• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ದಿಟ್ಟ ಉತ್ತರ ನೀಡಿ: ಕಾರ್ಯಕರ್ತರಿಗೆ ಧೈರ್ಯ ತುಂಬಿದ ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
February 20, 2023
in ಕರ್ನಾಟಕ, ರಾಜಕೀಯ
0
ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ದಿಟ್ಟ ಉತ್ತರ ನೀಡಿ: ಕಾರ್ಯಕರ್ತರಿಗೆ ಧೈರ್ಯ ತುಂಬಿದ ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು: ಯಾವುದೇ ಕಾರಣಕ್ಕೂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ನಡೆಸುತ್ತಿರುವ ದೌರ್ಜನ್ಯದ ಬಗ್ಗೆ ಎದೆಗುಂದಬೇಡಿ. ಯಾವುದೇ ಕ್ಷಣದಲ್ಲಿ ನಿಮಗೆ ತೊಂದರೆ ಆದರೆ, ನನ್ನನ್ನು ಕೂಡಲೇ ಸಂಪರ್ಕಿಸಿ. ನಿಮ್ಮ ನೆರವಿಗೆ ಧಾವಿಸುತ್ತೇನೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾರ್ಯಕರ್ತರಿಗೆ ಭರವಸೆ ನೀಡಿದರು.

ADVERTISEMENT

ಜೆಡಿಎಸ್ ಸಂಘಟನೆ ಹಾಗೂ ಮುಂಬರುವ ವಿಧಾನಸಭೆ ಚುನಾವಣೆಗೆ ಭರದಿಂದ ಸಿದ್ಧತೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇಂದು ಬೆಂಗಳೂರಿನಿಂದ ಕಾರ್ಯಕರ್ತರ ಜತೆ ಕಾನ್ಫರೆನ್ಸ್ ಕಾಲ್ ಮೂಲಕ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಅವರ ಬಳಿ ಅಳಲು ತೋಡಿಕೊಂಡ ಅನೇಕ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರ ದೌರ್ಜನ್ಯ ಮೇರೆ ಮೀರಿದ್ದು, ಸುಳ್ಳು ಕೇಸುಗಳನ್ನು ತಮ್ಮ ಮೇಲೆ ಹಾಕಿ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿದರು.

ಇದಕ್ಕೆ ಉತ್ತರ ನೀಡಿದ ಕುಮಾರಸ್ವಾಮಿ ಅವರು, ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆ ಇಲ್ಲ. ನಮ್ಮ ಕಾರ್ಯಕರ್ತರು ಇಂಥ ಬೆದರಿಕೆ, ಒತ್ತಡ ತಂತ್ರಗಳಿಗೆ ಅಂಜಬಾರದು. ಇಂಥ ಬೆದರಿಕೆಗಳಿಗೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಕುಮಾರಸ್ವಾಮಿ ಅವರು ಕಾರ್ಯಕರ್ತರಿಗೆ ಆಶ್ವಾಸನೆ ನೀಡಿದರು.

ಕಾರ್ಯಕರ್ತರಿಗೆ ಪಕ್ಷದ ಸದ್ಯದ ಚಟುವಟಿಕೆಗಳು, ಆಗುಹೋಗಗಳ ಬಗ್ಗೆ ಹಾಗೂ ಪಂಚರತ್ನ ಯೋಜನೆಗಳು, ಪಂಚರತ್ನ ರಥಯಾತ್ರೆ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ನೀಡಿದ ಮಾಜಿ ಸಿಎಂ, ಎರಡು ಲಕ್ಷ ಮೂವತ್ತೈದು ಲಕ್ಷ ಕುಟುಂಬಗಳಿಗೆ ಸಾಲ ಮನ್ನಾ ಆಗಿಲ್ಲ, ಸುಮಾರು ಹತ್ತು ಸಾವಿರ ಕೋಟಿ ರೂಪಾಯಿ ಹಣ ಬಿಜೆಪಿ ಸರಕಾರ ಕೊಟ್ಟಿಲ್ಲ. ಬೂತ್ ಮಟ್ಟದಲ್ಲಿ ಪ್ರತಿ ಮನೆಗೆ ಹೋಗಿ ಯಾರಿಗೆ ಸಾಲ ಮನ್ನಾ ಆಗಿದೆ, ಯಾರಿಗೆ ಆಗಿಲ್ಲ ಎಂಬ ಮಾಹಿತಿ ಪಡೆಯಿರಿ, ಸಾಲ ಮನ್ನಾ ಆಗದಿರುವ ಕುಟುಂಬಗಳಿಗೆ ಸಾಲ ಮನ್ನಾ ಆಗುತ್ತದೆ ಎಂದು ಭರವಸೆ ನೀಡಿ. ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಉಳಿದವರ ಸಾಲ ಮನ್ನಾ ಮಾಡುತ್ತೇನೆ, ಈ ಬಗ್ಗೆ ಭರವಸೆ ಮೂಡಿಸಿ ಎಂದು ಸೂಚನೆ ನೀಡಿದರು.

ಪಕ್ಷಕ್ಕೆ ಕಾರ್ಯಕರ್ತರೇ ಆಧಾರ ಸ್ತಂಭ. ಮತಗಟ್ಟೆ ಪ್ರದೇಶದಲ್ಲಿ ನಮ್ಮ ಪಕ್ಷವನ್ನು ಕಾರ್ಯಕರ್ತರೇ ತೇರ್ಗಡೆ ಮಾಡಬೇಕು. ಕಾರ್ಯಕರ್ತರು ಇಲ್ಲದೆ ಪಕ್ಷ ನಡೆಯಲು ಸಾಧ್ಯ ಇಲ್ಲ. ನಾಯಕರು, ಜನರ ನಡುವಿನ ಅಂತರವನ್ನು ಕಡಿಮೆ ಮಾಡುವುದರ ಜತೆಗೆ ಪಕ್ಷವನ್ನು ಬೇರು ಮಟ್ಟದಲ್ಲಿಯೇ ಬೆಳೆಸುವ ಕೆಲಸವನ್ನು ಕಾರ್ಯಕರ್ತರು ಸಮರ್ಥವಾಗಿ ಮಾಡಬೇಕು.ಅದಕ್ಕೆ ಬೇಕಾದ ಎಲ್ಲ ಪ್ರಯತ್ನ ಮಾಡಿ, ನಿಮಗೆ ನನ್ನ ಮಾರ್ಗದರ್ಶನ ಇರುತ್ತದೆ ಎಂದು ಹೇಳಿದರು.

ಯಾವ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು, ಇತರೆ ಪಕ್ಷಗಳು ನಡೆಸುತ್ತಿರುವ ಅಬ್ಬರದ ಪೊಳ್ಳು ಪ್ರಚಾರಕ್ಕೆ ಸಡ್ಡು ಹೊಡೆಯಲು ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ವಿಜಯಪುರ ಜಿಲ್ಲೆಯ ಶಾಂತೇಶ್ ಹೂಗಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು, ಪಂಚರತ್ನ ಯೋಜನೆಗಳ ಬಗ್ಗೆ ತಿಳಿಸಿ, ಉಚಿತ ಶಿಕ್ಷಣ, ಉಚಿತ ಆರೋಗ್ಯ, ಉಚಿತ ಮನೆ, ಕೃಷಿಗೆ ಉಚಿತ ವಿದ್ಯುತ್ 65 ವರ್ಷ ಮೀರಿದವರಿಗೆ ಮಾಸಿಕ 5000 ರೂ. ವೃದ್ದಾಪ್ಯ ವೇತನ, ವಿಕಲಚೇತನರು, ಅಶಕ್ತರು, ವಿಧವೆಯರಿಗೆ ಮಾಸಿಕ  2500 ರೂಪಾಯಿ  ವಿಧವಾ ವೇತನ ಇತ್ಯಾದಿ ಕಾರ್ಯಕ್ರಮಗಳ ಬಗ್ಗೆ ತಿಳಿಸಿ ಎಂದು ಸೂಚನೆ ನೀಡಿದರು.

2023ಕ್ಕೆ ಜೆಡಿಎಸ್ ಸರಕಾರ ಬಂದರೆ, ಕಾರ್ಯಕರ್ತರಿಗೆ ಹೆಚ್ಚಿನ ಶಕ್ತಿ ತುಂಬಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಅಖಿಲ್ ರೆಡ್ಡಿ ನೀಡಿದ ಸಲಹೆಗೆ ಒಮ್ಮತ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿಗಳು, ಕಾರ್ಯಕರ್ತರಿಗೆ ಹೆಚ್ಚು ಮಹತ್ವ ನೀಡುತ್ತೇನೆ, ಪಂಚಾಯಿತಿ ಮಟ್ಟದಲ್ಲಿ ಐವರು ಕಾರ್ಯಕರ್ತರ ನೇತೃತ್ವದಲ್ಲಿ ಪಂಚರತ್ನ ಯೋಜನೆಗಳ ಜಾರಿಗೆ ಒಂದು ತಂಡ ಮಾಡುತ್ತೇನೆ, ಪಂಚರತ್ನಗಳ ಜಾರಿಗೆ ಅವರದೇ ಉಸ್ತುವಾರಿ ಇರುತ್ತದೆ. ಅಲ್ಲದೆ ಬೂತ್ ಮಟ್ಟದಲ್ಲಿ ಕಾರ್ಯಕರ್ತರಿಗೆ ಪೂರ್ಣ ರಕ್ಷಣೆ ನೀಡುವುದು ನನ್ನ ಜವಾಬ್ದಾರಿ ಎಂದು ತಿಳಿಸಿದರು ಮಾಜಿ ಮುಖ್ಯಮಂತ್ರಿಗಳು.

ಪ್ರತಿ ತಿಂಗಳು ಸಂವಾದ:
ಪಕ್ಷದ ಬಲವರ್ಧನೆಗೆ ಹಾಗೂ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಪ್ರತೀ ತಿಂಗಳು ಕಾರ್ಯಕರ್ತರಿಗೆ ಸಾಮೂಹಿಕ ಕರೆ ಮಾಡಿ ಮಾತನಾಡುತ್ತೇನೆ. ಸಮಸ್ಯೆ, ಸಲಹೆಗಳನ್ನು ಮುಕ್ತವಾಗಿ ಹಂಚಿಕೊಳ್ಳಬಹುದು ಎಂದು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಕರೆ ನೀಡಿದರು.

Tags: ಎಚ್ ಡಿ ಕುಮಾರಸ್ವಾಮಿ
Previous Post

ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ: ರೋಹಿಣಿ ಸಿಂಧೂರಿ

Next Post

ಕನ್ನಡಿಗರು ಮರೆಯಲಾಗದ ಸಿನಿಮಾಗಳನ್ನು ನೀಡಿದ ನಿರ್ದೇಶಕ ಎಸ್‌ ಕೆ ಭಗವಾನ್‌ ವಿಧಿವಶ..!

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
ಕನ್ನಡಿಗರು ಮರೆಯಲಾಗದ ಸಿನಿಮಾಗಳನ್ನು ನೀಡಿದ ನಿರ್ದೇಶಕ ಎಸ್‌ ಕೆ ಭಗವಾನ್‌ ವಿಧಿವಶ..!

ಕನ್ನಡಿಗರು ಮರೆಯಲಾಗದ ಸಿನಿಮಾಗಳನ್ನು ನೀಡಿದ ನಿರ್ದೇಶಕ ಎಸ್‌ ಕೆ ಭಗವಾನ್‌ ವಿಧಿವಶ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada