ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್ ಅಭಿನಯದ ಬಹು ನಿರೀಕ್ಷಿತ ‘ಪಿನಾಕ’ ಚಿತ್ರ ಇದೇ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬದ ದಿನ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ “ಪಿನಾಕ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿ, ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

‘ಪಿನಾಕ’ ಎಂದರೆ ಒಬ್ಬ ರಕ್ಷಕ ಎನ್ನುವ ಅವರು, ‘ಇದೊಂದು ಕಾವಲುಗಾರ ಪರಂಪರೆಯ ಕುರಿತಾದ ಚಿತ್ರ. ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಗಣೇಶ್ ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಗಣೇಶ್ ಅವರ ಹೊಸ ಲುಕ್ ಅಭಿಮಾನಿಗಳ ಮನ ಗೆಲ್ಲುತ್ತಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇದೊಂದು ಪಕ್ಕಾ ಫ್ಯಾಮಿಲಿ ಎಂಟರ್ ಟೈನರ್ ಚಿತ್ರವಾಗಿದೆ. ಭರ್ಜರಿ ಸೆಟ್ ಗಳು “ಪಿನಾಕ” ಚಿತ್ರದ ವಿಶೇಷಗಳಲ್ಲಿ ಒಂದಾಗಿದೆ. ಫಸ್ಟ್ ಲುಕ್ ಪೋಸ್ಟರ್, ಹುಟ್ಟುಹಬ್ಬದಂದು ಬಿಡುಗಡೆಯಾಗಿರುವ ಪೋಸ್ಟರ್ ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ಯಾವುದೇ ಕೊರತೆ ಬಾರದ ಹಾಗೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಗಣೇಶ್ ಅವರು ನೀಡಿರುವ ಸಹಕಾರಕ್ಕೆ ಚಿತ್ರತಂಡ ಧನ್ಯವಾದ ತಿಳಿಸಿದೆ. ನುರಿತ ತಂತ್ರಜ್ಞರ ಕಾರ್ಯವೈಖರಿ ಹಾಗೂ ಅನುಭವಿ ಕಲಾವಿದರ ತಾರಾಬಳಗ “ಪಿನಾಕ” ಚಿತ್ರಕ್ಕಿದೆ.

́ಬೃಂದಾವಿಹಾರಿʼ ಚಿತ್ರ ಅಕ್ಟೋಬರ್ 16 ರಂದು ಅದ್ದೂರಿ ಬಿಡುಗಡೆ
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ಅವರ ಅದ್ದೂರಿ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ ಬಹು ನಿರೀಕ್ಷಿತ “ಬೃಂದಾ ವಿಹಾರಿ” ಚಿತ್ರ ಇದೇ ಅಕ್ಟೋಬರ್ 16 ರಂದು ಬಿಡುಗಡೆಯಾಗುತ್ತಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬದ ದಿನ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ, ಬಿಡುಗಡೆಯ ದಿನಾಂಕ ಘೋಷಣೆ ಮಾಡಿದೆ.

ಗಣೇಶ್ ಹಾಗೂ ಶ್ರೀನಿವಾಸರಾಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬಂದಿದ್ದ “ಕೃಷ್ಣಂ ಪ್ರಣಯ ಸಖಿ” ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು. ಆ ಚಿತ್ರದ ನಂತರ ಇವರಿಬ್ಬರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸದಭಿರುಚಿಯ ಚಿತ್ರಗಳ ನಿರ್ಮಾಪಕ ಸಮೃದ್ಧಿ ಮಂಜುನಾಥ್ ಅವರು ಯಾವುದೇ ಕೊರತೆ ಬಾರದ ಹಾಗೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಜನಪ್ರಿಯವಾಗಿದ್ದು, ಗಣೇಶ್ ಅವರ ಅಭಿಮಾನಿಗಳು ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ ಹಾಗೂ ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಗಣೇಶ್ ಅವರಿಗೆ ನಾಯಕಿಯರಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ಅಭಿನಯಿಸಿದ್ದಾರೆ.






