ಸೆಂಚುರಿ ಸ್ಟಾರ್ ಡಾ || ಶಿವರಾಜ್ಕುಮಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು ಅವರ ನಟನೆಯ ಘೋಸ್ಟ್ ಚಿತ್ರವು ಮೊದಲ ಹಂತದ ಚಿತ್ರೀಕರಣ ಮುಗಿಸಿದೆ.
ನಗರದ ಮಿನರ್ವ ಮಿಲ್ನಲ್ಲಿ ಸಿನಿಮಾ ಚಿತ್ರೀಕರಣಕ್ಕಾಗಿ 3 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಒಟ್ಟು 15 ಸೆಟ್ಗಳನ್ನು ನಿರ್ಮಾಣ ಮಾಡಲಾಗಿದ್ದು ಚಿತ್ರವು ಬಹುತೇಕ ಕಾರಾಗೃಹ ಹಿನ್ನೆಲೆಯಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ.
ಶಿವರಾಜ್ಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್ನಲ್ಲಿ ಆರಂಭವಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.
ಇನ್ನು ಚಿತ್ರಕ್ಕೆ ಟೋಪಿವಾಲ, ಶ್ರೀನಿವಾಸ ಕಲ್ಯಾಣ, ಓಲ್ಡ್ ಮಾಂಕ್, ಬೀರ್ಬಲ್ ಖ್ಯಾತಿ ಶ್ರೀನಿ ಆಕ್ಷನ್ ಕಟ್ ಹೇಳುತ್ತಿದ್ದು ಸಂದೇಶ್ ನಾಗರಾಜ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ ಈ ಚಿತ್ರಕ್ಕಿದೆ.