ಮಗಧೀರ, ಬಾಹುಬಲಿ, ಆರ್ ಆರ್ ಆರ್ ದಂತಹ ಹಿಟ್ ಚಿತ್ರಗಳ ಕಥೆಗಾರ ವಿ .ವಿಜಯೇಂದ್ರ ಪ್ರಸಾದ್ , ಪ್ಯಾನ್ ಇಂಡಿಯಾ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಎಸ್ ಎಸ್ ರಾಜಮೌಳಿಯ ಎಲ್ಲಾ ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆದ ವಿಜಯೇಂದ್ರ ಪ್ರಸಾದ್ ಅವರು ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ಸಂಸ್ಥೆಯ ಚೊಚ್ಚಲ ಚಿತ್ರಕ್ಕೆ ಸ್ಕ್ರಿಪ್ಟ್ ಸೂಪರ್ ವೈಸ್ ಮಾಡಿದ್ದು, ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಕಿಚ್ಚ ಸುದೀಪ್ ಅವರು ನಟಿಸುತ್ತಿದ್ದು ಆರ್. ಚಂದ್ರು ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.
ಈ ಮೂವರು ದಿಗ್ಗಜರು ಒಂದಾಗಿ ಮಾಡುತ್ತಿರುವ ಈ ಚಿತ್ರಕ್ಕೆ ಇಡೀ ಭಾರತವೇ ಕಾತುರದಿಂದ ಎದುರು ನೋಡುತ್ತಿದ್ದು, ಈ ವರ್ಷದ ಮೆಗಾ ಹಿಟ್ ಚಿತ್ರವಾಗಲಿದೆ.
ಆರ್ ಸಿ ಸ್ಟುಡಿಯೋಸ್ ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾಗಿದ್ದು, 5 ದೊಡ್ಡ ದೊಡ್ಡ ಚಿತ್ರಗಳಿಗೆ ಈ ವರ್ಷ ಚಾಲನೆ ದೊರೆಯಲಿದೆ. ಆರ್ ಚಂದ್ರು ಅವರು ಏನೇ ಮಾಡಿದರು ವಿಶೇಷವಾಗಿರಲಿದ್ದು ಈ ಚಿತ್ರವೂ ಕೂಡ ಹಲವು ವಿಶೇಷತೆಗಳಿಂದ ಕೂಡಿರಲಿದೆ. ಆ ವಿಶೇಷತೆಗಳಿಗೆ ಚಿತ್ರರಂಗ ಕಾಯುತ್ತಿದೆ.
ಆರ್ ಸಿ ಸ್ಟುಡಿಯೋಸ್ ಈ ಚಿತ್ರದ ಶೀರ್ಷಿಕೆ ಬಿಡುಗಡೆಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಿಚ್ಚನ ಹುಟ್ಟುಹಬ್ಬವಾದ ಸೆಪ್ಟೆಂಬರ್ 2 ರಂದು ಅಧಿಕೃತವಾಗಿ ಘೋಷಣೆಯಾಗಲಿದೆ.
ವಿಜಯೇಂದ್ರ ಪ್ರಸಾದ್ ಸ್ಕ್ರಿಪ್ಟ್ ಸೂಪರ್ ವೈಸಿಂಗ್, ಕಿಚ್ಚ ಸುದೀಪ್ ಅವರ ನಟನೆ ಮತ್ತು ಆರ್ ಚಂದ್ರು ಅವರ ನಿರ್ದೇಶನಕ್ಕೆ ಇಡೀ ಚಿತ್ರರಂಗವೇ ಕಾಯುತ್ತಿದ್ದು, ಭಾರತೀಯ ಚಿತ್ರರಂಗದ ಮೋಸ್ಟ್ ಎಕ್ಸ್ ಪೆಕ್ ಟೆಡ್ ಚಿತ್ರವಾಗಿದೆ.
ವಿಜಯೇಂದ್ರ ಪ್ರಸಾದ್ ಅವರು 25ಕ್ಕೂ ಹೆಚ್ಚು ಚಿತ್ರಗಳಿಗೆ ಕಥೆ ಬರೆದಿದ್ದು, ಎಲ್ಲಾ ಚಿತ್ರಗಳು ಕೂಡ ಕಮರ್ಷಿಯಲ್ ಸಕ್ಸಸ್ ಕಂಡಿವೆ. ಆಂಧ್ರದ ಪ್ರತಿಷ್ಠಿತ ನಂದಿ ಮತ್ತು ಫಿಲಂ ಫೇರ್ ಪ್ರಶಸ್ತಿಗೂ ಭಾಜನರಾಗಿದ್ದಾರೆ.
ಆರ್ ಸಿ ಸ್ಟುಡಿಯೋಸ್ ಸಂಸ್ಥೆಯು ಬಹುಕೋಟಿ ವೆಚ್ಚದಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದು, ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಮುರಿದು ಗ್ಲೋಬಲ್ ಮೂವಿ ಕಾನ್ಸೆಪ್ಟ್ ನೊಂದಿಗೆ ಇಂಡಿಯನ್ ಹ್ಯೂಜ್ ಬಜೆಟ್ ಚಿತ್ರವಾಗಲಿದೆ.
ಈ ಮೂಲಕ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ಕೂಡ ಗ್ಲೋಬಲ್ ಸಂಸ್ಥೆಯಾಗಿ ಯುವ, ಪ್ರತಿಭಾವಂತ ಮತ್ತು ಉದಯೋನ್ಮುಖ ಅವಕಾಶ ಕಲ್ಪಿಸಲಾಗುತ್ತಿದೆ.
ಈ ಮೂವರು ದಿಗ್ಗಜರ ಸಮಾಗಮವು ಮುಂದಿನ ಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಆರ್ ಸಿ ಸ್ಟುಡಿಯೋಸ್ ಸಿನಿಮಾ ನಿರ್ಮಾಣ ಮಾಡುತ್ತಿರುವುದು ಖಚಿತವಾಗಿದೆ.