ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದ 2022-23 ಸಾಲಿನ ಆಯವ್ಯಯದ ಬಗ್ಗೆ ಪ್ರತಿಕ್ರಿಯಿಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ದಿಕ್ಕು ದೆಸೆ ಇಲ್ಲದ ಗೋಲ್ಮಾಲ್ ಬಜೆಟ್ ಎಂದು ಟೀಕಿಸಿದ್ದಾರೆ.
ಮುಂದುವರೆದು, ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರವು ಎಸ್ಸಿ, ಎಸ್ಟಿ, ಒಬಿಸಿ, ರೈತರು ಹಾಗೂ ಮಧ್ಯಮ ವರ್ಗದವರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಇದೊಂದು ಅನುಪಯುಕ್ತ ಮತ್ತು ಉದ್ದೇಶರಹಿತ ಬಜೆಟ್ ಎಂದಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣವು ಸಂಪೂರ್ಣ ಟೊಳ್ಳಾಗಿದ್ದು, ಅವರು ಆಡಿದ ಮಾತುಗಳಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದ್ದಾರೆ.