• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

ಪ್ರತಿಧ್ವನಿ by ಪ್ರತಿಧ್ವನಿ
July 5, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮಿತ್ರಪಕ್ಷದ ಮುಲಾಜಿನಲ್ಲಿ ಕಾಂಗ್ರೆಸ್; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ, ಮಂಡ್ಯಕ್ಕೆಷ್ಟು ಅನುದಾನ; ಮೊದಲು ತಿಳಿಯಲಿ ಎಂದು ಚೆಲುವರಾಯಸ್ವಾಮಿಗೆ ತಿರುಗೇಟು, RSS ಬಗ್ಗೆ ಟೀಕೆ; ಪ್ರಿಯಾಂಕ್ ಖರ್ಗೆ ಮೇಲೆ ಹೆಚ್ಡಿಕೆ ಕೆಂಡ.

ADVERTISEMENT

ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ, ತಮಿಳುನಾಡಿನ ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H D Kumarswamy) ಅವರು ಹೇಳಿದರು.

ಮೈಸೂರಿನಲ್ಲಿ ಶನಿವಾರ ದಿಶಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಸಚಿವರು ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತನ್ನ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ. ನಾನು ಐದೇ ನಿಮಿಷದಲ್ಲಿ ಈ ಯೋಜನೆಗೆ ಪ್ರಧಾನಮಂತ್ರಿಗಳ ಒಪ್ಪಿಗೆ ಕೊಡಿಸುತ್ತೇನೆ. ಚುನಾವಣೆ ಸಂದರ್ಭದಲ್ಲಿ ಹೇಳಿದ್ದ ನನ್ನ ಈ ಮಾತಿಗೆ ನಾನು ಈಗಲೂ ಬದ್ಧವಾಗಿದೇನೆ ಎಂದು ಕೇಂದ್ರ ಸಚಿವರು ಪುನರುಚ್ಚರಿಸಿದರು.

ಡಿಎಂಕೆ (DMK) ಮುಲಾಜಿನಲ್ಲಿ ಕಾಂಗ್ರೆಸ್!!:

ಕಾಂಗ್ರೆಸ್ ನವರಿಗೆ ಮಿತ್ರಪಕ್ಷದ ಮುಲಾಜು ಇದೆ. ಅವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಡಿಎಂಕೆ ಪಕ್ಷವನ್ನು ಎದುರು ಹಾಕಿಕೊಳ್ಳುವ ಅಥವಾ ಅವರನ್ನು ಧಿಕ್ಕರಿಸುವ ಶಕ್ತಿಯೂ ಇಲ್ಲ. ತಮಿಳುನಾಡು ಸರ್ಕಾರವನ್ನು ದೈರ್ಯವಾಗಿ ಧಿಕ್ಕರಿಸಿ ಮೇಕೆದಾಟು ಯೋಜನೆ ಕೈಗೆತ್ತಿಗೊಂಡದರೆ ಅದು ಸಾಧ್ಯ ಆಗುತ್ತದೆ ಎಂದು ಸಚಿವರು ಹೇಳಿದರು.

ಮೇಕೆದಾಟು ಯೋಜನೆ ಕಾಂಗ್ರೆಸ್ ಕೈಯಲ್ಲಿ ಸಾಧ್ಯ ಆಗುವುದಿಲ್ಲ. ತಮಿಳುನಾಡು ಸರ್ಕಾರವನ್ನೇ ಒಪ್ಪಿಸದೆ ಮೇಕೆದಾಟು ಯೋಜನೆ ಕಚೇರಿ ತೆರೆದರೆ ಏನು ಪ್ರಯೋಜನ? ಮೇಕೆದಾಟು ಮಾಡುತ್ತೇವೆ ಎಂದು ಹೇಳಿದವರು ಕಾಂಗ್ರೆಸ್ ನವರು, ನಾನಲ್ಲ. ಯೋಜನೆ ಮಾಡುತ್ತೇವೆ ಎಂದು ಹೇಳಿದವರು ಮಾಡಬೇಕು ತಾನೇ? ಮೇಕೆದಾಟು ಹೆಸರಿನಲ್ಲಿ ಪಾದಯಾತ್ರೆ ಮಾಡಿ ಅಧಿಕಾರಕ್ಕೆ ಬಂದರಲ್ಲ, ಎರಡೂವರೆ ವರ್ಷದಿಂದ ಸುಮ್ಮನೆ ಸಮಯ ಹಾಳು ಮಾಡುತ್ತಿದ್ದಾರೆ ಅಷ್ಟೇ. ಸುಮ್ಮನೆ ನನ್ನ ಮೇಲೆ ಜವಾಬ್ದಾರಿ ಹೊರಿಸಿದರೆ ನಾನು ಹೇಗೆ ಮಾಡಲು ಸಾಧ್ಯ? ಎಂದು ಅವರು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷಕ್ಕೆ ನನ್ನ ಭಯವಿದೆ, ಅದಕ್ಕೆ ನನ್ನನ್ನು ಟಾರ್ಗೆಟ್ ಮಾಡುತ್ತಿದೆ:

ಕಾಂಗ್ರೆಸ್ ಪಕ್ಷದವರಿಗೆ ಜನರ ಕೆಲಸ ಮಾಡುವುದು ಬಿಟ್ಟು ರಾಜಕೀಯ ಮಾಡುವುದರಲ್ಲಿ ಹೆಚ್ಚು ಆಸಕ್ತಿ ಇದೆ. ಕಾಂಗ್ರೆಸ್ ಪಕ್ಷಕ್ಕೆ ನನ್ನನ್ನು ಕಂಡರೆ ಭಯ. ನನ್ನೊಬ್ಬನ ಮೇಲೆಯೇ ಆ ಪಕ್ಷಕ್ಕೆ ಅತಿಯಾದ ಭಯವಿದೆ. ಈಗಾಗಿ ಪದೇಪದೇ ಕಾಂಗ್ರೆಸ್ ಮುಖಂಡರು ನನ್ನ ಹೆಸರನ್ನು ಜಪ ಮಾಡುತ್ತಿರುತ್ತಾರೆ. ಬಿಜೆಪಿ – ಜೆಡಿಎಸ್ ಜೊತೆಯಾದ ಮೇಲಂತೂ ಕಾಂಗ್ರೆಸ್ ನಾಯಕರಿಗೆ ನಿದ್ದೆಯೇ ಬರುತ್ತಿಲ್ಲ. ಈಗಾಗಿ ನನ್ನ ಮೇಲೆ ಪದೇಪದೇ ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ನೇರ ಆರೋಪ ಮಾಡಿದರು.

ಮುಂದೆ ಕೂಡ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ, ಸಂತೋಷ. ಮುಂದಿನ ಐದು ವರ್ಷ ಅಲ್ಲದಿದ್ದರೆ ಐವತ್ತು ವರ್ಷ ಅವರೇ ಆಳ್ವಿಕೆ ಮಾಡಲಿ. ಮೊದಲು ಜನರು ಹೇಳಿದ ಕೆಲಸ ಮಾಡಿ. ಇಪ್ಪತ್ತು ವರ್ಷ ನಮ್ಮದೇ ಸರ್ಕಾರ ಎಂದವರು ಏನೇನಾದರೂ ಎನ್ನುವುದು ನನಗೆ ಗೊತ್ತಿದೆ. ಮುಂದೆ ಯಾರದ್ದು ಸರ್ಕಾರ ಎಂಬುದನ್ನು ಜನರೇ ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ನಲ್ಲಿ ಸಿಎಂ ಖುರ್ಚಿಗಾಗಿ ಗಲಾಟೆಗಳೇ ನಡೆಯುತ್ತಿದೆ. ಗಲಾಟೆಯಲ್ಲಿ ಮುಳುಗಿರುವ ಕಾಂಗ್ರೆಸ್ ಪಕ್ಷವನ್ನು ಜನ ಹೇಗೆ ಒಪ್ಪುತ್ತಾರೆ? ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವರು ಟೀಕಾಪ್ರಹಾರ ನಡೆಸಿದರು.

ಮಂಡ್ಯಕ್ಕೆ ಎಷ್ಟು ಅನುದಾನ ತಂದಿದ್ದೇನೆ ಎಂದು ಮೊದಲು ತಿಳಿಯಲಿ; ಚೆಲುವರಾಯಸ್ವಾಮಿಗೆ ತಿರುಗೇಟು

ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಸದನಾಗಿ ನಾನು ಎಷ್ಟು ಅನುದಾನ ತಂದಿದ್ದೇನೆ ಎಂಬ ಬಗ್ಗೆ ನನ್ನ ಬಗ್ಗೆ ಟೀಕೆ ಮಾಡಿರುವ ಸಚಿವ ಮಹಾಶಯರು ಮೊದಲು ಮಾಹಿತಿ ಪಡೆದುಕೊಂಡು ಮಾತಾಡಲಿ. ಕೇವಲ ಸಂಸದರ ಅನುದಾನ ತಂದಿದ್ದಾರೆ ಎಂದು ಅವರು ಹೇಳಿದ್ದಾರೆ. ನಾನು ಬರೀ ಸಂಸದರ ನಿಧಿಯಿಂದ ಹಣ ತಂದಿಲ್ಲ. ಬೇರೆ ಬೇರೆ ವಿಶೇಷ ಅನುದಾನಗಳನ್ನೇ ತಂದಿದ್ದೇನೆ. ಮಾಹಿತಿ ಇಲ್ಲದಿದ್ದರೆ ಮಾತನಾಡಬಾರದು. ನಾನು ವಿವಿಧ ಬಾಬ್ತುಗಳಿಂದ ಎಷ್ಟು ಅನುದಾನ ತಂದಿದ್ದೇನೆ ಎಂಬುದನ್ನ ಮೊದಲು ಅವರು ತಿಳಿದುಕೊಳ್ಳಲಿ. ಸಂಸದರ ಅನುದಾನ ಅಲ್ಲದೆ ಸಿಎಸ್ ಆರ್ ಮೂಲದಿಂದಲೂ ಅನುದಾನ ತಂದಿದ್ದೇನೆ ಎಂಬುದು ಮಂಡ್ಯ ಜನತೆಗೆ ಗೊತ್ತಿದೆ. ಸಚಿವರಾದವರಿಗೆ ಮಾಹಿತಿ ಇಲ್ಲದಿದ್ದರೆ ನಾನು ಏನು ಮಾಡಲು ಸಾಧ್ಯ? ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ ಕೇಂದ್ರ ಸಚಿವರು ತಿರುಗೇಟು ನೀಡಿದರು.

ಪೂರ್ವ ನಿಗದಿತ ಸಭೆಗಳ ಕಾರಣಕ್ಕೆ ಬಂದಿಲ್ಲ:

ಸಚಿವರು ಸಭೆಗಳಿಗೆ ನನ್ನನ್ನು ಕರೆದಿಲ್ಲ ಎಂದಲ್ಲ. ನಾನು ಕೇಂದ್ರ ಸಚಿವನಾಗಿದ್ದೇನೆ. ಪೂರ್ವ ನಿಯೋಜಿತವಾಗಿ ಅನೇಕ ಸಭೆಗಳು ನಿಗದಿ ಆಗಿರುತ್ತದೆ. ಬೇರೆ ರಾಜ್ಯಗಳ ಪ್ರವಾಸಗಳು ಕೂಡ ಇರುತ್ತವೆ. ಆದರೂ ನಾನು ಮಂಡ್ಯ ಕ್ಷೇತ್ರಕ್ಕೆ ಆದ್ಯತೆಯ ಮೇರೆಗೆ ಭೇಟಿ ನೀಡುತ್ತಿದ್ದೇನೆ. ನನ್ನ ಪಾಲಿನ ಕೆಲಸಗಳನ್ನು ಯಾವುದೂ ಬಾಕಿ ಉಳಿಸಿಕೊಂಡಿಲ್ಲ. ಇವರು ತರಾತುರಿಯಲ್ಲಿ ಸಭೆಗಳಿಗೆ ಬನ್ನಿ ಎಂದು ಕರೆದಾಗ ಅದಕ್ಕೂ ಮೊದಲೇ ನಿಗದಿ ಆಗಿರುವ ಸಭೆಗಳು ಇರುತ್ತವೆ. ಹೀಗಾಗಿ ಅವರ ಸಭೆಗಳಿಗೆ ಹೋಗಲು ಆಗಿಲ್ಲ ಅಷ್ಟೇ. ಅದರಲ್ಲಿ ಬೇರೆ ಅರ್ಥ ಹುಡುಕುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವರು ಸ್ಪಷ್ಟಪಡಿಸಿದರು.

ದಿಶಾ ಸಭೆಯಲ್ಲಿ ಪಾಲ್ಗೊಂಡ ಸಚಿವರು:

ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಮೈಸೂರು ಜಿಲ್ಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ ಅಸಭ್ಯ ಅಧ್ಯಕ್ಷತೆಯನ್ನು ವಹಿಸಿದರು.

ಸಭೆಯಲ್ಲಿ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್(yaduveer Krishnadatta Chamaraja Wadeyar), ಸುನೀಲ್ ಬೋಸ್(Sunil Bose), ಶಾಸಕರಾದ ಜಿ.ಡಿ. ಹರೀಶ್ ಗೌಡ(GD harish gowda), ಶ್ರೀವತ್ಸ, ಮಾಜಿ ಶಾಸಕ ಹಾಗೂ ದಿಶಾ ಸಮಿತಿ ನಾಮನಿರ್ದೇಶಿತ ಸದಸ್ಯ ಅಶ್ವಿನ್ ಕುಮಾರ್, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತಿ ಸಿಇಒ ಯುಕೇಶ್, ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್(Shaik Tanveer) ಆಸಿಫ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್(Vishnuvardhan), ಡಿಸಿಪಿ‌ ಸುಂದರರಾಜ್ (DCP Sundarraj)ಸೇರಿದಂತೆ ವಿವಿಧ ಅಧಿಕಾರಿಗಳು ಭಾಗಿ ಆಗಿದ್ದರು.

ಆರ್ ಎಸ್ ಎಸ್ ಎಸ್ ಬಗ್ಗೆ ಟೀಕೆ; ಪ್ರಿಯಾಂಕ್ ಖರ್ಗೆ ಮೇಲೆ ಹೆಚ್ಡಿಕೆ ಕೆಂಡ

ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಟೀಕೆ ಕುರಿತು ಕಟುವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಸಂಘದ ಬಗ್ಗೆ ಮಾತನಾಡಿ ಬಾಯಿ ಚಪಲ ತೀರಿಸಿಕೊಳ್ಳುವ ಬದಲು 40 ವರ್ಷದಿಂದ ಕಲ್ಯಾಣ ಕರ್ನಾಟಕಕ್ಕೆ ಮಾಡಿದ್ದೇವೆ ಎಂಬುದನ್ನು ಮೊದಲು ಹೇಳಲಿ ಎಂದು ಚಾಟಿ ಬೀಸಿದರು.

ಆರ್ ಎಸ್ ಎಸ್ ಅನ್ನು ಬಂದ್ ಮಾಡುವುದಿರಲಿ, ಈಗ ಕಾಂಗ್ರೆಸ್ ಪಕ್ಷವೇ ಎಲ್ಲಾ ಕಡೆ ಬಂದ್ ಆಗುತ್ತಿದೆ. ಜನರೇ ಬಹುತೇಕ ಕಡೆ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡುತ್ತಿದ್ದಾರೆ. ಮೊದಲು ನಿಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಿ. ಪ್ರಿಯಾಂಕ್ ಖರ್ಗೆ ಅವರು ಬಾಯಿ ಚಪಲಕ್ಕೆ ಮೂಲ ವಿಚಾರಗಳನ್ನ ಮರೆ ಮಾಚಲು ಈ ರೀತಿ ಹೇಳಿಕೆ ಕೊಡ್ತಿದ್ದಾರೆ ಅಷ್ಟೇ ಎಂದು ಕೇಂದ್ರ ಸಚಿವರುಕ್ ವಾಗ್ದಾಳಿ ನಡೆಸಿದರು.

Tags: BJP JDSCheluvarayaswamyCMdcmDCP SundarrajDK ShivakumarDMKGD harish gowdaHD KumarswmymekedatuMP HD KumarswamyPmPriyanka KhargeRSSShaik TanveersiddaramaiahSunil BoseTamil NaduVishnuvardhan
Previous Post

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

Related Posts

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
0

ಹೈದರಾಬಾದ್: ತೆಲಂಗಾಣ (Telangana) ಮುಖ್ಯಮಂತ್ರಿ ರೇವಂತ್ ರೆಡ್ಡಿ (Revanth Reddy) ಹಿಂದೂ ದೇವತೆಗಳ ಬಗ್ಗೆ ನೀಡಿರುವ ಹೇಳಿಕೆ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಹಿಂದೂ ಸಂಪ್ರದಾಯಗಳನ್ನು ಅವಹೇಳನ...

Read moreDetails
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
Next Post

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

Recent News

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

by ಪ್ರತಿಧ್ವನಿ
December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada