• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
September 4, 2025
in Top Story, ಕರ್ನಾಟಕ, ಸಿನಿಮಾ
0
ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ
Share on WhatsAppShare on FacebookShare on Telegram

ಸೆನ್ಸಾರ್ ಮಂಡಳಿ ನಿರ್ಲಕ್ಷ್ಯ
ರವಿ ಶ್ರೀವತ್ಸ ಬೇಸರ

ADVERTISEMENT
 ಡೆಡ್ಲಿ ಸೋಮ, ಮಾದೇಶ ಖ್ಯಾತಿಯ ರವಿ ಶ್ರೀವತ್ಸ ಅವರ ನಿರ್ಮಾಣ ಹಾಗೂ ನಿರ್ದೇಶನದ  'ಗ್ಯಾಂಗ್ಸ್ ಆಫ್ ಯುಕೆ' ಚಿತ್ರದ ಹಾಡು ಹಾಗೂ ಟ್ರೈಲರ್  ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ರಿಯಲ್ ಸ್ಟಾರ್ ಉಪೇಂದ್ರ ಅವರು ಟ್ರೈಲರ್ ಗೆ ಚಾಲನೆ ನೀಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ನಿರ್ಮಾಪಕ ಕೆ.ಮಂಜು, ಉಮೇಶ್ ಬಣಕಾರ್, ನ್ಯಾಯವಾದಿ ಟಿ.ಪ್ರಸನ್ನಕುಮಾರ್, ರಾಧಾಕೃಷ್ಣ ಅಡಿಗ, ಪ್ರವೀಣ್, ಉದಯ್, ಸೇತು ಮುಕುಂದನ್, ಥ್ರಿಲ್ಲರ್ ಮಂಜು  ಹಾಗೂ ರವಿ ಶ್ರೀವತ್ಸ ಅವರ ಹಿತೈಶಿಗಳು ಹಾಗೂ ಸ್ನೇಹಿತರನೇಕರು ಹಾಜರಿದ್ದರು‌. 
ತಮ್ಮ ಡೆಡ್ಲಿ ಆರ್ಟ್ಸ್ ಬ್ಯಾನರ್  ಮೂಲಕ 'ಗ್ಯಾಂಗ್ಸ್ ಆಫ್ ಯುಕೆ' ಚಿತ್ರವನ್ನು ರವಿ ಶ್ರೀವತ್ಸ ಅವರೇ ನಿರ್ಮಿಸಿದ್ದಾರೆ.
Ravi Krishna Reddy: ಕರ್ನಾಟಕದ ಶಾಸಕರಿಗೂ,ಸಿಎಂಗೂ ಈ ದಮ್ಮು ಇರುವುದಿಲ್ಲ:ರವಿ ಕೃಷ್ಣಾರೆಡ್ಡಿ #krsparty #krs

ಬಾಗಲಕೋಟೆಯ ಪಿಲ್ಲಾರಿ ಫಾಲ್ಸ್ ನಲ್ಲಿ ನಡೆದ ನೈಜ ಘಟನೆ ಇಟ್ಟುಕೊಂಡು ರವಿ ಶ್ರೀವತ್ಸ ಅವರು ಕಥೆಗಾರ ಎಂ.ಎಸ್‌. ರಮೇಶ್ ಜತೆಗೂಡಿ ಈ ರಾ ಸಬ್ಜೆಕ್ಟ್ ಗೆ ಚಿತ್ರಕಥೆ, ಸಂಭಾಷಣೆ ಹೆಣೆದಿದ್ದಾರೆ.
ಈ ಸಂದರ್ಭದಲ್ಲಿ ಚಿತ್ರವನ್ನು ರಿಲೀಸ್ ಹಂತದವರೆಗೆ ತರುವಾಗ ಎದುರಿಸಿದ ಸಂಕಷ್ಟಗಳನ್ನು ವಿವರಿಸಿದರು.
ಪ್ರಾದೇಶಿಕ ಸೆನ್ಸಾರ್ ಮಂಡಳಿ ವೈಲೆನ್ಸ್ ಆಗಿದೆ ಎಂಬ ಕಾರಣ ನೀಡಿ, ನಮ್ಮ ಚಿತ್ರವನ್ನು ಬ್ಯಾನ್ ಮಾಡಿದ್ದಲ್ಲದೆ, ಆರ್.ಸಿ.ಗೆ ಹೋಗಿ ಸೆನ್ಸಾರ್ ಮಾಡಿಸಿಕೊಳ್ಳಿ ಎಂದರು. ಅಲ್ಲದೆ ನಾವು ಕಷ್ಟಪಟ್ಟು ನಿರ್ಮಿಸಿದ ಸಿನಿಮಾನ ಸೆನ್ಸಾರ್ ಅಧಿಕಾರಿಗಳು ಪೂರ್ತಿ ವೀಕ್ಷಿಸದೆ ಬೇಜವಾಬ್ದಾರಿತನ ತೋರಿಸಿದರು‌. ಇದರಿಂದ ನನ್ನ ಮನಸಿಗೆ ತುಂಬಾ ನೋವಾಯಿತು. ನಂತರ ರಿವೈಸಿಂಗ್ ಕಮಿಟಿಗೆ ಹೋಗಿ ಚಿತ್ರವನ್ನು ಸೆನ್ಸಾರ್ ಮಾಡಿಸಿಕೊಂಡಿದ್ದಾಗಿ ಬೇಸರದಿಂದಲೇ ವಿವರಿಸಿದರು.


ರಕ್ತ ತನ್ನ ಕುರುಹನ್ನು ಬಿಟ್ಟು ಹೋಗುತ್ತೆ, ಜಿದ್ದು ಒಬ್ಬರಿಂದ ಒಬ್ಬರಿಗೆ ಟ್ರಾವೆಲ್ ಆಗುತ್ತೆ ಅನ್ನೋ ಕಾನ್ಸೆಪ್ಟ್ ಇಟ್ಟುಕೊಂಡು ರವಿ ಶ್ರೀವತ್ಸ ಈ ಚಿತ್ರವನ್ನು ನಿರೂಪಿಸಿದ್ದಾರೆ. ಭೀಮೆಯ ಮಡಿಲಲ್ಲಿ ಎಂಬ ಟ್ಯಾಗ್ ಲೈನ್ ಈ ಚಿತ್ರಕ್ಕಿದ್ದು ಚಿತ್ರವೀಗ ಬಿಡುಗಡೆ ಹಂತಕ್ಕೆ ಬಂದಿದ್ದು ಸದ್ಯದಲ್ಲೇ ರಿಲೀಸ್ ಮಾಡೋ ಸಿದ್ದತೆ ಮಾಡಿಕೊಂಡಿದ್ದಾರೆ ನಿರ್ದೇಶಕ ರವಿ ಶ್ರೀವತ್ಸ.
ಒರಟ ಪ್ರಶಾಂತ್, ಜ್ಯೋತಿ ಶೆಟ್ಟಿ, ಕೋಟೆ ಪ್ರಭಾಕರ್, ಪದ್ಮಾ ವಾಸಂತಿ, ಮುನಿ ಅಲ್ಲದೆ ಕೆವಿ‌.ರಾಜು ಅವರ ಪುತ್ರ ಅಮೋಘ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೋನು ಉಪಾಧ್ಯ, ಪ್ರವೀಣ್, ಉಗ್ರಂ ರೆಡ್ಡಿ, ಸತ್ಯ, ಧಿಲ್ಲಾನ್, ನವೀನ್, ಪ್ರಜ್ವಲ್ ಮಸ್ಕಿ, ಉಮೇಶ್, ವಿಕಾಸ್, ಹಿರಿಯನಟ ಬಾಲಕೃಷ್ಣ ರೀತಿ ಕಾಣುವ ಟಂಕಸಾಲೆ ಉಮೇಶ್, ಮಹಂತೇಶ್ ಹುಲ್ಲೂರು ಸೇರಿ ಒಂದಷ್ಡು ಸ್ಥಳೀಯ ಪ್ರತಿಭೆಗಳನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ನಿರ್ಮಾಪಕರಾಗಿ ಎಲ್.ಎನ್. ರೆಡ್ಡಿ ಅವರು ರವಿ ಶ್ರೀವತ್ಸ ಜೊತೆ ಕೈಜೋಡಿಸಿದ್ದಾರೆ.
ನಟ ಮುನಿ ಕಾಳ ಎಂಬ ಪಾತ್ರದಲ್ಲಿ ನಟಿಸಿದ್ದು, ಬಾಗಲಕೋಟೆಯ ಬಿಸಿಲಲ್ಲಿ ಅನುಭವಿಸಿದ ಪರಿಪಾಟಲುಗಳನ್ನು ವಿವರಿಸಿದರು. ಕೋಟೆ ಪ್ರಭಾಕರ್, ಒರಟ ಪ್ರಶಾಂತ್ ತಮಗಾದ ಅನುಭವಗಳನ್ನು ಹೇಳಿಕೊಂಡರು. ಎಂ.ಎಸ್.ರಮೇಶ್ ಮಾತನಾಡಿ ರವಿ ೨ ವರ್ಷಗಳ ಹಿಂದೆ ಈ ಕಥೆ ಹೇಳಿದ್ದರು. ಬಾಗಲಕೋಟಿಗೆ ಹೋದಾಗ ನನ್ನ ಗುರುಗಳು (ಕೆವಿ.ರಾಜು) ನೆನಪಾದರು ಎಂದು ನೆನಪಿಸಿಕೊಂಡರು.


ನಟ, ನಿರ್ದೇಶಕ ಉಪೇಂದ್ರ ಮಾತನಾಡುತ್ತ ನಾವು ಕಾಶಿನಾಥ್ ಸರ್ ಸ್ಕೂಲ್ ನಿಂದ ಬಂದ ನಂತರ ನಮಗೆ ಇನ್ನೊಂದು ಸ್ಕೂಲ್ ಇದೆ ಅಂತ ಗೊತ್ತಾಯ್ತು. ಇವರೆಲ್ಲ ಅಲ್ಲಿದ್ದರು. ರವಿ ಶ್ರೀವತ್ಸ ತುಂಬಾ ಎಮೋಷನಲ್. ಅವರ ಸಿನಿಮಾ ಕೂಡ ಹಾಗೇ ಇರುತ್ತದೆ. ಎಲ್ಲಾ ಕಲಾವಿದರು ಚೆನ್ನಾಗಿ ಮಾಡಿದ್ದಾರೆ. ನಾನು ಎ ಸಿನಿಮಾ ಮಾಡಿದಾಗಲೂ ಇದೇ ಸಿಚುಯೇಶನ್ ಎದುರಿಸಿದ್ದೆ. ಇಲ್ಲಿ ಪಾಸಿಟಿವ್ ವೈಬ್ರೇಶನ್ ಕಾಣಿಸ್ತಿದೆ ಎಂದರು.


ನಿರ್ಮಾಪಕ ಕೆ.ಮಂಜು ಮಾತನಾಡಿ ರವಿ ಈ ಸಿನಿಮಾನ ತುಂಬಾ ಕಷ್ಟಪಟ್ಟು ಮಾಡಿದ್ದಾರೆ ಎಂದರು.
ನಂತರ ಉಮೇಶ್ ಬಣಕಾರ್ ಮಾತನಾಡಿ ನಾನು ಈ ಸಿನಿಮಾ ನೋಡಿದಾಗಲೇ ರವಿಗೆ ನಿಮ್ಮ ಚಿತ್ರ ಸೆನ್ಸಾರಾಗಲ್ಲ ಎಂದು ಹೇಳಿದ್ದೆ. ಹಾಗೇ ಆಯಿತು. ಆದರೂ ಅವರು ಎಲ್ಲವನ್ನೂ ಗೆದ್ದು ಬಂದಿದ್ದಾರೆ ಎಂದರು.
ಪ್ರಸನ್ನಕುಮಾರ್ ಮಾತನಾಡುತ್ತ ಆರಂಭದಲ್ಲಿ ರವಿ ಶ್ರೀವತ್ಸ ನನ್ನ ಮನೆ ಬಾಡಿಗೆ ಕೇಳಿಕೊಂಡು ಬಂದಿದ್ದರು. ಆಗ ನಾನು ಸಿನಿಮಾದವ್ರಿಗೆ ಮನೆ ಕೊಡಲ್ಲ ಎಂದಿದ್ದೆ, ಸಿನಿಮಾ ಅದ್ಭುತವಾಗಿದೆ. ಒಂದೊಂದು ಸೀನ್ ನೋಡುವಾಗ ಮೈ ಜುಂ ಎನಿಸುತ್ತದೆ ಎಂದು ಹೇಳಿದರು.
ಶಿಶುನಾಳ‌ ಷರೀಫರ ಗೀತೆಗಳನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ.

Tags: #KDTheDevil #DhruvaSarja #PremsKD #ArjunJanya #Ramesh Aravindupendra
Previous Post

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

Next Post

ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ

ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada