• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಶ್ಮಿಕಾ ಮಂದಣ್ಣಗೆ ಸೂಕ್ತ ಭದ್ರತೆ ಕೊಡಿ.. ಕೇಂದ್ರ ಸಚಿವರಿಗೆ ಪತ್ರ

ಪ್ರತಿಧ್ವನಿ by ಪ್ರತಿಧ್ವನಿ
March 10, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಕೊಡಗು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ( Rashmika Mandanna ) ಅವರು ತೆಲುಗು, ಹಿಂದಿ ಸೇರಿದಂತೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಲ್ಲಿ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಶ್ಮಿಕಾ ಮಂದಣ್ಣ ಅವರ ಹೆಸರು ಸದ್ದು ಮಾಡಿತ್ತು. ಮಂಡ್ಯ ಶಾಸಕ ರವಿ ಗಣಿಗ (Ravi Ganiga) ಅವರು ನೇರವಾಗೇ ರಶ್ಮಿಕಾ ಮಂದಣ್ಣ ಅವರನ್ನ ಟಾರ್ಗೆಟ್ ಮಾಡಿ ಆಕ್ರೋಶ ಹೊರ ಹಾಕಿದ್ದರು.

ADVERTISEMENT

ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದ ರಶ್ಮಿಕಾ ಮಂದಣ್ಣ ಅವರು ಕನ್ನಡ ಚಿತ್ರರಂಗದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿಲ್ಲ ಅನ್ನೋದು ಕಾಂಗ್ರೆಸ್ ಶಾಸಕ ರವಿ ಗಣಿಗ ಅವರ ಆಕ್ಷೇಪ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಶಾಸಕ ರವಿ ಗಣಿಗ ಅವರ ಈ ನೇರ ನುಡಿ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ( DK Sivakumar ) ಅವರ ನಟ್ಟು, ಬೋಲ್ಟ್ ಟೈಟ್ ಮಾಡುವ ಹೇಳಿಕೆಗಳು ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.

ಚಲನಚಿತ್ರ ಕಲಾವಿದರ ಮೇಲೆ ನೀಡಿದ ಈ ಹೇಳಿಕೆಗಳು ಸಂಚಲನ ಸೃಷ್ಟಿಸಿದ್ದು, ನಟಿ ರಶ್ಮಿಕಾ ಮಂದಣ್ಣಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಸಿಟ್ಟಿಗೆದ್ದಿರುವ ಕೊಡವ ಸಮುದಾಯದ ( Kodava community) ಮುಖಂಡರು ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ಖಂಡಿಸಿದ್ದಾರೆ. ಅಷ್ಟೇ ಅಲ್ಲ ನಮ್ಮ ಸಮುದಾಯದ ಹೆಣ್ಣುಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Union Home Minister Amit Shah) ಹಾಗೂ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್‌ (G. Parameshwar ) ಅವರಿಗೂ ಪತ್ರ ಬರೆದಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ಸೂಕ್ತ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿದೆ.

ಗೃಹ ಸಚಿವರಿಗೆ ಬರೆದ ಪತ್ರದಲ್ಲೇನಿದೆ?
ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಅವರು ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ನಮ್ಮ ಕೊಡಗು ಮೂಲದ ರಶ್ಮಿಕಾ ಮಂದಣ್ಣ ಅವರಿಗೆ ಸರ್ಕಾರ ಸೂಕ್ತ ರಕ್ಷಣೆಯನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ನಮ್ಮ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದವರು. ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಮೂಲಕ ಅವರು ಇಂದು ಭಾರತೀಯ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ನಟಿಯ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನ ತಿಳಿಯದ ಕೆಲವರು ವಿನಾಕಾರಣ ಟೀಕೆ ಮಾಡುವ ಮೂಲಕ ಅವರಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇದು ಘೋರ ಮಾತ್ರವಲ್ಲದೆ ಬೆದರಿಕೆಗೆ ಸಮ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ರಶ್ಮಿಕಾ ಮಂದಣ್ಣ ಭಾರತೀಯ ಚಲನಚಿತ್ರರಂಗಕ್ಕೆ ಸಿಕ್ಕಿರುವ ಅಪೂರ್ವ ಕೊಡುಗೆ. ಅವರು ಶ್ರೇಷ್ಠ ನಟಿ ಎನ್ನುವುದರಲ್ಲಿ ಎರಡು ಮಾತಿಲ್ಲ. ನಟಿ ಸ್ವಂತ ನಿರ್ಧಾರ ಹಾಗೂ ಆಕೆಯ ಆಯ್ಕೆಗಳ ಸ್ವಾತಂತ್ರ್ಯದ ಹಕ್ಕನ್ನು ನಾವೆಲ್ಲರೂ ಗೌರವಿಸಬೇಕು. ಅದನ್ನು ಬಿಟ್ಟು ಯಾರೋ ಒಬ್ಬರ ಸೂಚನೆಯಂತೆ, ನಿರೀಕ್ಷೆಯಂತೆ ಇರಬೇಕು ಎಂದು ಒತ್ತಡ ಹೇರಬಾರದು. ಇದು ರಶ್ಮಿಕಾ ಅವರು ಕೊಡವ ಸಮಾಜಕ್ಕೆ ಸೇರಿರುವ ಕಾರಣದಿಂದಲೇ ಹೀಗೆಲ್ಲ ನಡೆದುಕೊಳ್ಳುತ್ತಿದ್ದಾರೆ ಎಂಬ ಅರ್ಥ ಬರುತ್ತದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಹೇಳಿದ್ದಾರೆ.

Previous Post

ವಿದ್ಯುತ್ ನಿಗಮದ ಅವೈಜ್ಞಾನಿಕ ಭಡ್ತಿಗೆ ಹೈಕೋರ್ಟ್ ತಡೆ

Next Post

ಕೊಪ್ಪಳದಲ್ಲಿ ನಡೆದ ಅತ್ಯಾಚಾರ ಪ್ರಕರಣ, ಮೂರನೇ ಆರೋಪಿ ಬಂಧನ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post

ಕೊಪ್ಪಳದಲ್ಲಿ ನಡೆದ ಅತ್ಯಾಚಾರ ಪ್ರಕರಣ, ಮೂರನೇ ಆರೋಪಿ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada