• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನವದೆಹಲಿಯಲ್ಲಿ ದೇವೇಗೌಡರ ಜೀವನ ಚರಿತ್ರೆ ‘ಫರ್ರೋಸ್ ಇನ್ ಎ ಫೀಲ್ಡ್’ ಬಿಡುಗಡೆ

Any Mind by Any Mind
December 13, 2021
in ಕರ್ನಾಟಕ, ದೇಶ
0
ನವದೆಹಲಿಯಲ್ಲಿ ದೇವೇಗೌಡರ ಜೀವನ ಚರಿತ್ರೆ ‘ಫರ್ರೋಸ್ ಇನ್ ಎ ಫೀಲ್ಡ್’ ಬಿಡುಗಡೆ
Share on WhatsAppShare on FacebookShare on Telegram

ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ಬರೆದಿರುವ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಜೀವನಚರಿತ್ರೆ ಬರೆದಿರುವ ‘ಫರೋಸ್ ಇನ್ ಎ ಫೀಲ್ಡ್: ದಿ ಅನ್ಎಕ್ಸ್ಫ್ಲೋರ್ಡ್ ಲೈಫ್ ಆಫ್ ಹೆಚ್.ಡಿ.ದೇವೇಗೌಡʼ ಕೃತಿಯನ್ನು ದೇಶದ ಖ್ಯಾತ ನ್ಯಾಯವಾದಿಗಳಾದ ಫಾಲಿ ಎಫ್ ನಾರಿಮನ್ ಅವರು ನವದೆಹಲಿಯಲ್ಲಿ ಲೋಕಾರ್ಪಣೆ ಮಾಡಿದರು.

ADVERTISEMENT

ದೆಹಲಿಯ ಮಲ್ಟಿಪರ್ಪೋಸ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಸರಳ, ಅರ್ಥಪೂರ್ಣ ಸಮಾರಂಭದಲ್ಲಿ ಆನ್ಲೈನ್ ವೇದಿಕೆಯ ಮೂಲಕ ನಾರಿಮನ್ ಅವರು ಕೃತಿಯನ್ನು ದೇವೇಗೌಡರ ಸಮಕ್ಷಮದಲ್ಲಿ ಬಿಡುಗಡೆ ಮಾಡಿ ಮಾತನಾಡಿದ ಅವರು, ದೇವೇಗೌಡರ ಸುದೀರ್ಘ ರಾಜಕೀಯ ಜೀವನದ ಮಜಲುಗಳನ್ನು ಮೆಲುಕು ಹಾಕಿದರು. ಮುಖ್ಯವಾಗಿ ನೆರೆ ರಾಜ್ಯಗಳೊಂದಿಗೆ ಸಂಘರ್ಷಕ್ಕೆ ಕಾರಣವಾಗಿದ್ದ ಕೃಷ್ಣಾ ಮತ್ತು ಕಾವೇರಿ ಕೊಳ್ಳಗಳ ಜಲವಿವಾದಗಳ ಬಗ್ಗೆ ಗೌಡರು ಕೈಗೊಂಡ ಕಠಿಣ ಕ್ರಮಗಳ ಬಗ್ಗೆ ಮುಖ್ಯವಾಗಿ ಉಲ್ಲೇಖ ಮಾಡಿದರು.

60 ವರ್ಷಗಳ ಸುದೀರ್ಘ ರಾಜಕೀಯ ಜೀವನವುಳ್ಳ ದೇವೇಗೌಡರನ್ನು ಪುಸ್ತಕದಲ್ಲಿ ದೊಡ್ಡ ಜೀವ ಎಂದು ಕರೆಯಲಾಗಿದೆ. ದೊಡ್ಡ ಜೀವದ ಜತೆ ಸಂಭ್ರಮಿಸುತ್ತುದ್ದೇವೆ ಎಂದು ಬರೆಯಲಾಗಿದೆ. ಆದರೆ, ಅವರು ತಾವು ರಾಜಕೀಯ ಜೀವನ ಆರಂಭಿಸಿದಾಗ ಅವರಿಗೆ ತಾವೊಬ್ಬ ದೊಡ್ಡ ಜೀವ ಆಗುತ್ತೇನೆಂಬ ಕಲ್ಪನೆಯೇ ಇರಲಿಲ್ಲ. ಆದರೆ ದೇವೇಗೌಡರು ಹಾಗೆ ಬೆಳೆದು ಸಾಧಿಸಿದರು ಎಂದು ನಾರಿಮನ್ ಅವರು ಅಭಿಪ್ರಾಯಪಟ್ಟರು.

1962ರಲ್ಲಿ ಪಕ್ಷೇತರ ಶಾಸಕರಾಗಿ ಗೌಡರು ರಾಜ್ಯ ವಿಧಾನಸಭೆಗೆ ಕಾಲಿಟ್ಟ ಕೂಡಲೇ ಅವರು ಪ್ರಸ್ತಾಪ ಮಾಡಿದ್ದು, ರಾಜ್ಯಕ್ಕೆ ಹಂಚಿಕೆಯಾಗಿರುವ ಕಾವೇರಿ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಬಗ್ಗೆ. ಜತೆಗೆ ಒಂದು ನಿರ್ಣಯವನ್ನೂ ಮಂಡಿಸಿದರು. ಅದಾದ ಮೇಲೆ ಕರ್ನಾಟಕ ಸರಕಾರವು ಕಾವೇರಿ ಕೊಳ್ಳದ ತನ್ನ ಪಾಲಿನ ನೀರನ್ನು ಸಮರ್ಪಕವಾಗಿ ಬಳಿಸಿಕೊಳ್ಳುವ ನಿರ್ಧಾರ ಕೈಗೊಂಡಿತು ಎಂದು ಅವರು ವಿವರಿಸಿದರು.

ಆ ನಿರ್ಣಯ ಮಂಡಿಸಿ ಗೌಡರು ಮಾಡಿದ ಭಾಷಣವನ್ನು ಉಲ್ಲೇಖಿಸಿದ ನಾರಿಮನ್ ಅವರು; ಹಾಸನ, ಮೈಸೂರು, ಕೊಡಗು, ಮಂಡ್ಯ, ಚಿತ್ರದುರ್ಗ, ಬೆಂಗಳೂರು ಮುಂತಾದ ಜಿಲ್ಲೆಗಳ ನೀರಿನ ಬವಣೆಯನ್ನು ಹಾಗೂ ಕಾವೇರಿ ನೀರನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದ್ದರು. ಅವರ ಮಾತುಗಳನ್ನು ಹಿರಿಯ ನಾಯಕರಾದ ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಅವರುಗಳೆಲ್ಲ ಆಲಿಸಿ ನೀರಿನ ಬಳಕೆ ಬಗ್ಗೆ ನಿರ್ಧಾರ ಕೈಗೊಂಡಿದ್ದರು ಎಂದರು.

ಇಷ್ಟೇ ಅಲ್ಲದೆ, ರಾಜ್ಯದಲ್ಲಿ ಬಲಿಷ್ಠ ಸಮುದಾಯಗಳ ನಡುವೆ ನಡೆಯುತ್ತಿದ್ದ ರಾಜಕೀಯ ಮೇಲಾಟ, ಕೊನೆಗೆ ಹೋರಾಟಕ್ಕೆ ಮನ್ನಣೆ ಸಿಕ್ಕಿ ದೇವೇಗೌಡರು ರಾಜ್ಯದ ಮುಖ್ಯಮಂತ್ರಿಗಳಾದ ಘಟನಾವಳಿಗಳ ಬಗ್ಗೆ ನಾರಿಮನ್ ಅವರು ಪ್ರಸ್ತಾಪ ಮಾಡಿದರು.

ಫಾರೂಕ್ ಅಬ್ದುಲ್ಲಾ ಕಂಬನಿ:

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು; ಕಣಿವೆಯಲ್ಲಿ ಬಹಳ ದುಸ್ತರ ಸಂದರ್ಭವಿದ್ದ ವೇಳೆಯಲ್ಲಿ ಗೌಡರು ಈ ದೇಶದ ಪ್ರಧಾನಿ ಆಗಿದ್ದರು. ಆಗ ನಮ್ಮ ರಾಜ್ಯದಲ್ಲಿ ಪರಿಸ್ಥಿತಿ ವಿಪರೀತ ವಿಷಮವಾಗಿತ್ತು ಎಂದರು.

ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಲು ಗೌಡರು ಬಹುದೊಡ್ಡ ರಿಸ್ಕ್ ತೆಗೆದುಕೊಂಡಿದ್ದರು. ಆ ಸಂದರ್ಭದಲ್ಲಿ ಅನೇಕ ಸಲ ಅವರನ್ನು ಪ್ರಧಾನಿ ಕಚೇರಿಯಲ್ಲಿ ಭೇಟಿಯಾಗಿದ್ದೆ. ಅಂಥ ಕಠಿಣ ಸಂದರ್ಭದಲ್ಲಿ ಕಣಿವೆ ರಾಜ್ಯವನ್ನು ಗೌಡರು ನಿರ್ವಹಿಸಿದ ರೀತಿ ಕೆಚ್ಚೆದೆಯಿಂದ ಕೂಡಿತ್ತು. ಆಗ ದೇವೇಗೌಡರು ಜಮ್ಮು ಕಾಶ್ನೀರಕ್ಕೆ ಭೇಟಿ ನೀಡಿದರು. ಅದು ನನ್ನ ಪಾಲಿಗೆ ಹೊಸ ಆರಂಭ. ಆಗ ಗೌಡರ ದೃಢ ನಿರ್ಧಾರದಿಂದ ಅಷ್ಟು ವಿಷಮ ಸ್ಥಿತಿಯಲ್ಲಿದ್ದ ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆದು ನಾನು ಅಧಿಕಾರಕ್ಕೆ ಬಂದೆ ಎಂದು ಫಾರೂಕ್ ಅಬ್ದುಲ್ಲಾ ಅವರು ಗದ್ಗದಿತರಾದರು.

ಈ ಕಾರಣಕ್ಕೆ ಜಮ್ಮು, ಕಾಶ್ಮೀರ, ಲಡಾಖ್ ಜನರು ಎಂದೆಂದಿಗೂ ದೇವೇಗೌಡರಿಗೆ ಋಣಿಯಾಗಿರುತ್ತಾರೆಂದು ಅವರು ಕಣ್ಣಂಚಿನಲ್ಲಿ ನೀರು ತುಂಬಿಕೊಂಡೇ ಹೇಳಿದರು.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಭಾವುಕರಾಗಿ ಮಾತನಾಡಿದರು. ದೇವೇಗೌಡರು ಪ್ರಧಾನಿ ಆಗಿದ್ದಾಗ ಕಾಶ್ಮೀರಕ್ಕೆ ಬಹಳಷ್ಟು ಸಹಾಯ ಮಾಡಿದ್ದಾರೆ. ಜೊತೆಗೆ ನನ್ನ ಮನ ಪರಿವರ್ತಿಸಿ ಚುನಾವಣೆಗೆ ನಿಲ್ಲುವಂತೆ ಪ್ರೇರೇಪಿಸಿದರು. ಬಳಿಕ ಚುನಾವಣೆಯಲ್ಲಿ ಗೆದ್ದು ಬಹುಮತ ಪಡೆದ ಬಳಿಕ ನನ್ನ ಕಣ್ಣಾಲಿಗಳು ತೇವಗೊಂಡಿದ್ದವು ಎಂದು ಭಾವುಕರಾದರು.

ಧರ್ಮ ಹಾಗೂ ಯಾವುದೇ ಭೇದ ಭಾವ ಇಲ್ಲದೇ ದೇಶದ ಜನರನ್ನು ನೋಡುವಂತಹ ಪ್ರಧಾನಿ ಭಾರತಕ್ಕೆ ಅವಶ್ಯಕವಿದೆ. ಆ ದಿನಕ್ಕಾಗಿ ಕಾಯುತ್ತಿರುವೆ. ದೇಶದ ಜನ ಬಲಿಷ್ಠ ರಾಗುವವರೆಗೂ ಭಾರತ ಬಲಿಷ್ಠವಾಗಲ್ಲ ಎಂದು ಅಸಮಾಧಾನ ಹೊರ ಹಾಕಿದರು.

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಫರ್ರೋಸ್ ಇನ್ ಎ ಫೀಲ್ಡ್ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯಸುಗತ ಶ್ರೀನಿವಾಸರಾಜುಹೆಚ್ ಡಿ ದೇವೇಗೌಡರು
Previous Post

ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನಾಡಿನ ರೈತರ ಕಷ್ಟ ಹೇಳತೀರದು : ಮಾಜಿ ಸಿಎಂ ಸಿದ್ಧರಾಮಯ್ಯ

Next Post

ಉಭಯವಾಸಿಗಳ ಜೀವ ಸಂಕುಲ ಸಂರಕ್ಷಣೆಯ ಆಶಯದ ಕಪ್ಪೆ ಹಬ್ಬ!

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಉಭಯವಾಸಿಗಳ ಜೀವ ಸಂಕುಲ ಸಂರಕ್ಷಣೆಯ ಆಶಯದ ಕಪ್ಪೆ ಹಬ್ಬ!

ಉಭಯವಾಸಿಗಳ ಜೀವ ಸಂಕುಲ ಸಂರಕ್ಷಣೆಯ ಆಶಯದ ಕಪ್ಪೆ ಹಬ್ಬ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada