ದೇಶದಲ್ಲಿ ಲೋಕಸಭಾಚುನಾವಣೆ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇರುವಂತೆ ಕಾಂಗ್ರೆಸ್ ಕಾಳಗದಲ್ಲಿ ದೊಡ್ಡ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಹೌದು, ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಮಾನಗಳಿಗೂ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ ನೀಡಿದ್ದರೆ.
G-23 ಬಣದಲ್ಲಿ ಕಾಣಿಸಿಕೊಂಡಿದ್ದ ಗುಲಾಂ ನಬಿ ಅಜಾದ್ ಅವರನ್ನು ಕಾಂಗ್ರೆಸ್ ಸಂಪೂರ್ಣ ಕಡೆಗಣಿಸಿತ್ತು ಎಂಬ ಆರೋಪಗಳು ಕೇಳಿಬಂದಿತ್ತು ಅದಕ್ಕೆ ಪುಷ್ಟಿ ನೀಡುವಂತೆ ಈಗ ಅವರು ರಾಜೀನಾಮೆ ನೀಡಿದ್ದಾರೆ.
ನಾಲ್ಕು ಪುಟಗಳ ರಾಜೀನಾಮೆ ಪತ್ರ ನೀಡಿರುವ ಅವರು, ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಹುಕ್ ಗಾಂಧಿಯ ಚೈಲ್ಡಿಸ್ ವರ್ತನೆಗೆ ಪಕ್ಷ ಅಧೋಗತಿಗೆ ಬಂದಿದೆ. ಹಿರಿಯ ನಾಯಕರನ್ನು ಕಡೆಗಣಿಸಲಾಗಿದೆ ಎಂಬ ಹಲವು ಆರೋಪಗಳನ್ನು ಪತ್ರದಲ್ಲಿ ಬರೆದಿದ್ದಾರೆ.
ಗುಲಾಂ ನಬಿ ಆಜಾದ್ ಹಲವು ವರ್ಷಗಳಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಭಾರತೀಯ ರಾಜಕಾರಣಿಯಾಗಿದ್ದು, 2005 ರಿಂದ 2008 ರವರೆಗೆ ಜಮ್ಮು ಮತ್ತು ಕಾಶ್ಮೀರದ ಏಳನೇ ಮುಖ್ಯಮಂತ್ರಿಯಾಗಿದ್ದರು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು.