• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, February 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಡ್ಯದ ನಾಗಮಂಗಲದಲ್ಲಿ ಗಣಪತಿ ಘರ್ಷಣೆ.. 144 ಸೆಕ್ಷನ್‌ ಜಾರಿ

ಕೃಷ್ಣ ಮಣಿ by ಕೃಷ್ಣ ಮಣಿ
September 12, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ಮಂಡ್ಯದ ನಾಗಮಂಗಲದಲ್ಲಿ ಗಣಪತಿ ಘರ್ಷಣೆ.. 144 ಸೆಕ್ಷನ್‌ ಜಾರಿ
Share on WhatsAppShare on FacebookShare on Telegram

ಮಂಡ್ಯ: ಗಣಪತಿ ವಿಸರ್ಜನೆ ವೇಳೆ ಹಿಂದೂ ಮುಸ್ಲಿಂ ಗಲಾಟೆ ನಡೆದಿದ್ದು, ಗಣಪತಿ ಮೇಲೆ ಕಲ್ಲು, ಚಪ್ಪಲಿ ತೂರಿದ್ದಾರೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಕಿಡಿಗೇಡಿಗಳು. ನಾಗಮಂಗಲ ಪಟ್ಟಣದ ಮಂಡ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಘಟನೆಯಿಂದ ಇಡೀ ನಾಗಮಂಗಲ ಉದ್ತಿಕ್ತ ವಾತಾವರಣ ನಿರ್ಮಾಣ ಆಗಿದ್ದು, ಠಾಣೆ ಮುಂದೆ ಗಣಪತಿ ತಂದು ಹಿಂದೂ ಯುವಕರ ಪ್ರತಿಭಟನೆ ಮಾಡಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಬಂದೋಬಸ್ತ್‌ ಮಾಡಲಾಗಿದೆ. ನಾಗಮಂಗಲದಲ್ಲಿ ಮಂಡ್ಯ ಡಿಸಿ ಹಾಗು ಎಸ್‌ಪಿ ಮೊಕ್ಕಾಂ ಹೂಡಿದ್ದಾರೆ.

ADVERTISEMENT

ನಾಗಮಂಗಲದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಉದ್ರಿಕ್ತರು ಬಟ್ಟೆ ಅಂಗಡಿ, ಪೇಯಿಂಟ್ ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಮಾಡಿದ್ದು, ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ. ಮುಸ್ಲಿಂ ಸಮುದಾಯದ ಕಿಡಿಗೇಡಿಗಳು ಹಿಂದೂಗಳ ಅಂಗಡಿ ಮಳಿಗೆಗಳನ್ನು ಟಾರ್ಗೆಟ್‌ ಮಾಡಿ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದಾರೆ. ನಾಗಮಂಗಲದಲ್ಲಿ ಪೊಲೀಸರು ಹೈ ಅಲರ್ಟ್ ಘೋಷಣೆ ಮಾಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ 144 ಸೆಕ್ಷನ್ ಜಾರಿ ಮಾಡಿದ್ದಾರೆ.

ರಾಜ್ಯ ಕೃಷಿ ಸಚಿವರೂ ಆಗಿರುವ ನಾಗಮಂಗಲ ಶಾಸಕ ಎನ್‌ ಚಲುವರಾಯಸ್ವಾಮಿ ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಗು ಜಿಲ್ಲಾಧಿಕಾರಿ ಜೊತೆಗೆ ಮಾತನಾಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಸೂಚನೆ ಕೊಟ್ಟಿದ್ದಾರೆ. ದಕ್ಷಿಣ ವಲಯ ಐಜಿಗೆ ಸಿಎಂ ಸಿದ್ದರಾಮಯ್ಯ ಕರೆ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಗಲಭೆ ಸೃಷ್ಟಿಗೆ ಕಾರಣ ಏನು..? ಗಲಭೆಗೆ ಕಾರಣರಾದವರ ಹೆಡೆಮುರಿ ಕಟ್ಟಿ. ಮುನ್ನಚ್ಚರಿಕೆ ವಹಿಸದ ಸ್ಥಳೀಯ ಪೊಲೀಸ್ ಅಧಿಕಾರಿಗಳ ವಿರುದ್ದವೂ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

ಎರಡೂ ಕಡೆಯಿಂದಲೂ ಕಲ್ಲು ತೂರಾಟಗಳು ನಡೆದಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಕೂಡ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಕಾನೂನು ಸುವ್ಯವಸ್ಥೆ ವೈಫಲ್ಯ ಎಂದಿದ್ದಾರೆ.

ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಅನ್ಯ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ. ಕಾಂಗ್ರೆಸ್‌ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ ಎಂದು ಕಿಡಿಕಾರಿದ್ದಾರೆ.

Tags: aagamangal pugazayodhya case judgementbengaluru rape casebengaluru rape case accusedBJPcommunal riot caseCongress Partyfraud casehigh alert caseshsr layout rape caseindian crime casesmandya fraud casemandya sp classMurder Casenaangalaam matta case songNAGAMANGALAnagamangala jdsnagamangala jds protestnagamangala protestnagamangala taluk youth congress presidentಬಿಜೆಪಿ
Previous Post

ನಾನೇ ರೀ CM ಎಂದ ಸಿದ್ದರಾಮಯ್ಯ

Next Post

ಚೀನಾ ಬೆಳ್ಳುಳ್ಳಿ ನಿಷೇಧಕ್ಕೆ ವರ್ತಕರ ಆಗ್ರಹ ;ಪ್ರತಿಭಟನೆ

Related Posts

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ
ಕರ್ನಾಟಕ

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ

by ಪ್ರತಿಧ್ವನಿ
February 8, 2026
0

ಭಾನುವಾರ ಮಧ್ಯಾಹ್ನ ಜಿಲ್ಲೆಯ  ಮೈದಾನದಲ್ಲಿ ಖಾಸಗಿ ಮಿನಿ ವಿಮಾನವೊಂದು ಪತನಗೊಂಡಿದ್ದು, ಪೈಲಟ್ ಸೇರಿದಂತೆ ಇಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. https://youtu.be/D88eNb34sAE?si=0kEZhKe-NIR-lYAl ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂರು...

Read moreDetails
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

February 8, 2026
Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

February 8, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post

ಚೀನಾ ಬೆಳ್ಳುಳ್ಳಿ ನಿಷೇಧಕ್ಕೆ ವರ್ತಕರ ಆಗ್ರಹ ;ಪ್ರತಿಭಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada