• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿಜಯಪುರ ಜಿಲ್ಲೆಯ ನಿಂಬೆಗೆ ಜಿಐ ಟ್ಯಾಗ್ ಸಿಗೋದು ಬಹುತೇಕ ಖಚಿತ : ಬೆಳಗಾರರ ಮುಖದಲ್ಲಿ ಮಂದಹಾಸ

ರಾಕೇಶ್ ಬಿಜಾಪುರ್ by ರಾಕೇಶ್ ಬಿಜಾಪುರ್
January 21, 2022
in ಕರ್ನಾಟಕ
0
ವಿಜಯಪುರ ಜಿಲ್ಲೆಯ ನಿಂಬೆಗೆ ಜಿಐ ಟ್ಯಾಗ್ ಸಿಗೋದು ಬಹುತೇಕ ಖಚಿತ : ಬೆಳಗಾರರ ಮುಖದಲ್ಲಿ ಮಂದಹಾಸ
Share on WhatsAppShare on FacebookShare on Telegram

ಪ್ರಮುಖ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ ಹಾಗೂ ನಿಂಬೆಯನ್ನು ಹೆಚ್ಚಾಗಿ ವಿಜುಯಪುರ ಜಿಲ್ಲೆಯಲ್ಲಿ ಬೆಳೆಯಲಾಗುತ್ತದೆ. ಹಲವಾರು ಸಂಕಷ್ಟಗಳ ಮಧ್ಯೆ ಈ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಮಾರುಕಟ್ಟೆ ದರ ಹಾಗೂ ಅತೀವೃಷ್ಟಿ, ಹವಾಮಾನ ಬದಲಾವಣೆ ಕಾರಣಗಳಿಂದ ನಿರೀಕ್ಷಿತ ಲಾಭ ಇಲ್ಲದಂತಾಗಿದೆ. ಇದರಾಚೆ ರೈತರು ದ್ರಾಕ್ಷಿ ದಾಳಿಂಬೆ ಹಾಗೂ ನಿಂಬೆಯನ್ನು ಅವಲಂಭಿಸಿದ್ದಾರೆ. ಸದ್ಯ ಜಿಲ್ಲೆಯಲ್ಲಿ ನಿಂಬೆ ಬೆಳೆಗಾರರಿಗೊಂದು ಸಂತಸದ ಸುದ್ದಿ ಸಿಕ್ಕಿದೆ. ಜಿಲ್ಲೆಯ ನಿಂಬೆಗೆ ಜಿಐ ಟ್ಯಾಗ್ ಸಿಗೋದು ಬಹುತೇಕ ಖಚಿತವಾಗಿದೆ. ಇದರಿಂದ ನಿಂಬೆ ಬೆಳಗಾರರ ಮುಖದಲ್ಲಿ ಮಂದಹಾಸ ಮೂಡಿದೆ.

ADVERTISEMENT

ವಿಜಯಪುರ ಜಿಲ್ಲೆಯಲ್ಲಿ ದ್ರಾಕ್ಷಿ ಹಾಗೂ ನಿಂಬೆ ಬೆಳಗಳ ತವರೂರು ಎಂದು ಕರೆಯಲಾಗುತ್ತದೆ. ಪ್ರಮುಖ ತೋಟಗಾರಿಕಾ ಬೆಳೆಗಳಾಗಿ ದ್ರಾಕ್ಷಿ ಹಾಗೂ ನಿಂಬೆಯನ್ನು ಜಿಲ್ಲೆಯಲ್ಲಿ ಬೆಳೆಯಲಾಗುತ್ತದೆ. ದ್ರಾಕ್ಷಿಯನ್ನು ಹೆಚ್ಚಾಗಿ ರಾಸಾಯನಿಕಗಳ ಮೇಲೆ ಅವಲಂಭಿತವಾಗಿ ಬೆಳೆದರೆ, ನಿಂಬೆಯನ್ನು ಹೆಚ್ಚಾಗಿ ಸಾವಯವ ಪದ್ದತಿಯಲ್ಲಿ ಬೆಳೆಯಲಾಗುತ್ತಿದೆ. ಜಿಲ್ಲೆಯಲ್ಲಿ 12,000 ಕ್ಕೂ ಆಧಿಕ ಹೆಕ್ಟೇರ್ ಪ್ರದೇಶದಲ್ಲಿ ನಿಂಬೆಯನ್ನು ಬೆಳೆಯಲಾಗುತ್ತಿದೆ. ಇಡೀ ರಾಜ್ಯದಲ್ಲಿ ಹೆಚ್ಚಾಗಿ ನಿಂಬೆಯನ್ನು ವಿಜಯಪುರ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿದ್ದು ಮೊದಲ ಸ್ಥಾನದಲ್ಲಿದೆ. ಇಡೀ ದೇಶದಲ್ಲಿ 4 ನೇ ಸ್ಥಾನದಲ್ಲಿದೆ.

ಆದರೆ ಮಾರುಕಟ್ಟೆ ವ್ಯವಸ್ಥೆ ಸಮಸ್ಯೆ, ನಿಗದಿತ ಬೆಲೆ ಇಲ್ಲದೇ, ಮಳೆಯ ಅಭಾವದಿಂದ ನಿಂಬೆ ಬೆಳೆಗಾರರು ಉತ್ತಮ ಲಾಭ ಗಳಿಸಲು ಸಾಧ್ಯವಾಗಿಲ್ಲಾ. ಆದರೆ ಹಲವು ಕಷ್ಟಗಳ ನಡುವೆ ನಿಂಬೆ ಕೃಷಿಯನ್ನು ಇಲ್ಲಿಯ ರೈತರು ಕೈಬಿಟ್ಟಿಲ್ಲಾ. ಇದೀಗ ನಿಂಬೆ ಬೆಳೆಗಾರರಿಗೆ ಸಂತಸದ ಸುದ್ದಿ ಸಿಕ್ಕಿದೆ. ಜಿಲ್ಲೆಯಲ್ಲಿ ಬೆಳೆಯುವ ನಿಂಬೆಯ ಉತೃಷ್ಟ ಗುಣಮಟ್ಟ, ಹೆಚ್ಚಾಗಿರೋ ಆಮ್ಲೀಯ ಗುಣ , ತೆಳುವಾದ ತಿರುಳು ಇರುವ ಕಾರಣ ಜಿಲ್ಲೆಯ ನಿಂಬೆ ಉತೃಷ್ಟ ಮಟ್ಟದ ಸಾಲಿಗೆ ಸೇರಿದೆ. ಈ ಕಾರಣದಿಂದ ವಿಜಯಪುರ ಜಿಲ್ಲೆಯ ನಿಂಬೆಗೆ ಜಿಯೋಗ್ರಾಫಿಕಲ್ ಇಂಡಿಕೇಶನ್ ಆಫ್ ಗೂಡ್ಸ್ ಅಂದರೆ ಜಿಐ ಟ್ಯಾಗ್ ಸಿಗಲಿದೆ.

ತಮಿಳುನಾಡಿನ ಚೆನೈಲ್ಲಿರೋ ಜಿಯೋಗ್ರಾಫಿಕಲ್ ಇಂಡಿಕೇಶನ್ ರೆಜಿಸ್ಟ್ರೇಷನ್ ಕಚೇರಿಗೆ ಈಗಾಗಲೇ ಜಿಲ್ಲೆಯ ನಿಂಬೆಗೆ ಜಿಐ ಟ್ಯಾಗ್ ಲಭಿಸಲು ಬೇಕಾಗಿರೋ ಎಲ್ಲಾ ದಾಖಲೆಗಳನ್ನು ಸಲ್ಲಿಕೆ ಮಾಡಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ವಿಜಯಪುರ ಜಿಲ್ಲೆಯಲ್ಲಿ ಬೆಳೆಯವ ನಿಂಬೆ ಜಿಐ ಟ್ಯಾಗ್ ಹೊಂದಲಿದೆ.

ಜಿಲ್ಲೆಯಲ್ಲಿ 12,000 ಹೆಕ್ಟೇರ್ ಪ್ರದೇಶ ಅಂದರೆ 30,000 ಎಕರೆಯಲ್ಲಿ ನಿಂಬೆಯನ್ನು ಬೆಳೆಯಲಾಗುತ್ತಿದೆ. ಆದರೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಹಾಗೂ ಉತ್ತಮ ದರ ಸಿಗದ ಕಾರಣ ನಿಂಬೆ ಬೆಳೆಗಾರರಿಗೆ ಹೆಚ್ಚು ಲಾಭ ಸಿಗುತ್ತಿರಲಿಲ್ಲಾ. ಜಿಲ್ಲೆಯಲ್ಲಿ ಸಾವಯವ ಪದ್ದತಿಯಲ್ಲಿ ನಿಂಬೆ ಬೆಳೆಯುತ್ತಿದ್ದರೂ ವ್ಯಾಪಾರಸ್ಥರ, ದಲ್ಲಾಲಿಗಳ ಮೇಲಾಟದಲ್ಲಿ ನಿಂಬೆ ಬೆಳೆಗಾರರಿಗೆ ಕಡಿಮೆ ದರ ಸಿಗುತ್ತಿತ್ತು. ಇದೀಗಾ ಇದೇ ನಿಂಬೆಗೆ ಜಿಐ ಟ್ಯಾಗ್ ಸಿಕ್ಕರೆ ರೈತರಿಗೆ ಅನಕೂಲವಾಗೋದ್ರಲ್ಲಿ ಯಾವುದೇ ಸಮಸ್ಯೆಯಿಲ್ಲಾ. ತಮಿಳುನಾಡಿನ ಚೆನೈಲ್ಲಿರೋ ಜಿಯೋಗ್ರಾಫಿಕಲ್ ಇಂಡಿಕೇಶನ್ ರೆಜಿಸ್ಟ್ರೇಷನ್ ಕಚೇರಿ ಆಧಿಕಾರಿಗಳು ವಾರದ ಹಿಂದೆ ನಿಂಬೆ ಬೆಳೆಯ ಕುರಿತಾದ 25 ವಿವಿಧ ಮಾಹಿತಿಯನ್ನು ಕೇಳಿದ್ದರು. ತೋಟಗಾರಿಕಾ ವಿಶ್ವವಿದ್ಯಾಲಯದ ವಿಜ್ಞಾನಿಗಳು 25 ಬಗೆಯ ಮಾಹಿತಿಯನ್ನು ಜಿಯೋಗ್ರಾಫಿಕಲ್ ಇಂಡಿಕೇಶನ್ ರೆಜಿಸ್ಟ್ರೇಷನ್ ಕಚೇರಿಗೆ ಕಳುಹಿಸಿಕೊಟ್ಟಿದ್ದಾರೆ.

ಸದ್ಯ ನಿಂಬೆಗೆ ಜಿಐ ಟ್ಯಾಗ್ ಲಭ್ಯವಾಗಲು ಇನ್ನೊಂದೇ ಮೆಟ್ಟಿಲು ಬಾಕಿಯಿದೆ. ಈ ಮೂಲಕವಾದರೂ ನಿಂಬೆಯನ್ನು ಬೆಳೆಯುವ ನಮಗೆ ಅನಕೂಲವಾಗಲೆಂದು ನಿಂಬೆ ಬೆಳೆಗಾರರು ಆಶಾ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ಜಿಐ ಟ್ಯಾಗ್ ಸಿಕ್ಕರೆ ನಮ್ಮ ನಿಂಬೆಗೆ ಜಾಗತೀಕ ಗುರುರು ಸಿಗುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದರ ಜೊತೆಗೆ ಉತ್ತಮ ದರವೂ ಸಿಗಲಿದೆ ಎಂದಿದ್ದಾರೆ.

ಎಲ್ಲವೂ ಅಂದುಕೊಂಡಂತಾದರೆ ಇನ್ನು ಕೆಲವೇ ದಿನಗಳಲ್ಲಿ ಬಸವನಾಡಿನ ನಿಂಬೆಗೆ ಜಿಐ ಟ್ಯಾಗ್ ಸಿಗಲಿದೆ. ತಮಿಳುನಾಡಿನ ಚೆನೈಲ್ಲಿರೋ ಜಿಯೋಗ್ರಾಫಿಕಲ್ ಇಂಡಿಕೇಶನ್ ರೆಜಿಸ್ಟ್ರೇಷನ್ ಕಚೇರಿ ಆಧಿಕಾರಿಗಳು ವಿಜಯಪುರ ಜಿಲ್ಲೆಯ ನಿಂಬೆಗೆ ಜಿಐ ಟ್ಯಾಗ್ ನೀಡುವುದರ ಕುರಿತು ಕೊನೆಯ ಹಂತದ ಪರಾಮರ್ಶೆ ಮಾಡುತ್ತಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಜಿಐ ಟ್ಯಾಗ್ ಮಾನ್ಯತೆ ಸಿಗುವ ಎಲ್ಲಾ ಗುಣಗಳು ವಿಜಯಪುರ ಜಿಲ್ಲೆಯ ನಿಂಬೆ ಹೊಂದಿದೆ. ಕಾರಣ ಜಿಲ್ಲೆಯ ನಿಂಬೆಗೆ ಜಿಯೋಗ್ರಾಫಿಕಲ್ ಇಂಡಿಕೇಶನ್ ಆಫ್ ಗೂಡ್ಸ್ ಮಾನ್ಯತೆ ಸಿಗುವಂತಾಗಲಿದೆ. ಆ ಮೂಲಕ ನಮಗೆ ಅನಕೂಲವಾಗಲಿ ಎಂಬ ನಿರೀಕ್ಷೆಯಲ್ಲಿ ನಿಂಬೆ ಬೆಳೆಗಾರರು ಇದ್ದಾರೆ.

ವಿಜಯಪುರ ಜಿಲ್ಲೆಯ ನಿಂಬೆಗೆ ಜಿಐ ಟ್ಯಾಗ್ ಸಿಗೋದು ಬಹುತೇಕ ಖಚಿತ : ಬೆಳಗಾರರ ಮುಖದಲ್ಲಿ ಮಂದಹಾಸ

Tags: bijapurBJPCongress PartyFarmersGeographical Indication tag for state lemonslemonsಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

KPL ಮ್ಯಾಚ್ ಫಿಕ್ಸಿಂಗ್ ಪ್ರಕರಣ ; ಸಿಸಿಬಿಗೆ ಭಾರೀ ಮುಖಭಂಗ

Next Post

ಪಂಥದಿಂದ ಸಂಸ್ಕೃತಿಯೆಡೆಗೆ – ಹಿಂದುತ್ವದ ಜಾತಿ ಕರಾಮತ್ತು (ಭಾಗ-೧)

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
Next Post
ಪಂಥದಿಂದ ಸಂಸ್ಕೃತಿಯೆಡೆಗೆ – ಹಿಂದುತ್ವದ ಜಾತಿ ಕರಾಮತ್ತು (ಭಾಗ-೧)

ಪಂಥದಿಂದ ಸಂಸ್ಕೃತಿಯೆಡೆಗೆ - ಹಿಂದುತ್ವದ ಜಾತಿ ಕರಾಮತ್ತು (ಭಾಗ-೧)

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!