• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರಿಯಾಂಕ ಗಾಂಧಿ ಗೋವಾ ಭೇಟಿ ಬೆನ್ನಲ್ಲೇ ಕಾಂಗ್ರೆಸ್ ಗುಂಪೊಂದು ರಾಜೀನಾಮೆ; ಪಕ್ಷದಲ್ಲಿ ಹೆಚ್ಚಾದ ಅಸಮಾಧಾನ

Any Mind by Any Mind
December 10, 2021
in ದೇಶ, ರಾಜಕೀಯ
0
ಪ್ರಿಯಾಂಕ ಗಾಂಧಿ ಗೋವಾ ಭೇಟಿ ಬೆನ್ನಲ್ಲೇ ಕಾಂಗ್ರೆಸ್ ಗುಂಪೊಂದು ರಾಜೀನಾಮೆ; ಪಕ್ಷದಲ್ಲಿ ಹೆಚ್ಚಾದ ಅಸಮಾಧಾನ
Share on WhatsAppShare on FacebookShare on Telegram

ದೇಶದಲ್ಲಿ ಪಂಚರಾಜ್ಯ ಚುನಾವಣೆಯ ಕಾವು ಜೋರಾಗಿದೆ. ರಾಷ್ಟ್ರೀಯ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷಗಳು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈಗಾಗಲೇ ತಮ್ಮ ರಣತಂತ್ರಗಾರಿಕೆಯ ಆಟಗಳನ್ನು ಶುರುಹಚ್ಚಿಕೊಂಡಿದ್ದಾರೆ. ಇದಕ್ಕೆ ಗೋವಾ ರಾಜಕಾರಣ ಹೊಸ ಸೇರ್ಪಡೆಯಾಗಿದೆ.

ADVERTISEMENT

ಗೋವಾ ವಿಧಾನಸಭೆ ಚುನಾವಣೆಗೆ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ವಿಚಾರ ಮತ್ತು ಸರಣಿ ಸಭೆಗಳನ್ನು ಆಯೋಜಿಸಲು ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು ಶುಕ್ರವಾರ ಕಡಲ ರಾಜ್ಯ ಗೋವಾಕ್ಕೆ ಭೇಟಿ ಸಂದರ್ಭದಲ್ಲೇ ಕಾಂಗ್ರೆಸ್ ನ ಗುಂಪೊಂದು ರಾಜೀನಾಮೆ ನೀಡಿದೆ. ಪೊರ್ವೊರಿಮ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರ ಗುಂಪು ಶುಕ್ರವಾರ ಬೆಳಗ್ಗೆ ರಾಜೀನಾಮೆ ಸಲ್ಲಿಸಿರುವ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷೇತರ ಶಾಸಕ ರೋಹನ್ ಖೌಂಟೆ  ಮುಂಬರುವ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಪೊರ್ವೊರಿಮ್ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯ ಗುಪೇಶ್ ನಾಯ್ಕ್ ʻʻಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪರ್ಧಿಸಲು ಹೆಚ್ಚಾಗಿ ಆಸಕ್ತಿ ತೋರುತ್ತಿಲ್ಲ. ಕೆಲವು ನಾಯಕರ ವರ್ತನೆಯಿಂದ ಈ ರಾಜೀನಾಮೆ ಪರ್ವ ಆರಂಭವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಗೋವಾ ಕಾಂಗ್ರೆಸ್ ಗೆ ಮತ್ತೊಂದು ಆಘಾತವಾಗಿದೆ. ದಕ್ಷಿಣ ಗೋವಾದ ಹಿರಿಯ ಕಾಂಗ್ರೆಸ್ ನಾಯಕ ಮೊರೆನೊ ರೆಬೆಲೊ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷದಿಂದ ಹೊರಬಂದಿದ್ದಾರೆ.

ಈ ಬಗ್ಗೆ ರಾಜೀನಾಮೆ ಪತ್ರದಲ್ಲಿ ಕಾರಣ ತಿಳಿಸಿರುವ ರೆಬೆಲೊ, ಕರ್ಟೋರಿಮ್ ಕ್ಷೇತ್ರದ ಹಾಲಿ ಶಾಸಕ ಅಲೆಕ್ಸೊ ರೆಜಿನಾಲ್ಡೊ ಲೌರೆಂಕೊರವರು ಪಕ್ಷ ವಿರೋಧಿ ಕೆಲಸ ಮಾಡಿದ್ದರೂ ಸಹ ಅವರ ವಿರುದ್ದ ಯಾವುದೇ ಕ್ರಮ ಜರುಗಿಸದೆ ಅವರನ್ನು ಕರ್ಟೋರಿಮ್ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿರುವುದು ಸರಿಯಲ್ಲ ಎಂದಿದ್ದಾರೆ. ಈ ಹಿಂದೆ ರೆಬೆಲೊ ಕರ್ಟೋರಿಮ್ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ನಾಲ್ಕು ವರ್ಷಗಳಿಂದ ಪಕ್ಷದ ಯಾವುದೇ ಕಾರ್ಯಕ್ರಮ, ಸಭೆಗಳಲ್ಲಿ ಭಾಗಿಯಾಗದೆ ಪಕ್ಷದ ವಿರುದ್ದ ಮಾತನಾಡುತ್ತ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದರು ಎನ್ನುವ ಆರೋಪಗಳು ರೆಬೆಲೊ ಮೇಲಿವೆ.

ಈ ಹಿಂದೆ ಗೋವಾ ಉಸ್ತುವಾರಿ ಪಿ. ಚಿದಂಬರಂ ವಿಧಾನಸಭಾ ಚುನಾವಣೆಗೆ ಗೋವಾ ಫಾರ್ವರ್ಡ್ ಪಕ್ಷದ ಜೊತೆಗೆ ಚುನವಣಾ ಪೂರ್ವ ಮೈತ್ರಿ  ಮಾಡಿಕೊಳ್ಳುವುದರ ಬಗ್ಗೆ ಘೋಷಿಸಿದ್ದರು. ಈ ಘೋಷಣೆ ಬೆನ್ನಲ್ಲೇ ಪಕ್ಷದೊಳಗೆ ಅಸಮಾಧಾನದ ಬೇಗುದಿ ಹೊಗೆಯಾಡಲು ಶುರುವಾಗಿದ್ದು, ಚುನಾವಣಾ ಫಲಿತಾಂಶದ ಮೇಲೆ ಹೇಗೆಲ್ಲಾ ಪರಿಣಾಮ ಬೀರಲಿದೆ ಎಂಬುದನ್ನು ಕಾದುನೋಡಬೇಕಿದೆ.

Tags: BJPCongress PartyGoaGoa CongressPriyankaGandhiVadraResignationಬಿಜೆಪಿ
Previous Post

ನಾನು ಮುಖ್ಯ ಮಂತ್ರಿಯಾಗುತ್ತೇನೆಂದು ಎಲ್ಲಿಯೂ ಹೇಳಿಲ್ಲ: ಸಚಿವ ನಿರಾಣಿ

Next Post

ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ಕುಟುಕಿದ ಮಾಜಿ ಸಿಎಂ ಕುಮಾರಸ್ವಾಮಿ

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ಕುಟುಕಿದ ಮಾಜಿ ಸಿಎಂ ಕುಮಾರಸ್ವಾಮಿ

ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ಕುಟುಕಿದ ಮಾಜಿ ಸಿಎಂ ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada