ರಾಜ್ಯ ಸರ್ಕಾರ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ನ್ಯೂಸ್ ನೀಡಿದೆ. ಕಾನ್ಸ್ಟೇಬಲ್ನಿಂದ ಎಎಸ್ಐ (Assistant Sub Inspector) ದರ್ಜೆಯವರೆಗೆ ಇರುವ ಪೊಲೀಸ್ ಸಿಬ್ಬಂದಿಗೆ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದಂದು ವಿಶೇಷ ರಜೆಯನ್ನು ಕಡ್ಡಾಯವಾಗಿ ನೀಡಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮಹತ್ವದ ಆದೇಶ ಹೊರಡಿಸಿದ್ದಾರೆ.

ಹುಟ್ಟುಹಬ್ಬ ಅಥವಾ ವಿವಾಹ ವಾರ್ಷಿಕೋತ್ಸವದಂದು ಸಿಬ್ಬಂದಿ ಅರ್ಜಿ ಸಲ್ಲಿಸಿದರೆ, ಆ ದಿನ ಕಡ್ಡಾಯವಾಗಿ ರಜೆ ನೀಡಬೇಕು ಎನ್ನಲಾಗಿದೆ.ಅರ್ಜಿ ಸಲ್ಲಿಸಿದ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ರಜೆ ನಿರಾಕರಿಸಬಾರದು ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಇದರಿಂದ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಲು ಸಹಾಯವಾಗುತ್ತದೆ.

ಪೊಲೀಸ್ ಇಲಾಖೆಯಲ್ಲಿ ನಿರಂತರ ಒತ್ತಡದಲ್ಲಿರುತ್ತದೆ. ಹಾಗಾಗಿ ಸಿಬ್ಬಂದಿಯ ಮಾನಸಿಕ ಆರೋಗ್ಯ ಮತ್ತು ವೈಯಕ್ತಿಕ ಜೀವನಕ್ಕೆ ಗೌರವ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.ಇದರಿಂದ ಸಿಬ್ಬಂದಿಗಳ ಕಾರ್ಯಕ್ಷಮತೆ ಇನ್ನಷ್ಟು ಹೆಚ್ಚಾಗಲಿದೆ ಎನ್ನಲಾಗುತ್ತಿದೆ.






