ಪಂಜಾಬಿ ಗಾಯಕ, ಯುವ ಕಾಂಗ್ರೆಸ್ ನಾಯಕ ಸಿಧು ಮೂಸೇವಾಲಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ದೀಪಕ್ ಟಿನು ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ.
ದೀಪಕ್ ಟಿನುನನ್ನು ಪಂಜಾಬ್ ಪೊಲೀಸರು ಮತ್ತೊಂದು ಪ್ರಕರಣದ ವಿಚಾರಣೆ ಸಲುವಾಗಿ ಮಾನ್ಸಾ ಪೊಲೀಸರು ಗೋಯಿಂದ್ವಾಲ್ ಸಾಹಿಬ್ ಜೈಲಿನಿಂದ ಕರೆತರುವ ಸಮಯದಲ್ಲಿ ಆರೋಪಿ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ.
ಗ್ಯಾಂಗ್ಸ್ಟಾರ್ ಲಾರೆನ್ಸ್ ಬಿಷ್ಣೋಯಿ ಪರಮಾಪ್ತನಾಗಿರುವ ಟಿನು ಗಾಯಕ ಸಿಧು ಮೂಸೇವಾಲಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ ಮುಖ್ವಿಂದರ್ ಸಿಂಗ್ ಈಗಾಗಲೇ ಆರೋಪಿ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ.ಶೀಘ್ರದಲ್ಲಿ ಆತನನ್ನು ಪತ್ತೆಹಚ್ಚಲಾಗುವುದು ಎಂದು ತಿಳಿಸಿದ್ದಾರೆ.
ಮೇ 29ರಂದು ಸಿಧು ಮೂಸೇವಾಲಾರನ್ನು ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.






