• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌.. ಸ್ಯಾಲರಿ ಹೆಚ್ಚಳ ಎಷ್ಟು..?

ಪ್ರತಿಧ್ವನಿ by ಪ್ರತಿಧ್ವನಿ
July 16, 2024
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ಸರ್ಕಾರಿ ಗೆಜೆಟ್
0
ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌.. ಸ್ಯಾಲರಿ ಹೆಚ್ಚಳ ಎಷ್ಟು..?
Share on WhatsAppShare on FacebookShare on Telegram

ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಗಿಫ್ಟ್ ಸಿಕ್ಕಿದೆ. 7ನೇ ವೇತನ ಆಯೋಗ ಜಾರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವೇತನ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಸಂಪುಟ ಬಿಟ್ಟಿತ್ತು. ಆಗಸ್ಟ್ 1 ರಿಂದ ವೇತನ ಆಯೋಗದ ಶಿಫಾರಸು ಜಾರಿಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ. ಶೇಕಡ 27 ವೇತನ ಹೆಚ್ಚಳಕ್ಕೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗಿದೆ. ಇಂದು ವಿಧಾನಸಭೆಯಲ್ಲಿ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.

ADVERTISEMENT

ಮಾರ್ಚ್‌ 16 ರಂದು ಕೆ. ಸುಧಾಕರ್‌ ರಾವ್ ನೇತೃತ್ವದ ಸಮಿತಿಯಿಂದ ರಾಜ್ಯ 7ನೇ ವೇತನ ಆಯೋಗದ ವರದಿ ಸ್ವೀಕಾರ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ ವರದಿ ಸ್ವೀಕಾರದ ಬಳಿಕ ವೇತನ ಆಯೋಗದ ಶಿಫಾರಸು ಜಾರಿ ಮಾಡುವ ಬಗ್ಗೆ ಹಣಕಾಸು ಇಲಾಖೆಯಿಂದ ಮಾಹಿತಿ ಕೇಳಿದ್ದರು. ಇದೀಗ ಹಣಕಾಸು ಇಲಾಖೆಯಿಂದ ವರದಿ ಬಂದಿದ್ದು, ಶೇಕಡ 27ರಷ್ಟು ವೇತನ ಹೆಚ್ಚಳ ಮಾಡುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಚಿವ ಸಂಪುಟ ಸಭೆಗೆ ಮಾಹಿತಿ ನೀಡಿದ್ದು, ಇಂದಿನ ಅಧಿವೇಶನದಲ್ಲಿ ಘೋಷಣೆ ಮಾಡಲಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ.

7ನೇ ವೇತನ ಆಯೋಗ ಜಾರಿಗೆ ನಿರ್ಧಾರ ಹಿನ್ನೆಲೆ, ರಾಜ್ಯ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರ ಸಂಘ ಅಭಿನಂದನೆ ಸಲ್ಲಿಸಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1, 2022ರಿಂದ ವೇತನ ಜಾರಿ ಆಗಿದ್ದು, 2024ರ ಆಗಸ್ಟ್‌ 1ರಿಂದ ಆರ್ಥಿಕ ಸೌಲಭ್ಯವನ್ನು ನೀಡಲು ನಿರ್ಧಾರ ಮಾಡಲಾಗಿದೆ. ವೇತನ ಆಯೋಗ ಶಿಫಾರಸು ಮಾಡಿದ್ದ ಶೇಕಡ 27.50ರಷ್ಟು ವೇತನ ನಿಗದಿಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದು ಸಂತೋಷದಾಯಕ ವಿಚಾರ ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ರಾಜ್ಯದ ಎಲ್ಲ ಸಚಿವರಿಗೆ ಹಾಗೂ ಉನ್ನತ ಮಟ್ಟದ ಅಧಿಕಾರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅಭಿನಂದನೆ ತಿಳಿಸಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ ಬಳಿಕ ವೇತನ ಎಷ್ಟು ಪ್ರಮಾಣ ಹೆಚ್ಚಾಗಿದೆ ಅನ್ನೋದ್ರ ಜೊತೆಗೆ ಯಾವಾಗಿನಿಂದ ಜಾರಿ ಅನ್ನೋ ಖಚಿತ ಮಾಹಿತಿ ಸಿಗಲಿದೆ.

Tags: #governmentBJPCongress Partyemplaymenetಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಟ್ರಂಪ್‌ಗಿಂತ ಕೇವಲ ಮೂರು ವರ್ಷ ದೊಡ್ಡವನು, ಜೋ ಬಿಡನ್

Next Post

ಡೊನಾಲ್ಡ್ ಟ್ರಂಪ್ ಅಧಿಕೃತವಾಗಿ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ..

Related Posts

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..
Top Story

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

by ಪ್ರತಿಧ್ವನಿ
April 17, 2026
0

ಬೆಂಗಳೂರು : ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಿನ್ನೆಯಷ್ಟೇ ಶಾಸಕ ಸೇರಿದಂತೆ...

Read moreDetails
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
Next Post
ಡೊನಾಲ್ಡ್ ಟ್ರಂಪ್ ಅಧಿಕೃತವಾಗಿ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ..

ಡೊನಾಲ್ಡ್ ಟ್ರಂಪ್ ಅಧಿಕೃತವಾಗಿ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada