ಬೆಂಗಳೂರಿನಲ್ಲಿ ದಾಖಲೆ ಇಲ್ಲದ ಚಿನ್ನಾಭರಣವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. 7 ಕೆ.ಜಿ. 999 ಗ್ರಾಂ ಚಿನ್ನ, 46 ಕೆ.ಜಿ 700 ಗ್ರಾಂ ಬೆಳ್ಳಿಯನ್ನ ಖಾಕಿ ವಶಕ್ಕೆ ಪಡೆದಿದೆ.

ಈಚರ್ ವಾಹದಲ್ಲಿ ಚಿನ್ನ ಹಾಗೂ ಬೆಳ್ಳಿಯನ್ನ ಸಾಗಾಟ ಮಾಡಲಾಗ್ತಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಚಿನ್ನಾಭರಣ ಸಾಗಿಸುತ್ತಿದ್ದ ಮೂವರವನ್ನು ಪೊಲೀಸರು ವಶಕ್ಕೆ ಪಡೆದು, ಐದು ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಘಟನಾ ಸಂಬಂಧ ವಿವೇಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.