ರಾಜ್ಯದ ಪಡಿದರ ಚೀಟಿದಾರರಿಗೆ ಸರ್ಕಾರ ಇದೀಗ ಗುಡ್ ನ್ಯೂಸ್ ನೀಡಿದೆ. ಫೆಬ್ರುವರಿ ಕೊನೆ ಅಥವಾ ಮಾರ್ಚ್ ತಿಂಗಳಿನಿಂದ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ ಎಂದು ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದಾರೆ.

ಸರ್ಕಾರ ರಾಜ್ಯದ ಪಡಿತರ ಚೀಟಿದಾರರಿಗೆ ಈ ಒಂದು ಇಂದಿರಾ ಕಿಟ್ ಯೋಜನೆ ಜಾರಿಗೆ ಮಾಡಿದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ. ಸಕ್ಕರೆ, ಬೆಳೆ, ಅಡುಗೆ ಎಣ್ಣೆ ಉಪ್ಪು ಒಳಗೊಂಡ ಈ ಒಂದು ಕಿಟ್ ವಿತರಿಸಲಾಗುತ್ತಿದ್ದು ಇದರಿಂದ ಪೌಷ್ಟಿಕ ಆಹಾರ ಸಿಗಲಿದೆ ಎಂದು ಮುನಿಯಪ್ಪ ಹೇಳಿದ್ದಾರೆ.

ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದ್ದು, ಇದರಿಂದ ಸರ್ಕಾರದ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಅಕ್ಕಿಯ ಕಳ್ಳಸಾಗಣಿಕೆಯನ್ನು ತಡೆಕಟ್ಟಲು ಸರ್ಕಾರ ಇಂದಿರಾ ಕಿಟ್ ಯೋಜನೆಯನ್ನು ಜಾರಿ ಮಾಡಿದೆ. ಈ ಇಂದಿರಾ ಕಿಟ್‌ನಲ್ಲಿ ಒಂದು ಕೆಜಿ ತೊಗರಿ ಬೇಳೆ, ಒಂದು ಕೆಜಿ ಹೆಸರು ಕಾಳು, ಒಂದು ಲೀಟರ್ ಅಡುಗೆ ಎಣ್ಣೆ, ಒಂದು ಕೆಜಿ ಉಪ್ಪು ಮತ್ತು ಒಂದು ಕೆಜಿ ಸಕ್ಕರೆ ಇರುತ್ತದೆ. ಇದು ಕುಟುಂಬದ ಸದಸ್ಯರ ಸಂಖ್ಯೆಯ ಆಧಾರದಲ್ಲಿ ಅರ್ಧ ಕೆಜಿ, ಒಂದು ಕೆಜಿ ಅಥವಾ ಒಂದೂವರೆ ಕೆಜಿ ಕಿಟ್ ನೀಡಲಾಗುತ್ತದೆ.






