Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕೈ ಮಗ್ಗ ನೇಕಾರರಿಗೆ ಸಿಹಿಸುದ್ದಿ: 25 ತಾಲ್ಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸಲು ಸಿಎಂ ಬೊಮ್ಮಾಯಿ ಸೂಚನೆ

ಪ್ರತಿಧ್ವನಿ

ಪ್ರತಿಧ್ವನಿ

January 11, 2023
Share on FacebookShare on Twitter


ಬೆಂಗಳೂರು: ಮುಂದಿನ ದಿನಗಳಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವ 25 ತಾಲ್ಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚು ಓದಿದ ಸ್ಟೋರಿಗಳು

ವಿಮಾನ ನಿಲ್ದಾಣಕ್ಕೆ ಯಾರ ಹೆಸರಾದರೂ ಇಡಲಿ, ಮೊದಲು ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲಿ: ಡಿ.ಕೆ. ಶಿವಕುಮಾರ್

D.K Shivakumar : ಏರ್‌ಪೋರ್ಟ್‌ಗೆ BSY ಹೆಸರು ಡಿಕೆಶಿ ರಿಯಾಕ್ಷನ್..! | #pratidhvaninews

ಬ್ರಾಹ್ಮಣ ಸಮೂಹವನ್ನು ನಾನು ನಿಂದಿಸಿಲ್ಲ: ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರಿನಲ್ಲಿ ಅವರು ಇಂದು ವಿದ್ಯುತ್ ಮಗ್ಗ ನೇಕಾರರು ಮತ್ತು ಕಾರ್ಮಿಕರಿಗೆ ಡಿಬಿಟಿ ಮೂಲಕ ನೇಕಾರ್ ಸಮ್ಮಾನ್ ಯೋಜನೆಯ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿ ಮಾತನಾಡಿದರು.

ಹತ್ತಿಯ ಸಂಸ್ಕರಣೆಯಿಂದ, ವಸ್ತ್ರ ತಯಾರಿಕೆ, ಸಿದ್ಧ ಉಡುಪು ತಯಾರಿಕೆ ವರೆಗಿನ ಎಲ್ಲ ಹಂತಗಳ ಸೌಲಭ್ಯಗಳನ್ನು ಒಳಗೊಂಡ ಮಿನಿ ಟೆಕ್ಸ್ಟೈಲ್ ಪಾರ್ಕ್ ಸ್ಥಾಪಿಸುವ ಮೂಲಕ ನೇಕಾರರಿಗೆ ಅನುಕೂಲ ಮಾಡಿಕೊಡುವಂತೆ ಅವರು ತಿಳಿಸಿದರು.

ನೇಕಾರರೊಂದಿಗೆ ವೈಯಕ್ತಿಕವಾಗಿ ಹೆಚ್ಚಿನ ಒಡನಾಟವನ್ನು ತಾವು ಹೊಂದಿದ್ದು, ಅವರ ಸಂಕಷ್ಟಗಳನ್ನು ಸಹ ಹತ್ತಿರದಿಂದ ಕಂಡಿರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ನೇಕಾರರು ತಮ್ಮ ಉತ್ಪನ್ನಗಳ ಗುಣಮಟ್ಟ ವೃದ್ಧಿಸುವ ಮೂಲಕ ರಫ್ತು ಮಾಡಲು ಸಹ ಮುಂದಾಗಬೇಕು. ಡಿಜಿಟಲ್ ವೇದಿಕೆಯ ಮೂಲಕ ಮಾರುಕಟ್ಟೆ ವಿಸ್ತರಿಸಬೇಕು. ಇದಕ್ಕೆ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಕಾರ ನೀಡಲಿದ್ದು, ಅಮೇಜಾನ್, ಫ್ಲಿಪ್ ಕಾರ್ಟ್ ಮತ್ತಿತರ ಆನ್ಲೈನ್ ವ್ಯಾಪಾರಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ವರೆಗೆ ಕೈಮಗ್ಗ ನೇಕಾರರಿಗೆ ಮಾತ್ರ ನೆರವು ನೀಡುವ ಯೋಜನೆ ಜಾರಿಯಲ್ಲಿತ್ತು. ಆದರೆ ವಿದ್ಯುತ್ ಮಗ್ಗದ ನೇಕಾರರು ಹಾಗೂ ಕಾರ್ಮಿಕರು ಸಹ ಸಂಕಷ್ಟದಲ್ಲಿರುವುದನ್ನು ಅರಿತು ಸರ್ಕಾರವು ಸಂಕ್ರಾಂತಿಯ ಕೊಡುಗೆಯಾಗಿ ಮಗ್ಗಪೂರ್ವ ಚಟುವಟಿಕೆಗಳಲ್ಲಿ ತೊಡಗುವ ಕಾರ್ಮಿಕರು ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ಈ ಸೌಲಭ್ಯ ವಿಸ್ತರಿಸಿದೆ ಎಂದು ಅವರು ವಿವರಿಸಿದರು.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅದರಲ್ಲೂ ಸ್ವದೇಶಿ ಆಂದೋಲನದಲ್ಲಿ ನೇಕಾರರ ಪಾತ್ರ ಅತ್ಯಂತ ಮಹತ್ವಪೂರ್ಣವಾದುದು. ವಿದೇಶಿ ಉಡುಪುಗಳನ್ನು ತೊರೆದು, ಸ್ವದೇಶಿ ಬಳಕೆ ಮಾಡುವಂತೆ ಗಾಂಧೀಜಿಯವರು ನೀಡಿದ ಕರೆಗೆ ಸ್ಪಂದಿಸಿದ ನೇಕಾರರು ಹಗಲು ರಾತ್ರಿ ಶ್ರಮಿಸಿ, ಇಡೀ ದೇಶದ ಜನರಿಗೆ ಬಟ್ಟೆ ಒದಗಿಸಿದರು. ಆ ಮೂಲಕ ಸ್ವದೇಶಿ ಆಂದೋಲನ ಯಶಸ್ವಿಗೊಳಿಸಿದ್ದಲ್ಲದೆ, ದೇಶ ಸ್ವಾತಂತ್ರ್ಯ ಕಂಡುಕೊಳ್ಳಲು ನೆರವಾದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನಂತರದ ದಿನಗಳಲ್ಲಿ ಸಂಕಷ್ಟದಲ್ಲಿದ್ದ ನೇಕಾರರ ನೆರವಿಗೆ ಅಂದಿನ ರಾಮಕೃಷ್ಣ ಹೆಗಡೆ ಸರ್ಕಾರ ಧಾವಿಸಿತು. ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಬಡವರಿಗೆ ಸೀರೆ, ಧೋತರ ಹಂಚುವ ಮೂಲಕ ಬಡವರಿಗೆ ವಸ್ತ್ರ ನೀಡುವ ಹಾಗೂ ನೇಕಾರರಿಗೆ ಅನುಕೂಲ ಕಲ್ಪಿಸಲು ಈ ಯೋಜನೆಗಳು ಸಹಕಾರಿಯಾದವು.

ನಂತರ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ನೇಕಾರರ ಸಮಸ್ಯೆಗಳಿಗೆ ಸ್ಪಂದಿಸಿದರು. ಕೋವಿಡ್ 19 ರ ಸಂದರ್ಭದಲ್ಲಿ ನೇಕಾರ ಸಮ್ಮಾನ್ ಯೋಜನೆ, ನೇಕಾರರ ಸಾಲ ಮನ್ನಾ ಮೊದಲಾದ ಕ್ರಮಗಳ ಮೂಲಕ ನೇಕಾರರ ನೆರವಿಗೆ ಧಾವಿಸಿದರು. ಪ್ರಸಕ್ತ ನಮ್ಮ ಸರ್ಕಾರ ನೇಕಾರರು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಹಲವಾರು ಪೂರಕ ಕ್ರಮಗಳನ್ನು ಕೈಗೊಂಡಿದೆ. ನೇಕಾರರ ಸಂಖ್ಯೆ ಹೆಚ್ಚಿರುವ ಕ್ಷೇತ್ರಗಳ ಶಾಸಕರು ಸಲ್ಲಿಸಿದ ಬೇಡಿಕೆಗಳನ್ನು ಈಡೇರಿಸುವ ಮೂಲಕ ನೇಕಾರರಿಗೆ ಹೆಚ್ಚಿನ ಬೆಂಬಲ ನೀಡಲಾಗಿದೆ ಎಂದರು.
ನೇಕಾರರ ಮಕ್ಕಳು ಆರ್ಥಿಕ ಸಂಕಷ್ಟದ ಕಾರಣ ವಿದ್ಯಾಭ್ಯಾಸ ಮೊಟಕುಗೊಳಿಸಿ, ನೇಕಾರಿಕೆಯಲ್ಲಿ ತೊಡಗುವುದನ್ನು ತಮ್ಮ ವಿದ್ಯಾರ್ಥಿ ದೆಸೆಯಿಂದ ನೋಡುತ್ತ ಬಂದಿದ್ದು, ಈ ಹಿನ್ನೆಲೆಯಲ್ಲಿಯೇ ರೈತ ವಿದ್ಯಾನಿಧಿಯನ್ನು ನೇಕಾರರಿಗೆ ವಿಸ್ತರಿಸಲು ನಿರ್ಧರಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ವೃತ್ತಿಪರ ನೇಕಾರ ಸಮುದಾಯಕ್ಕೆ ತಮ್ಮ ಘಟಕದ ವಿಸ್ತರಣೆಗೆ ನೀಡಲಾಗುತ್ತಿದ್ದ ಶೇಕಡಾ 30ರ ಸಹಾಯಧನವನ್ನು ಶೇಕಡಾ 50 ಕ್ಕೆ ಹೆಚ್ಚಿಸಲಾಗಿದೆ. ನೇಕಾರರ ಕಾಲೋನಿಗಳಲ್ಲಿ ವಾಸಿಸುವವರಿಗೆ ರಹವಾಸಿ ಪತ್ರಗಳನ್ನು ನೀಡಲು ತೀರ್ಮಾನಿಸಲಾಗಿದೆ.

ನೇಕಾರರಿಗೆ 2 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಒದಗಿಸಲಾಗುವುದು. ತಮಿಳುನಾಡು ಮಾದರಿಯಲ್ಲಿ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ 5 ಎಚ್.ಪಿ. ವರೆಗೆ ಉಚಿತ ವಿದ್ಯುತ್ ಹಾಗೂ ಫಿಕ್ಸೆಡ್ ಚಾರ್ಜಸ್ ನಲ್ಲಿ ಶೇ.50 ರಷ್ಟು ರಿಯಾಯ್ತಿ ನೀಡಲಾಗುತ್ತಿದೆ. ನೇಕಾರರ ಸಂಕಷ್ಟಗಳಿಗೆ ಸರ್ಕಾರ ಸದಾ ಸ್ಪಂದಿಸಿದೆ ಎಂದು ಅವರು ತಿಳಿಸಿದರು..

RS 500
RS 1500

SCAN HERE

Pratidhvani Youtube

«
Prev
1
/
3856
Next
»
loading
play
ಅಪ್ಪು ನೆನಪಿನಲ್ಲಿ ಯುವಕರಿಗೆ ಸ್ಫೂರ್ತಿ ಆಗಲಿ ಎಂದು ಆಯೋಜಿಸಿದ ಕ್ರೀಡೆ | Appu |
play
Cockroach Sudhi |ನಮ್ಮಂತ ವಿಲನ್‌ ಗಳಿಗೆಲ್ಲಾ ಯಾರ ಸರ್‌ ಹೀರೋಯಿನ್‌ ಕೊಡ್ತಾರೆ #pratidhvanidigital #cockroach
«
Prev
1
/
3856
Next
»
loading

don't miss it !

ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ
ಸಿನಿಮಾ

ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67
ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ

by ಪ್ರತಿಧ್ವನಿ
February 3, 2023
BBMP ವ್ಯಾಪ್ತಿಯಲ್ಲಿ ಅಧಿಕಾರಿಗಳ ಅಕ್ರಮ 969 ಕೋಟಿ ರೂ.                                      ಬೃಹತ್  ಅವ್ಯವಹಾರ ಬೆನ್ನತ್ತಿದ ED
ಇತರೆ

BBMP ವ್ಯಾಪ್ತಿಯಲ್ಲಿ ಅಧಿಕಾರಿಗಳ ಅಕ್ರಮ 969 ಕೋಟಿ ರೂ. ಬೃಹತ್ ಅವ್ಯವಹಾರ ಬೆನ್ನತ್ತಿದ ED

by ಪ್ರತಿಧ್ವನಿ
February 4, 2023
ಚಾಮುಂಡಿ ಬೆಟ್ಟ ಸೇರಿದಂತೆ 15 ಕಡೆ ರೋಪ್ ವೇ ಯೋಜನೆ
Top Story

ಚಾಮುಂಡಿ ಬೆಟ್ಟ ಸೇರಿದಂತೆ 15 ಕಡೆ ರೋಪ್ ವೇ ಯೋಜನೆ

by ಪ್ರತಿಧ್ವನಿ
February 9, 2023
ಸ್ವಾತಂತ್ರ್ಯದ ವಿಚಾರದಲ್ಲಿ ನಮಗಿರುವ ಹಕ್ಕು, ನೈತಿಕತೆ ಅವರಿಗಿಲ್ಲ : ಡಿ.ಕೆ.ಶಿವಕುಮಾರ್‌
ಕರ್ನಾಟಕ

ವಿಮಾನ ನಿಲ್ದಾಣಕ್ಕೆ ಯಾರ ಹೆಸರಾದರೂ ಇಡಲಿ, ಮೊದಲು ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲಿ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
February 9, 2023
ಮೀಸಲಾತಿ ನೀಡದ ಸಿಎಂ ಮಣಿಸಲು ಅಖಾಡದಲ್ಲೇ ಸ್ಕೆಚ್​ ಹಾಕಿದ ಪಂಚಮಸಾಲಿ ಸಮುದಾಯ..!
ಕರ್ನಾಟಕ

ಮೀಸಲಾತಿ ನೀಡದ ಸಿಎಂ ಮಣಿಸಲು ಅಖಾಡದಲ್ಲೇ ಸ್ಕೆಚ್​ ಹಾಕಿದ ಪಂಚಮಸಾಲಿ ಸಮುದಾಯ..!

by ಕೃಷ್ಣ ಮಣಿ
February 6, 2023
Next Post
ಆಫ್ರಿಕನ್ ಹಂದಿ ಜ್ವರ ಪತ್ತೆ, ಹಂದಿ ಸಾಗಾಟ, ಮಾಂಸಕ್ಕೆ ನಿಷೇಧ

ಆಫ್ರಿಕನ್ ಹಂದಿ ಜ್ವರ ಪತ್ತೆ, ಹಂದಿ ಸಾಗಾಟ, ಮಾಂಸಕ್ಕೆ ನಿಷೇಧ

ಸಿದ್ದೇಶ್ವರ ಸ್ವಾಮಿಗಳ ವಿದ್ವತ್ತಿಗೆ ಸಮಬಾರದ ವೈದಿಕ ಶತಾವಧಾನಿ-ಸಹಸ್ರಾವಧಾನಿಗಳು

ಸಿದ್ದೇಶ್ವರ ಸ್ವಾಮಿಗಳ ವಿದ್ವತ್ತಿಗೆ ಸಮಬಾರದ ವೈದಿಕ ಶತಾವಧಾನಿ-ಸಹಸ್ರಾವಧಾನಿಗಳು

ಮೈಸೂರು ಹುಡುಗನನ್ನು ಮದುವೆಯಾದ ಬಾಲಿವುಡ್ ನಟಿ ರಾಖಿ ಸಾವಂತ್

ಮೈಸೂರು ಹುಡುಗನನ್ನು ಮದುವೆಯಾದ ಬಾಲಿವುಡ್ ನಟಿ ರಾಖಿ ಸಾವಂತ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist