ಸಾರ್ವಜನಿಕ ಗಣೇಶೋತ್ಸವ ಕುರಿತು ಎದಿದ್ದ ಊಹಾಪೋಹಗಳಿಗೆ ತೆರೆ ಎಳೆದಿರುವ ಕಂದಾಯ ಸಚಿವ ಆರ್.ಅಶೋಕ್ ಈ ವರ್ಷ ಹಬ್ಬಕ್ಕೆ ಯಾವುದೇ ನಿರ್ಬಂಧವನ್ನ ಹೇರುವುದಿಲ್ಲ ಎಂದಿದ್ದಾರೆ.
ಕೋವಿಡ್ ಪೂರ್ವದಂತೆ ಹಬ್ಬ ನಡೆಸಲು ಅನುಮತಿ ನೀಡಲಾಗುವುದು ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದು ಅವರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಸಾರ್ವಜನಿಕ ಗಣೇಶೋತ್ಸವದ ಮೇಲೆ ನಿರ್ಬಂಧ ಹೇರಲಾಗಿತ್ತು. ಆಗ ಜನರ ಜೀವ ಉಳಿಸುವುದು ಮುಖ್ಯವಾಗಿತ್ತು ಹಾಗೆಯೇ ಸರ್ಕಾರದ ಮನವಿಗೆ ಸಾರ್ವಜನಿಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಈ ಭಾರೀ ಯಾವುದೇ ಅಡೆತಡೆ ಇರುವುದಿಲ್ಲ ಕೋವಿಡ್ ಪೂರ್ವದಲ್ಲಿ ಹೇಗೆ ಆಚರಿಸುತ್ತಿದ್ದರೋ ಈ ವರ್ಷದಿಂದ ಹಾಗೆಯೇ ಆಚರಿಸಬಹುದು ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.
