ರೈತರಿಂದ ಕಬ್ಬನ್ನು ಖರೀದಿಸುವ ವೇಳೆ ಸಕ್ಕರೆ ಕಾರ್ಖಾನೆಗಳಲ್ಲಿ ತೂಕ ಮತ್ತು ಅಳತೆಯ ವ್ಯತ್ಯಾಸ ಕಂಡು ಬರುತ್ತಿದೆ ಎಂದು ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಬೆಳ್ಳಂ ಬೆಳ್ಳಗ್ಗೆ ಶುಗರ್ ಫ್ಯಾಕ್ಟರಿಗಳಿಗೆ ಶಾಕ್ ನೀಡಿದೆ.
ಬೆಳ್ಳಗ್ಗೆ 7 ಘಂಟೆ ಸುಮಾರಿಗೆ 21 ಸ್ಥಳಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿ ಎಂದು ಹೇಳಲಾಗುತ್ತಿದೆ.
ಕೆಲವೊಂಡು ಕಡೆ ತೂಕದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು ಕ್ರಮ ಜರುಗಿಸುವ ಸಾದಯತೆ ಹೆಚ್ಚಿದೆ ಎಂದು ಹೇಳಲಾಗಿದೆ.

ಪ್ರಥಮ ಹಂತದಲ್ಲಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿದ್ದು, ಈ ಸಾಲಿನ ಕಬ್ಬು ಕಟಾವು ಹಂಗಾಮು ಮುಗಿಯುವವರೆಗೂ ನಿರಂತರವಾಗಿ ಗೌಪ್ಯತೆಯ ಮೂಲಕ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆಸಲು ಸರ್ಕಾರ ಸೂಚಿಸಿರುವುದಾಗಿ ತಿಳಿದು ಬಂದಿದೆ.
ಹಲವು ರೈತ ಸಂಘಟನೆಗಳು ತೂಕದಲ್ಲಿ ವ್ಯತ್ಯಾಸ ಕಂಡುಬರುವ ಕುರಿತು ತನಿಖೆ ನಡೆಸುವಂತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಬಳಿ ಒತ್ತಾಯಿಸಿದ್ದರು ಮತ್ತು ಈ ಬಗ್ಗೆ ಶೀಘ್ರ ಕ್ರಮ ಜರುಗಿಸುವುದಾಗಿ ಸಚಿವರು ರೈತರಿಗೆ ಭರವಸೇ ನೀಡಿದರು.
ಬೆಳಗಾವಿ -8, ಬಿಜಾಪುರ – 4, ಬಾಗಲಕೋಟೆ – 4, ಬೀದರ್ – 2, ಗುಲಬರ್ಗ – 2, ಕಾರವಾರ -1 ಸಕ್ಕರೆ ಕಾರ್ಖಾನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಧು ತಿಳಿದು ಬಂದಿದೆ.

 
			
 
                                 
                                 
                                
