• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿಗೂ ಬಂತು ಜರ್ಮನಿಯ Flixbus; ರಾಜಧಾನಿಯಿಂದ 33 ನಗರಗಳಿಗೆ ಬಸ್ ಸಂಚಾರ

ಪ್ರತಿಧ್ವನಿ by ಪ್ರತಿಧ್ವನಿ
September 5, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಕೈಗೆಟಕುವ ದರದಲ್ಲಿ ಮತ್ತು ಸುಸ್ಥಿರ ಪ್ರಯಾಣಕ್ಕಾಗಿ ಜಾಗತಿಕ ಬ್ರ್ಯಾಂಡ್ ಆಗಿರುವ ಜರ್ಮನಿಯ ಫ್ಲಿಕ್ಸ್‌ಬಸ್, ದಕ್ಷಿಣ ಭಾರತಕ್ಕೂ ತನ್ನ ಸೇವೆಯನ್ನು ವಿಸ್ತರಿಸಿದ್ದು, ರಾಜಧಾನಿ ಬೆಂಗಳೂರಿನಿಂದ 33 ನಗರಗಳಿಗೆ Flixbus ಸಂಚರಿಸಲಿವೆ.

ADVERTISEMENT

ಬೆಂಗಳೂರಿನಿಂದ ಚೆನ್ನೈ ಮತ್ತು ಹೈದರಾಬಾದ್‌ ಮಾರ್ಗಗಳಲ್ಲಿ ಸಂಚರಿಸುವ ಫ್ಲಿಕ್ಸ್‌ ಬಸ್ ಗಳಿಗೆ ಭಾರಿ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್‌ ಮಂಗಳವಾರ ಹಸಿರು ನಿಶಾನೆ ತೋರಿದರು.ಈ ವೇಳೆ ಜರ್ಮನಿಯ ಡೆಪ್ಯುಟಿ ಕಾನ್ಸುಲ್ ಜನರಲ್ ಅನೆಟ್ ಬೆಸಿಯರ್, ಫ್ಲಿಕ್ಸ್ ಬಸ್ ಸಹ – ಸ್ಥಾಪಕ ಡೇನಿಯಲ್ ಕ್ರೌಸ್, ಫ್ಲಿಕ್ಸ್ ಬಸ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸೂರ್ಯ ಖುರಾನ ಅವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂಬಿ ಪಾಟೀಲ್‌, ಭಾರತವೂ ಸೇರಿದಂತೆ 43 ದೇಶಗಳಲ್ಲಿ ಕಾರ್ಯಾಚರಿಸುತ್ತಿರುವ ಫ್ಲಿಕ್ಸ್‌ ಬಸ್ ಸೇವೆಯು ದಕ್ಷಿಣ ಭಾರತದಲ್ಲಿ ಜನರ ಪ್ರಯಾಣದ ಅನುಭವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಫ್ಲಿಕ್ಸ್‌ಬಸ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸೂರ್ಯ ಖುರಾನಾ ಮಾತನಾಡಿ, “ಉತ್ತರ ಭಾರತದ ಕಾರ್ಯಾಚರಣೆಗಳ ಯಶಸ್ಸಿನ ನಂತರ, ದಕ್ಷಿಣ ಭಾರತಕ್ಕೆ ವಿಸ್ತರಿಸುವುದು ನಮ್ಮ ಉದ್ದೇಶವಾಗಿತ್ತು. ಈ ವಿಸ್ತರಣೆಯು ಹೊಸ ಮಾರ್ಗಗಳ ಬಗ್ಗೆ ಮಾತ್ರವಲ್ಲ, ಇದು ಫ್ಲಿಕ್ಸ್‌ಬಸ್‌ನೊಂದಿಗೆ ಸ್ಥಳೀಯ ನಿರ್ವಾಹಕರನ್ನು ಸಬಲೀಕರಣಗೊಳಿಸಲಿದೆ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್, ಪ್ರಯಾಣಿಕರಿಗೆ ತಡೆರಹಿತ ಪ್ರಯಾಣವನ್ನು ಖಾತ್ರಿಪಡಿಸುತ್ತದೆ ಎಂದರು.

ಈ ವಿಸ್ತರಣೆಯು ದಕ್ಷಿಣ ಭಾರತದಾದ್ಯಂತ 33 ನಗರಗಳನ್ನು ಸಂಪರ್ಕಿಸುತ್ತದೆ. ಇದರೊಂದಿಗೆ ಫ್ಲಿಕ್ಸ್‌ಬಸ್ ಭಾರತದಲ್ಲಿ ಒಟ್ಟಾರೆಯಾಗಿ 101 ನಗರಗಳನ್ನು ಮತ್ತು ರಾಷ್ಟ್ರವ್ಯಾಪಿ 215 ನಿಲ್ದಾಣಗಳನ್ನು ಸಂಪರ್ಕಿಸುತ್ತದೆ. ಲಕ್ಷಾಂತರ ಪ್ರಯಾಣಿಕರಿಗೆ ಪರಿಣಾಮಕಾರಿ ಮತ್ತು ಆರಾಮದಾಯಕ ಪ್ರಯಾಣವನ್ನು ಒದಗಿಸುತ್ತದೆ ಎಂದು ಅವರು ಹೇಳಿದ್ದಾರೆ.ಫ್ಲಿಕ್ಸ್‌ಬಸ್ ಉದ್ಘಾಟನಾ ಕೊಡುಗೆಯಾಗಿ ಪ್ರಯಾಣಿಕರಿಗೆ ವಿಶೇಷ ಆಫರ್ ನೀಡಿದ್ದು, 99 ರೂ. ದರದಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ಈ ಆಫರ್ ಬೆಂಗಳೂರಿನ ಸುತ್ತಮುತ್ತ ಪ್ರಾರಂಭಿಸಲಾದ ಹೊಸ ಮಾರ್ಗಗಳಿಗೆ ಲಭ್ಯವಿದೆ.

Tags: Congress PartyFlixBusFlixBus from GermanyMinister MB Patil
Previous Post

ದರ್ಶನ್​ ಸಿಕ್ಕಿಬಿದ್ದ ರಹಸ್ಯ ಜೊತೆಗೆ ಕ್ರೌರ್ಯದ ಹೊಸ ಫೋಟೋ ರಿಲೀಸ್..

Next Post

ಗುಂಡ್ಲುಪೇಟೆ:ಸಾಲದ ಭಾದೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಇಬ್ಬರ ಆತ್ಮಹತ್ಯೆ.

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
Next Post

ಗುಂಡ್ಲುಪೇಟೆ:ಸಾಲದ ಭಾದೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಇಬ್ಬರ ಆತ್ಮಹತ್ಯೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada