ವೀಣಾ ಕಾಶಪ್ಪನವರ್‌ಗೆ ಸಿಹಿ ಸುದ್ದಿ ಕೊಟ್ಟ ಸಿಎಂ, ಡಿಸಿಎಂ!
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ್‌ಗೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಹಿ ಸುದ್ದಿಯೊಂದನ್ನ ನೀಡಿದ್ದಾರೆ. ವೀಣಾ ಕಾಶಪ್ಪನವರ್ ಬದಲಿಗೆ ಬಾಗಲಕೋಟೆ ಕ್ಷೇತ್ರದ ಟಿಕೆಟ್ ಸಂಯುಕ್ತಾ ಪಾಟೀಲ್ ಕೈ ಸೇರಿದ್ದಕ್ಕೆ ಅಸಮಾಧಾನಗೊಂಡಿದ್ದನ್ನು ಸರಿಪಡಿಸುವ ನಿಟ್ಟಿನಲ್ಲಿ, ಸಂಘಟನೆಯಲ್ಲಿ ಕೆಲಸ ಮಾಡುವಂತೆ ವೀಣಾಗೆ ಅವಕಾಶ ಕಲ್ಪಿಸಲಾಗಿದೆ.
ವೀಣಾ ಕಾಶಪ್ಪನವರ್‌ಗೆ ಕೆಪಿಸಿಸಿಯ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನ ನೀಡುವ ಭರವಸೆಯನ್ನು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿದ್ದು, ಇದಕ್ಕೆ ಅವರು ಕೂಡ ಸಮ್ಮತಿಯನ್ನು ಸೂಚಿಸಿದ್ದಾರೆ ಎನ್ನಲಾಗಿದೆ.
ಇನ್ನು ಹಾಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್‌ರನ್ನು ನಿಗಮ ಮಂಡಳಿಗೆ ಅಧ್ಯಕ್ಷೆ ಮಾಡಿರುವ ಕಾರಣ, ಅವರಿಂದ ತೆರವಾಗುವ ಸ್ಥಾನವನ್ನು ವೀಣಾ ಕಾಶಪ್ಪನವರ್‌ಗೆ ನೀಡುವ ತಂತ್ರ ಹೆಣೆದಿದ್ದು, ಆ ಮೂಲಕ ಬಾಗಲಕೋಟೆಯ ಕಾಂಗ್ರೆಸ್ ಬಂಡಾಯವನ್ನು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಬಗೆಹರಿಸಿದ್ದಾರೆ.
ಇತ್ತ ಈ ಭರವಸೆಯನ್ನು ಒಪ್ಪಿಕೊಂಡಿರುವ ವೀಣಾ ಕಾಶಪ್ಪನವರ್,ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಪರ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.*ವೀಣಾ ಕಾಶಪ್ಪನವರ್‌ಗೆ ಸಿಹಿ ಸುದ್ದಿ ಕೊಟ್ಟ ಸಿಎಂ, ಡಿಸಿಎಂ!* ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ್‌ಗೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಹಿ ಸುದ್ದಿಯೊಂದನ್ನ ನೀಡಿದ್ದಾರೆ. ವೀಣಾ ಕಾಶಪ್ಪನವರ್ ಬದಲಿಗೆ ಬಾಗಲಕೋಟೆ ಕ್ಷೇತ್ರದ ಟಿಕೆಟ್ ಸಂಯುಕ್ತಾ ಪಾಟೀಲ್ ಕೈ ಸೇರಿದ್ದಕ್ಕೆ ಅಸಮಾಧಾನಗೊಂಡಿದ್ದನ್ನು ಸರಿಪಡಿಸುವ ನಿಟ್ಟಿನಲ್ಲಿ, ಸಂಘಟನೆಯಲ್ಲಿ ಕೆಲಸ ಮಾಡುವಂತೆ ವೀಣಾಗೆ ಅವಕಾಶ ಕಲ್ಪಿಸಲಾಗಿದೆ. ವೀಣಾ ಕಾಶಪ್ಪನವರ್‌ಗೆ ಕೆಪಿಸಿಸಿಯ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನ ನೀಡುವ ಭರವಸೆಯನ್ನು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿದ್ದು, ಇದಕ್ಕೆ ಅವರು ಕೂಡ ಸಮ್ಮತಿಯನ್ನು ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನು ಹಾಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್‌ರನ್ನು ನಿಗಮ ಮಂಡಳಿಗೆ ಅಧ್ಯಕ್ಷೆ ಮಾಡಿರುವ ಕಾರಣ, ಅವರಿಂದ ತೆರವಾಗುವ ಸ್ಥಾನವನ್ನು ವೀಣಾ ಕಾಶಪ್ಪನವರ್‌ಗೆ ನೀಡುವ ತಂತ್ರ ಹೆಣೆದಿದ್ದು, ಆ ಮೂಲಕ ಬಾಗಲಕೋಟೆಯ ಕಾಂಗ್ರೆಸ್ ಬಂಡಾಯವನ್ನು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಬಗೆಹರಿಸಿದ್ದಾರೆ. ಇತ್ತ ಈ ಭರವಸೆಯನ್ನು ಒಪ್ಪಿಕೊಂಡಿರುವ ವೀಣಾ ಕಾಶಪ್ಪನವರ್,ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಪರ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.