ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ (Hubli railway station) ಬ್ಯಾಗೊಂದರಲ್ಲಿ ಗಾಂಜಾ ಪತ್ತೆಯಾಗಿದೆ. ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಪತ್ತೆಯಾಗಿದ್ದು, ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ನಾಲ್ಕನೇ ಪ್ಲಾಟ್ ಫಾರಂನಲ್ಲಿ ಘಟನೆ ನಡೆದಿದೆ.

ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂನಲ್ಲಿ ವಾರಸುದಾರರಿಲ್ಲದ ಬ್ಯಾಗೊಂದರಲ್ಲಿ ಗಾಂಜಾ ಪತ್ತೆಯಾಗಿದ್ದು 4 ಲಕ್ಷ ರೂಪಾಯಿ ಮೌಲ್ಯದ ನಾಲ್ಕು ಕೆ.ಜಿ. ಗಾಂಜಾವನ್ನುಅಬಕಾರಿ ಉಪ ನಿರೀಕ್ಷಕ ಐ ಡಿ ಕಿತ್ತೂರ್ ನೇತೃತ್ವದಲ್ಲಿ ವಶಕ್ಕೆ ಪಡೆಯಲಾಗಿದೆ.
ಈ ಬ್ಯಾಗ್ ಸಿಕ್ಕಿರುವ ಸ್ಥಿತಿ ನೋಡಿದ್ರೆ ಲಿನ ಮೂಲಕ ಹುಬ್ಬಳ್ಳಿಗೆ ಗಾಂಜಾ ತಂದಿರೋ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಸದ್ಯ ಆರೋಪಿ ಪತ್ತೆಗೆ ಜಾಲ ಬೀಸಿರುವ ಪೊಲೀಸರು, ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.