ಗೌತಮ್ ಗಂಭೀರ ಕೋಚ್ ಆದ ಮೊದಲ ವರ್ಷವೇ ನೈಟ್ ರೈಡರ್ಸ್ ತಂಡ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ. ಈ ಬೆನ್ನಲ್ಲಿಯೇ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ (Gautam Gambhir) ನೇಮಕವಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಗೌತಮ್ ಗಂಬೀರ್ ಕೋಚ್ ಆಗಿರುವ ವೇಳೆಯೇ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಇದರ ಬೆನ್ನಲ್ಲಿಯೇ ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ಐಪಿಎಲ್ ಮಾಲೀಕರೊಬ್ಬರು ಖಚಿತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಹೀಗಾಗಿ ದ್ರಾವಿಡ್ ನಂತರ ಗೌತಮ್ ಗಂಭೀರ್ ತಂಡದ ಕೋಚ್ ಆಗಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಗೌತಮ್ ಗಂಭೀರವರನ್ನು ಕೋಚ್ ಆಗಿ ಆಯ್ಕೆ ಮಾಡಿಕೊಳ್ಳುವ ಕುರಿತು ಸುಳಿವು ನೀಡಿದ್ದರು. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ಕೋಚ್ ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ಆಳವಾದ ಜ್ಞಾನ ಹೊಂದಿರುವುದು ಬಹಳ ಮುಖ್ಯ. ಹೀಗಾಗಿಯೇ ಇಂತಹ ವ್ಯಕ್ತಿಯನ್ನು ಕೋಚ್ ಆಗಿ ನೇಮಕ ಮಾಡಲು ಬಯಸಿದ್ದೇವೆ ಎಂದು ಹೇಳಿದ್ದರು.

ಅಲ್ಲದೇ, ಶಾ ಹಾಗೂ ಗೌತಮ್ ಗಂಭೀರ್ ಚರ್ಚೆ ನಡೆಸುತ್ತಿರುವ ಫೋಟೋಗಳು ಕೂಡ ವೈರಲ್ ಆಗಿದ್ದವು. ಈಗ ಕೋಚ್ ಆಗಿ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.