟಕರ ಗಣಪತಿ, ಪುನೀತ್ ರಾಜ್ ಕುಮಾರ್ ಅವರ ಪಿ. ಆರ್. ಕೆ ಪ್ರೊಡಕ್ಷನ್ ನಲ್ಲಿ ಮೂಡಿಬಂದ ‘ಫ್ಯಾಮಿಲಿ ಪ್ಯಾಕ್’ ಚಿತ್ರಗಳ ಮೂಲಕ ನಾಯಕ ನಟರಾಗಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ಕಳೆದ ವರ್ಷ ತೆರೆಕಂಡ ಕೆ. ಎಮ್. ಚೈತನ್ಯ ನಿರ್ದೇಶನದ ಅಬ್ಬಬ್ಬ ಚಿತ್ರದಲ್ಲಿ ಕೂಡ ನಾಯಕನಾಗಿ ಗಮನ ಸೆಳೆದಿದ್ದರು. ‘ಫುಲ್ ಮೀಲ್ಸ್’ ಚಿತ್ರದಲ್ಲಿ ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಿರ್ಮಾಪಕನಾಗಿ ತೊಡಗಿಸಿಕೊಂಡಿರುವ ಲಿಖಿತ್ ಶೆಟ್ಟಿ ತಮ್ಮ ಹಿಂದಿನ ಸಿನೆಮಾಗಳಿಗಿಂತ ಹೆಚ್ಚಿನ ಯಶಸ್ಸನ್ನು ಕಾಣುವ ನಿರೀಕ್ಷೆಯಲ್ಲಿದ್ದಾರೆ.

ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಗುರು ಕಿರಣ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ, , ಮನೋಹರ್ ಜೋಷಿ ಛಾಯಾಗ್ರಹಣ, ಹರೀಶ್ ಗೌಡ ಸಂಭಾಷಣೆ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅರ್ಜುನ್ ರಾಜ್ ಸಾಹಸ ನಿರ್ದೇಶನವಿದೆ, ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಗಣೇಶ್ ರಾವ್, ಕೋಟೆ ಪ್ರಭಾಕರ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಬಹು ದೊಡ್ಡ ತಾರಾ ಬಳಗವೇ ಇದೆ.

Tags: Full MealsKannada movieKarnatakaKhushi RaviLikhith ShettyMaruthi MandirsandalwoodSunidhi GaneshTejasvini SharmaVijeth Aras
Previous Post

ಸೆ.19ಕ್ಕೆ ನಾದಬ್ರಹ್ಮ ಹಂಸಲೇಖ ಸಂಗೀತವಿರೋ ‘ಸೋಲ್​ಮೇಟ್ಸ್​’ ಚಿತ್ರದ ಟ್ರೈಲರ್ ರಿಲೀಸ್..

Next Post

Maruta: ಅಕ್ಟೋಬರ್ 31ರಂದು “ಮಾರುತ”ನ ಆಗಮನ.

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post

Maruta: ಅಕ್ಟೋಬರ್ 31ರಂದು "ಮಾರುತ"ನ ಆಗಮನ.

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada