ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ವೈಯಕ್ತಿಕ ವಿಚಾರಗಳ ನಡುವಿನ ಹಾದಿರಂಪ ಬೀದಿರಂಪವಾಗಿ ಜಾಸ್ತಿಯಾಗಿದೆ ಅಶ್ಲೀಲ ಚಿತ್ರಗಳ ಬಗ್ಗೆ ರೋಹಿಣಿ ಸಿಂಧೂರಿ ಮಾತನಾಡುತ್ತಾರಾ ಎಂದು ರೂಪಾ ಮೌದ್ಗಿಲ್ ಗಂಭೀರ ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ. ಇಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ರೋಹಿಣಿ ಸಿಂಧೂರಿ ಅವರು ‘Get well soon’ ಎಂದು ರೂಪಾ ಅವರನ್ನು ಉದ್ದೇಶಿಸಿ ಹೇಳಿದ್ದರು.
ಜನಸಮಾನ್ಯರ ಮಧ್ಯೆ ಜಗಳ ಮಾಡುವಂತೆ ವಿಧ್ಯವಂತರು ಉನ್ನತ ಅಧಿಕಾರಿಗಳು ಈ ರೀತಿಯಾಗಿ ಕಿತ್ತಾಡುವುದರಿಂದ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ಈ ಕಾರಣಕ್ಕಾಗಿ ಇಬ್ಬರಿಗೂ ಸಹ ನೋಟಿಸ್ ನೀಡಲಾಗುತ್ತಿದೆ ಎಂದು ಸಿಎಂ ಬೋಮ್ಮಾಯಿ ಎಚ್ಚರಿಕೆ ನೀಡಿದ್ದಾರೆ .

ಫೇಸ್ ಬುಕ್ ಪೋಸ್ಟ್ ಮಾಡಿರುವ ಡಿ.ರೂಪಾ ಮೌದ್ಗಿಲ್, “ಮಾಧ್ಯಮದೆದುರು ಇವತ್ತು ರೋಹಿಣಿ ಸಿಂಧೂರಿ Get well soon ಅಂತಾ ನನಗೆ ಹೇಳಿದ್ದಾರಲ್ಲ, ಅವರ deleted ಅಶ್ಲೀಲ ಚಿತ್ರಗಳ ಬಗ್ಗೆ ಮಾತನಾಡುತ್ತಾರಾ? ನಂಬರ್ ಅವರದೇ ಅಲ್ಲವಾ. ಐಎಎಸ್ ಅಧಿಕಾರಿ ಅಶ್ಲೀಲ ಚಿತ್ರಗಳನ್ನು ಕಳಿಸಬಹುದೆ? ಈ ರೀತಿಯ ಫೋಟೊ ಕಳುಹಿಸಿದ್ದು ಯಾವ ಕಾರಣಕ್ಕಾಗಿ. ಸಂಧಾನಕ್ಕೆ? ಅವರ ಮೇಲಿನ ಆರೋಪ ಸಾಬೀತಾಗಿರುವ ಪ್ರಾಥಮಿಕ ತನಿಖೆಯ ವಿಷಯದಲ್ಲಿ ಮುಂದೆ ಶಿಕ್ಷೆ ಆಗದಂತೆ ತಡೆಯಲು? ಯಾವುದು? ಅವರೇ ಉತ್ತರಿಸಬೇಕು”
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಪೋಸ್ಟ್ ವಾರ್ ಮುಂದುವರೆದಿದೆ. ಖಾಸಗಿ ಫೋಟೋಗಳು ಲೀಕ್’ನಿಂದ ಇಬ್ಬರ ಟಾಕ್ ವಾರ್ ಬೀದಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ನಡುವೆ ಕಿತ್ತಾಟ ನಡೆದಿದ್ದು, ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳ ಬೀದಿ ರಂಪಾಟ ಯಾವಾಗ ಕೊನೆ ಆಗುತ್ತೆ ಅಂತ ಜನಸಾಮಾನ್ಯರ ಪ್ರಶ್ನೆಯಾಗಿದೆ. ವಿಧಾನಸೌಧಕ್ಕೆ ಇಂದು ಆಗಮಿಸಿದ ರೋಹಿಣಿ ಸಿಂಧೂರಿಯವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಸರ್ಕಾರದ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳು ಹಾದಿರಂಪ ಬೀದಿರಂಪ ಎಂಬಂತೆ ಜಗಳಕ್ಕಿಳಿದಿರುವುದು ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಇದರಂತೆ ಇಬ್ಬರೂ ಅಧಿಕಾರಿಗಳಿಗೆ ಮುಖ್ಯದರ್ಶಿಗಳು ನೋಟಿಸ್ ಜಾರಿ ಮಾಡಿದ್ದರು.ಇಬ್ಬರೂ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದರು.