ರಾಯಚೂರು : ಕಲ್ಯಾಣ ಕರ್ನಾಟಕ ಭಾಗಕ್ಕೆ ಡಿಸಿಎಂ ಸ್ಥಾನ ನೀಡುವಂತೆ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಈಶ್ವರ್ ಖಂಡ್ರೆಗೆ ಈ ಬಾರಿ ಡಿಸಿಎಂ ಸ್ಥಾನ ನೀಡಬೇಕು ಎಂದು ಶಿವಾಚಾರ್ಯ ಸ್ವಾಮೀಜಿ ಕಾಂಗ್ರೆಸ್ ವರಿಷ್ಠರಿಗೆ ಮನವಿ ಮಾಡಿದ್ದಾರೆ.
![](https://pratidhvani.com/wp-content/uploads/2023/05/eshwarkhandre-1605705118.jpg)
ಕಾಂಗ್ರೆಸ್ ಮುಂದಿನ ಐದು ವರ್ಷಗಳ ಕಾಲ ಉತ್ತಮ ಆಡಳಿತ ನೀಡುವಂತಾಗಲಿ. ನಾವು ಜಾತಿ ಆಧಾರದ ಮೇಲೆ ಸ್ಥಾನಮಾನ ಕೇಳಿಲ್ಲ. ಈಶ್ವರ ಖಂಡ್ರೆಗೆ ಡಿಸಿಎಂ ಆಗುವ ಅರ್ಹತೆ ಇದೆ. ಹೀಗಾಗಿ ಕೇಳುತ್ತಿದ್ದೇವೆ ಎಂದು ಹೇಳಿದರು.
ಇದರ ಜೊತೆಯಲ್ಲಿ ಹಾಲಿ ಶಾಸಕ ಹಂಪನಗೌಡ ಬಾದರ್ಲಿಗೂ ಸಚಿವ ಸ್ಥಾನ ಸಿಗಬೇಕು ಎಂದು ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.