• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಶೂಟಿಂಗ್‌ ಮುಗಿಸಿದ ಗರಡಿ

Any Mind by Any Mind
January 9, 2023
in ಸಿನಿಮಾ
0
ಶೂಟಿಂಗ್‌ ಮುಗಿಸಿದ ಗರಡಿ
Share on WhatsAppShare on FacebookShare on Telegram

ಯೋಗರಾಜ್‌ ಭಟ್‌ ನಿರ್ದೇಶನದ, ಕೃಷಿ ಸಚಿವ ಬಿ.ಸಿ.ಪಾಟೀಲ್‌ ನಿರ್ಮಾಣದ ಯಶಸ್‌ ಸೂರ್ಯ-ಸೋನೆಲ್‌ ಮೊಂತೆರೋ ನಾಯಕ-ನಾಯಕಿಯಾಗಿ ನಟಿಸಿರುವ ಗರಡಿ ಚಿತ್ರದ ಚಿತ್ರೀಕರಣವನ್ನ ಯಶಸ್ವಿಯಾಗಿ ಮುಗಿಸಿದೆ.

ADVERTISEMENT

ಬೆಂಗಳೂರು ನಗರದ ರಾಮುಹಳ್ಳಿಯಲ್ಲಿರುವ ಜಿ.ವಿ.ಅಯ್ಯರ್‌ ಸ್ಟುಡಿಯೋದಲ್ಲಿ ಹಾಕಲಾಗಿದ್ದ ಬೃಹತ್‌ ಸೆಟ್‌ನಲ್ಲಿ 70 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದ್ದು ಈ ಬಗ್ಗೆ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ ಮಾಹಿತಿಯನ್ನ ಹಂಚಿಕೊಂಡಿದೆ.

ನಿರ್ದೇಶಕ ಯೋಗರಾಜ್‌ ಭಟ್‌ ಮಾತನಾಡಿ ಸುಮಾರು 70 ದಿನಗಳ ಚಿತ್ರೀಕರಣದ ನಂತರ ಗರಡಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ ಚಿತ್ರದ ಮತ್ತೊಂದು ವಿಶೇಷವೇನೆಂದರೆ ನಾಯಕನ ತಂದೆ ಪಾತ್ರದಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್‌ ನಟಿಸಿದ್ದಾರೆ. ನಮ್ಮ ಚಿತ್ರವು ಹಳೇ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ.‌ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ‌ಪ್ರೋತ್ಸಾಹವಿರಲಿ ಎಂದು ಆಶಿಸಿದ್ದಾರೆ.

ಕೃಷಿ ಸಚಿವ, ನಿರ್ಮಾಪಕ ಬಿ.ಸಿ.ಪಾಟೀಲ್‌ ಮಾತನಾಡಿ ಗರಡಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ ಚಿತ್ರ ಚೆನ್ನಾಗಿ ಬಂದಿದೆ ಚಿತ್ರದ ಆಡಿಯೋ ಹಕ್ಕು ಸರಿಗಮಪ‌ ಸಂಸ್ಥೆಗೆ ಒಂದು ಕೋಟಿಗೆ ಮಾರಾಟವಾಗಿದೆ. ಡಬ್ಬಿಂಗ್, ರಿಮೇಕ್ ರೈಟ್ಸ್ ಗೂ ಸಾಕಷ್ಟು ಬೇಡಿಕೆ ಇದೆ. ನಮ್ಮ ಸಂಸ್ಥೆಯ ನಿರ್ಮಾಣದ ಹದಿನಾರನೇ ಚಿತ್ರ. ಫೆಬ್ರವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ತಿಳಿಸಿದ್ದಾರೆ.

ನಾಯಕ ಯಶಸ್ ಸೂರ್ಯ ಮಾತನಾಡಿ ನಾನು ಪೈಲ್ವಾನ್ ಪಾತ್ರದಲ್ಲಿ‌ ಕಾಣಿಸಿಕೊಂಡಿದ್ದೇನೆ. ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಅನುಭವಿ ಕಲಾವಿದರೊಂದಿಗೆ ‌ನಟಿಸಿರುವ ಖುಷಿಯಿದೆ. ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ವಂದನೆಗಳು ಎಂದು ಹೇಳಿದ್ದಾರೆ.

ನಟ ಆರ್ಮುಗಂ ರವಿಶಂಕರ್ ಮಾತನಾಡಿ, ಈ ಚಿತ್ರದಲ್ಲಿ ಅಭಿನಯಿಸಿರುವುದು ಖುಷಿಯಾಗಿದೆ. ಯೋಗರಾಜ್ ಭಟ್ ಹಾಗೂ ಬಿ.ಸಿ.ಪಾಟೀಲ್ ಅವರ ಜೊತೆ ಇದು ನನ್ನ ಮೊದಲ ಚಿತ್ರ ಎಂದು ತಮ್ಮ ಪಾತ್ರದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ನಿರ್ಮಪಕಿ ಸೃಷ್ಟಿ ಪಾಟೀಲ್ ಮಾತನಾಡಿ ಚಿತ್ರೀಕರಣ ಸರಾಗವಾಗಿ ಮುಗಿಯಲು ಸಹಕಾರ ನೀಡಿದ್ದ ಸಮಸ್ತ ತಂಡಕ್ಕೆ ಧನ್ಯವಾದಗಳನ್ನ ತಿಳಿಸಿದ್ದಾರೆ.

ಇನ್ನು ಚಿತ್ರದ ವಿಶೇಷ ಪಾತ್ರದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟಿಸಿದ್ದು ಅವರ ಪಾತ್ರದ ಕುರಿತು ಎಲ್ಲರ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ.

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Santro Ravi Kamadata Exclusive : ಬಗೆದಷ್ಟು ಆಳ ಪಿಂಪ್‌ ರವಿಯ ಕಾಮಕಾಂಡ | Pratidhvani

Next Post

Siddaramaiah : ಕೋಲಾರದಿಂದ ಸ್ಪರ್ದಿಸುವುದಾಗಿ ಘೋಷಿಸಿದ ಮಾಜಿ ಸಿಎಂ ಸಿದ್ದು |2023 Election | Pratidhvani

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
Next Post
Siddaramaiah : ಕೋಲಾರದಿಂದ ಸ್ಪರ್ದಿಸುವುದಾಗಿ ಘೋಷಿಸಿದ ಮಾಜಿ ಸಿಎಂ ಸಿದ್ದು |2023 Election | Pratidhvani

Siddaramaiah : ಕೋಲಾರದಿಂದ ಸ್ಪರ್ದಿಸುವುದಾಗಿ ಘೋಷಿಸಿದ ಮಾಜಿ ಸಿಎಂ ಸಿದ್ದು |2023 Election | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada