ಡಿಸೆಂಬರ್ 1 ರಂದು ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GHMC) ಗೆ ನಡೆಯಲಿರುವ ಚುನಾವಣೆ ಸಾಕಷ್ಟು ಕುತೂಹಲ ಹುಟ್ಟಿಸಿದೆ.
ಈಗಾಗಲೇ ಬಿಜೆಪಿಯ ರಾಷ್ಟ್ರ ಮಟ್ಟದ ಹಲವಾರು ನಾಯಕರು GHMC ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಇದನ್ನು AIMIM ನಾಯಕ ಅಸಾದುದ್ದೀನ್ ಓವೈಸಿ ವ್ಯಂಗ್ಯದ ಮೂಲಕ ಕುಟುಕಿದ್ದಾರೆ.
ಇದು ಕೇವಲ ಹೈದರಾಬಾದಿನ ಚುನಾವಣೆಯಂತೆ ಕಾಣಿಸುವುದಿಲ್ಲ, ನಾವು ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡುತ್ತಿದ್ದೇವೆ ಎಂಬಂತೆ ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಹೈದರಾಬಾದಿನಲ್ಲಿ ಬೀಡು ಬಿಟ್ಟಿದ್ದಾರೆ. ಚುನಾವಣಾ ಪ್ರಚಾರಕ್ಕೆ ಟ್ರಂಪ್ ಬರಲು ಮಾತ್ರ ಬಾಕಿ ಎಂದು ಓವೈಸಿ ವ್ಯಂಗ್ಯವಾಡಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
GHMC ಚುನಾವಣೆಯು ತೆಲಂಗಾಣದ ಆಡಳಿತರೂಢ ಪಕ್ಷ TRS, AIMIM ಹಾಗೂ BJP ನಡುವಿನ ತ್ರಿಕೋಣ ಸ್ಪರ್ಧೆಗೆ ಸಾಕ್ಷಿಯಾಗಿದೆ.
ಬಿಜೆಪಿ ನಗರದಲ್ಲಿ ತೀವ್ರವಾದ ಮತದಾನ ಅಭಿಯಾನವನ್ನು ಕೈಗೊಂಡಿದೆ. ಹಲವಾರು ಉನ್ನತ ನಾಯರು ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಸ್ಮೃತಿ ಇರಾನಿ, ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಅವರು ಹೈದರಾಬಾದ್ನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದಾರೆ.
150 ಸದಸ್ಯರ ಜಿಎಚ್‌ಎಂಸಿಗೆ ಚುನಾವಣೆ ಡಿಸೆಂಬರ್ 1 ರಂದು ನಡೆಯಲಿದ್ದು, ಮತ ಎಣಿಕೆ ಡಿಸೆಂಬರ್ 4 ರಂದು ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನವಾದ ಭಾನವಾರದಂದು ಅಮಿತ್ ಶಾ ನಗರದಲ್ಲಿ ರೋಡ್ ಶೋ ನಡೆಸಿ, ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ.