ಶಿವಮೊಗ್ಗ : ಖ್ಯಾತ ಗಮಕ ಕಲಾವಿದ ಹೆಚ್.ಆರ್ ಕೇಶವಮೂರ್ತಿ(89) ಅವರ ಅಂತ್ಯಕ್ರಿಯೆ ಗುರುವಾರ ನೆರವೇರಿತು.
ಶಿವಮೊಗ್ಗ ಹೊರವಲಯದ ಹೊಸಹಳ್ಳಿಯಲ್ಲಿ ಸಕಲ ಸರ್ಕಾರ ಗೌರವಗಳೊಂದಿಗೆ ಕೇಶವಮೂರ್ತಿ ಅವರ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆ ಸಂದರ್ಭದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಕುಶಾಲ ತೋಪು ಸಿಡಿಸಿ, ಸರ್ಕಾರಿ ಗೌರವ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಮೇಯರ್ ಶಶಿಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರ್ ನಾಯ್ಕ್ , ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ಸೇರಿದಂತೆ ಹಲವರು ಪುಷ್ಪನಮನ ಸಲ್ಲಿಸುವ ಮೂಲಕ ಅಂತಿಮ ಗೌರವ ಸಲ್ಲಿಸಿದರು.
ಕಳೆದ ಹಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಿನ್ನೆ ಸಂಜೆ ವಯೋಸಹಜವಾಗಿ ಸಾವನ್ನಪ್ಪಿದರು. ಈ ಬಾರಿ ಪದ್ಮಶ್ರೀ ಪುರಸ್ಕೃತರಾಗಿದ್ದ ಕೇಶವಮೂರ್ತಿ ಅವರು, ಕಳೆದ ಕೆಲವು ತಿಂಗಳ ಹಿಂದೆ ಪ್ರಶಸ್ತಿ ಪುರಸ್ಕೃತರಾಗಿದ್ದರು