ಆಯುಷ್ಮಾನ್ ಭಾರತ್ ಯೋಜನೆ ಅಡಿ ಕರೋನಾಗೆ ಚಿಕಿತ್ಸೆ ಕೊಡಿ- ಹೆಚ್.ಡಿ ಕುಮಾರಸ್ವಾಮಿ

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇಕಡ 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ. ಯೋಜನೆ ವ್ಯಾಪ್ತಿಗೆ ಕೋವಿಡ್ ಅನ್ನೂ ಸೇರಿಸುವುದು ಅಗತ್ಯವಾಗಿದೆ ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕರೋನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು.‌ ಈ ಸಂಬಂಧ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇಕಡ 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ. ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯಲು ಇರುವ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸರ್ಕಾರವನ್ನುಕ್ಕೆ ಒತ್ತಾಯಿಸಿದ್ದಾರೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...