ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿ ವಿಚಾರದ ಬಗ್ಗೆ ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕರ್ನಾಟಕದ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಭೇಟಿಯಾಗಿ ಚರ್ಚಿಸಿದ್ದಾರೆ.ಕೇಂದ್ರ ಸಚಿವ ಕುಮಾರಸ್ವಾಮಿಯವರ ಬಳಿ ಮನವಿ ಮಾಡಿರುವ ಸಚಿವ ಎಂ.ಬಿ.ಪಾಟೀಲ್ , ರಾಜ್ಯದಲ್ಲಿ ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ಬೇಕೆಂದು ಕೇಳಿದ್ದಾರೆ.
ಸಚಿವರ ಈ ಮನವಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.ಇದೇ ಸಂದರ್ಭದಲ್ಲಿ ಸದ್ಯದ ಕರ್ನಾಟಕದ ಕೈಗಾರಿಕಾ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಮಾಹಿತಿ ಪಡೆದುಕೊಂಡಿದ್ದಾರೆ ಹಾಗೂ ಎಂ.ಬಿ.ಪಾಟೀಲ್ ಸಲ್ಲಿಸಿದ ಪ್ರಸ್ತಾವನೆಗಳ ಬಗ್ಗೆ ಆದ್ಯತೆಯ ಮೇರೆಗೆ ಅಗತ್ಯ ಕೆಲಸಗಳನ್ನು ಮಾಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಇನ್ನು ರಾಜ್ಯದಲ್ಲಿ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಬೇಕು ಜೊತೆಗೆ ವಿದೇಶಿ ನೇರ ಬಂಡವಾಳ ಹೂಡಿಕೆ ಬಗ್ಗೆಯೂ ಹೆಚ್ಚಿನ ಗಮನಹರಿಸಬೇಕು.ಹೀಗಾಗಿ ರಾಜಕೀಯವನ್ನು ಮೀರಿ ಈ ವಿಷಯದಲ್ಲಿ ರಾಜ್ಯಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಕೇಂದ್ರ ಸಚಿವರ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.