• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಜೆಟ್ ನಲ್ಲಿ ಇಂಧನ ಇಲಾಖೆಯಿಂದ ರಾಜ್ಯಕ್ಕೆ ಭರಪೂರ ಅನುದಾನ

ಪ್ರತಿಧ್ವನಿ by ಪ್ರತಿಧ್ವನಿ
March 8, 2025
in ಕರ್ನಾಟಕ, ರಾಜಕೀಯ, ವಿಶೇಷ, ಸರ್ಕಾರಿ ಗೆಜೆಟ್
0
ಬಜೆಟ್ ನಲ್ಲಿ ಇಂಧನ ಇಲಾಖೆಯಿಂದ ರಾಜ್ಯಕ್ಕೆ ಭರಪೂರ ಅನುದಾನ
Share on WhatsAppShare on FacebookShare on Telegram

ADVERTISEMENT

ನಮ್ಮ ಸರ್ಕಾರವು ಜಾರಿಗೊಳಿಸಿದ ʻಗೃಹಜ್ಯೋತಿʼ ಯೋಜನೆಯಡಿ 1.62 ಕೋಟಿ ಗ್ರಾಹಕರು ನೊಂದಾಯಿಸಿರುತ್ತಾರೆ. ಈ ಯೋಜನೆಗೆ 2024-25ನೇ ಸಾಲಿನಲ್ಲಿ 9,657 ಕೋಟಿ ರೂ. ಒದಗಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 10,100 ಕೋಟಿ ರೂ. ಒದಗಿಸಲಾಗುವುದು.

  1. ರಾಜ್ಯ ಸರ್ಕಾರದ ವತಿಯಿಂದ 10 ಹೆಚ್.‌ಪಿ. ವರೆಗಿನ ನೀರಾವರಿ ಪಂಪ್‌ಸೆಟ್‌ ವಿದ್ಯುತ್‌ ಸರಬರಾಜಿಗಾಗಿ ಧನಸಹಾಯ ನೀಡುವ ಯೋಜನೆಯಡಿ 33.84 ಲಕ್ಷ ಪಂಪ್‌ಸೆಟ್‌ಗಳಿಗೆ 16,021 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಒಂದು ಪಂಪ್‌ಸೆಟ್‌ಗೆ ಒಂದು ವರ್ಷಕ್ಕೆ ಸರಾಸರಿ 50,000 ರೂ. ಸಹಾಯಧನ ನೀಡಲಾಗುತ್ತಿದೆ.
  2. ಹೆಚ್ಚಾಗುತ್ತಿರುವ ವಿದ್ಯುತ್‌ ಬೇಡಿಕೆಯನ್ನು ನೆರವೇರಿಸಲು ರಾಜ್ಯದ ಸ್ಥಾಪಿತ ಸಾಮರ್ಥ್ಯವನ್ನು 32 ಗಿಗಾವ್ಯಾಟ್‌ನಿಂದ 60 ಗಿಗಾವ್ಯಾಟ್‌ಗೆ ಹೆಚ್ಚಿಸುವ ಗುರಿಯನ್ನು ಹಿಂದಿನ ಆಯವ್ಯಯದಲ್ಲಿ ನಿಗದಿಪಡಿಸಲಾಗಿದೆ. ಇದಕ್ಕಾಗಿ ಈ ಕೆಳಗಿನ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ:

i) ವಿದ್ಯುತ್‌ ಉತ್ಪಾದನಾ ಸಾಮರ್ಥ್ಯವನ್ನು 31.83 ಗಿಗಾವ್ಯಾಟ್ ನಿಂದ 34.99 ಗಿಗಾವ್ಯಾಟ್‌ಗೆ ಹೆಚ್ಚಿಸಲಾಗಿದೆ.
ii) 2008 ರಿಂದ ನೆನೆಗುದಿಗೆ ಬಿದ್ದಿದ್ದ 13,000 ಕೋಟಿ ಯೋಜನಾ ವೆಚ್ಚದ 800 ಮೆಗಾವ್ಯಾಟ್‌ ಸಾಮರ್ಥ್ಯ ಗೋದ್ನಾ ಶಾಖೋತ್ಪನ್ನ ವಿದ್ಯುತ್‌ ಸ್ಥಾವರವನ್ನು TBCB (Tariff based competitive bidding) ಮಾದರಿಯಲ್ಲಿ ಕಾರ್ಯಗತಗೊಳಿಸಲು ನಿರ್ಧರಿಸಿದೆ.
iii) 10,240 ಕೋಟಿ ರೂ. ವೆಚ್ಚದ 2,000 ಮೆಗಾವ್ಯಾಟ್ ಶರಾವತಿ ಪಂಪ್ಡ್ ಸ್ಟೋರೇಜ್ ಪವರ್ ಪ್ಲಾಂಟ್ ಅನುಷ್ಠಾನಕ್ಕಾಗಿ ವನ್ಯಜೀವಿ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಟೆಂಡರ್‌ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
iv) ನವೀಕರಿಸಬಹುದಾದ ಮೂಲಗಳಿಂದ ಉತ್ಪಾದನೆಯಾಗುವ ಇಂಧನದ ಶೇಖರಣೆಗಾಗಿ ಕೆಪಿಟಿಸಿಎಲ್ ಮೂಲಕ ಏಳು ಸಬ್‌ ಸ್ಟೇಷನ್‌ಗಳಲ್ಲಿ 1,000 ಮೆಗಾವ್ಯಾಟ್‌ ಅವರ್‌ (MWhr) ಬ್ಯಾಟರಿ ಶಕ್ತಿ ಶೇಖರಣಾ ವ್ಯವಸ್ಥೆಯನ್ನು 1,846 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲಾಗುವುದು.
v) ರೈತರ ನೀರಾವರಿ ಪಂಪ್‌ಸೆಟ್‌ಗಳ ವಿಕೇಂದ್ರೀಕೃತ ಫೀಡರ್‌ ಸೌರೀಕರಣ ಕಾರ್ಯವನ್ನು KUSUM-C ಯೋಜನೆಯಡಿ ಕೈಗೊಳ್ಳಲಾಗಿದೆ. ಪ್ರಥಮ ಹಂತದಲ್ಲಿ1,302 ಮೆಗಾವ್ಯಾಟ್ ಸಾಮರ್ಥ್ಯದ ಗುರಿ ಹೊಂದಲಾಗಿದ್ದು,
21 MW ಸಾಮರ್ಥ್ಯದ ಐದು ಕಾಮಗಾರಿಗಳು ಪೂರ್ಣಗೊಂಡಿವೆ. ಎರಡನೇ ಹಂತದಲ್ಲಿ ಒಟ್ಟು
1,192 MW ಸಾಮರ್ಥ್ಯದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
vi) KUSUM-B ಅಡಿಯಲ್ಲಿ ಸೋಲಾರ್‌ ಪಂಪ್‌ ಸೆಟ್‌ ಅಳವಡಿಸುವ ರೈತರ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಪಾಲನ್ನು ಶೇ.50 ಕ್ಕೆ ಹೆಚ್ಚಿಸಿದ್ದು, ಫಲಾನುಭವಿಗಳು ಶೇ.20 ರಷ್ಟನ್ನು ಮಾತ್ರ ಭರಿಸಬೇಕಾಗುತ್ತದೆ. ಈ ಯೋಜನೆಯಡಿ 40,000 ಪಂಪ್‌ಸೆಟ್‌ಗಳಿಗೆ ಅನುಮೋದನೆ ನೀಡಲಾಗಿದ್ದು, ರಾಜ್ಯ ಸರ್ಕಾರದ ಪಾಲು 752 ಕೋಟಿ ರೂ. ವೆಚ್ಚ ಮಾಡಲಾಗುವುದು.

