ಮೈಸೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಲು ಗೀತಾ ಶಿವರಾಜ್ಕುಮಾರ್ ನಿರಾಕರಿಸಿದ್ದು ಈ ಮೂಲಕ ಮತ್ತಷ್ಟು ಕುತೂಹಲ ಹೆಚ್ಚುವಂತೆ ಮಾಡಿದ್ದಾರೆ .

ಪಕ್ಷಿ ವೀಕ್ಷಣೆಗೆಂದು ಬಂದಿದ್ದೇವೆ, ಇಲ್ಲಿ ರಾಜಕೀಯ ವಿಚಾರ ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದು ಗೀತಾ ಶಿವರಾಜ್ಕುಮಾರ್ ಹೇಳಿದ್ದಾರೆ.
ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು, ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ . ಪಠ್ಯಪುಸ್ತದಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು. ಈ ಕಾರಣಕ್ಕಾಗಿ ಪಠ್ಯ ಪುಸ್ತಕ ಬದಲಾವಣೆ ಆದರೆ ಒಳ್ಳೆಯದು ಎಂದು ಗೀತಾ ಶಿವರಾಜ್ಕುಮಾರ್ ಹೇಳಿದ್ದಾರೆ.