ರೇಣುಕಾಸ್ವಾಮಿ ಕೇಸಿನಲ್ಲಿ ಜೈಲಿಗೆ ಹೋಗಿ ಬಂದ ಬಳಿಕ ಇದೇ ಮೊದಲ ಬಾರಿಗೆ ದರ್ಶನ್ ಹೊಸ ಪೋಸ್ಟ್ ಮಾಡಿದ್ದಾರೆ.

8 ತಿಂಗಳ ಬಳಿಕ ನಟ ದರ್ಶನ್ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ.

ತಮ್ಮ ಫೇವರಿಟ್ ಕುದುರೆ ಜೊತೆಗೆ ಫೋಟೋ ಹಂಚಿಕೊಂಡ ನಟ ದರ್ಶನ್, ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಷಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ ಎಂದು ಬರೆದುಕೊಂಡಿದ್ದಾರೆ.

ದರ್ಶನ್ ಪೋಸ್ಟ್ ಮಾಡಿದ್ದನ್ನು ನೋಡಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಹೊಸ ಅಧ್ಯಾಯ ಶುರು ಆಗಿದೆ. ಕುಗ್ಗದೆ ಮುನ್ನುಗ್ಗಿ ಬಾಸ್ ನಿಮ್ ಜೊತೆ ಅಭಿಮಾನಿಗಳು ಸದಾ ಇರ್ತೀವಿ. ಏನೇ ಆಗಲಿ ಬಾಸ್ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದಿದ್ದಾರೆ.