  1. ಪ್ರಸರಣ ಜಾಲದ ಬಲವರ್ಧನೆಗಾಗಿ ನಮ್ಮ ಸರ್ಕಾರವು 115 ಹೊಸ ಉಪಕೇಂದ್ರಗಳ ಸ್ಥಾಪನೆ , 411 ಉಪ ಕೇಂದ್ರಗಳ ಉನ್ನತೀಕರಣ ಹಾಗೂ 3,490.81 ಕಿ.ಮೀ ಗಳ ಪ್ರಸರಣಾ ಮಾರ್ಗದ ರಚನೆಯನ್ನು ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 8,833 ಕೋಟಿ ರೂ. ವೆಚ್ಚದಲ್ಲಿ 100 ಹೊಸ ಉಪಕೇಂದ್ರಗಳನ್ನು ಸ್ಥಾಪಿಸಲಾಗುವುದು.
  2. ವಿತರಣಾ ಕ್ಷೇತ್ರದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ
    25,971 ಕೊಳವೆ ಬಾವಿಗಳ ವಿದ್ಯುದ್ದೀಕರಣ, 6,887 ಕುಡಿಯುವ ನೀರಿನ ಯೋಜನೆಗಳ ವಿದ್ಯುದ್ದೀಕರಣ, 1.94 ಲಕ್ಷ ವಿತರಣಾ ಪರಿವರ್ತಕಗಳ ಅಳವಡಿಕೆ, 51,975 HT ಮಾರ್ಗ ಮತ್ತು 45,047 LT ಮಾರ್ಗಗಳ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
  3. ಗ್ರಾಮ ಪಂಚಾಯತಿಗಳಲ್ಲಿ, ಬೀದಿ ದೀಪಗಳ ವಿದ್ಯುತ್ ಬಿಲ್ಲಿನ ಹೊರೆಯನ್ನು ತಗ್ಗಿಸಲು ಪ್ರತ್ಯೇಕವಾದ Phase wire ಅಳವಡಿಸುವ ಕಾಮಗಾರಿಯನ್ನು 850 ಕೋಟಿ ರೂ. ವೆಚ್ಚದಲ್ಲಿ ಎಸ್ಕಾಂಗಳ ಮೂಲಕ ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು.
  4. ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಸ್ಥಾವರಗಳ ಸ್ಥಾಪನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕೃಷಿ ಭೂಮಿಗೆ
    ಭೂ ಪರಿವರ್ತನೆ ಪ್ರಕ್ರಿಯೆಯಿಂದ ವಿನಾಯಿತಿ ನೀಡಲಾಗುವುದು.
  5. ವಿದ್ಯುತ್ ಪ್ರಸರಣ ವಲಯದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದುತ್ತಿರುವ Infrastructure Investment Trust (InvIT) ಅನ್ನು KPTCL ನಲ್ಲಿ ರಚಿಸಲು ರಾಜ್ಯ ಸರ್ಕಾರವು ಅನುಮೋದನೆ ನೀಡಿದೆ. InvIT ಮೂಲಕ 5,000 ಕೋಟಿ ರೂ. ಹೂಡಿಕೆಯನ್ನು ಸಂಗ್ರಹಿಸಿ, ವಿವಿಧ ಯೋಜನೆಗಳಿಗೆ ಉಪಯೋಗಿಸಲಾಗುವುದು.
Tags: BJPbudgetCongress Partydepartment of defensedepartment of energydepartment of statefox business the bottom linefree grant writing helpgrant writinggrant writing certificationgrant writing for beginnersgrant writing for nonprofitsgrant writing jobshow to get a grantis the us in debtminimum income standards and reference budgetsnuclear energyreference budgetsstate departmentthe debt expalinesthe deficit methewhat is grant writingಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವಾಸ್ತವಿಕ ನೆಲೆಯಲ್ಲಿ ಮಹಿಳಾ ಸಬಲೀಕರಣ-ಸಮಾನತೆ

Next Post

ಕಪಟಿ ಸಿನಿಮಾಗೆ ಮನಸೋತ ಪ್ರೇಕ್ಷಕ

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post

ಕಪಟಿ ಸಿನಿಮಾಗೆ ಮನಸೋತ ಪ್ರೇಕ್ಷಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada