ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸ್ರು ಆಕ್ಟೀವ್ ಆಗಿದ್ದು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿಯಾದ ಹಿನ್ನೆಲೆ, ಇಂದು ಹೆಚ್.ಡಿ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಿದ್ದಾರೆ.
ಕೆಂಪೇಗೌಡ ಏರ್ಪೋರ್ಟ್ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ಆಗಮಿಸಿರುವ ಕುಮಾರಸ್ವಾಮಿ, ವಕೀಲರ ಜೊತೆಗೆ ಲೋಕಾಯುಕ್ತ ಕಚೇರಿಗೆ ಬಂದಿದ್ದಾರೆ. ಈ ಹಿಂದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಇದೇ ಪ್ರಕರಣದಲ್ಲಿ ಸತತ 3 ಗಂಟೆಗಳ ಕಾಲ ವಿಚಾರಣೆ ಮಾಡಿದ್ದರು.
ಇದೀಗ ಕುಮಾರಸ್ವಾಮಿ ಕೂಡ ವಿಚಾರಣೆಗೆ ಹಾಜರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಳ್ಳಲಿದ್ದಾರೆ. ವಕೀಲರ ಜೊತೆ ಬಂದಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಎಷ್ಟು ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ ಅನ್ನೋದು ಕುತೂಹಲ ಮೂಡಿಸಿದೆ.